ಕಲುಷಿತ ನೀರು ಕುಡಿದು 60 ಕ್ಕೂ ಹೆಚ್ಚು ಜನ ಅಸ್ವಸ್ಥ.. ಓರ್ವ ಮಹಿಳೆ ಸಾವು

ಕಲುಷಿತ ನೀರು ಕುಡಿದು 60 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಇಂದಿರಾನಗರದಲ್ಲಿ ನಡೆದಿದೆ. 

Written by - Chetana Devarmani | Last Updated : May 31, 2022, 03:37 PM IST
  • ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು 60 ಕ್ಕೂ ಹೆಚ್ಚು ಜನ ಅಸ್ವಸ್ಥ
  • ರಾಯಚೂರು ನಗರಸಭೆ ಸರಬರಾಜು ಮಾಡುವ ಕುಡಿಯುವ ನೀರು ಕಲುಷಿತ
  • ಶುದ್ದೀಕರಣ ಮಾಡದೆ ನಗರಕ್ಕೆ ಕುಡಿಯುವ ನೀರು ಸರಬರಾಜು
ಕಲುಷಿತ ನೀರು ಕುಡಿದು 60 ಕ್ಕೂ ಹೆಚ್ಚು ಜನ ಅಸ್ವಸ್ಥ.. ಓರ್ವ ಮಹಿಳೆ ಸಾವು title=
ನೀರು ಸರಬರಾಜು 

ರಾಯಚೂರು: ಕಲುಷಿತ ನೀರು ಕುಡಿದು 60 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನ ಇಂದಿರಾನಗರದಲ್ಲಿ ನಡೆದಿದೆ. ಮಲ್ಲಮ್ಮ( 40)ಮೃತ ದುರ್ದೈವಿಯಾಗಿದ್ದಾರೆ. ರಾಯಚೂರು ನಗರಸಭೆ ಸರಬರಾಜು ಮಾಡುವ ಕುಡಿಯುವ ನೀರು ಕಲುಷಿತವಾಗಿತ್ತು. ಈ ಕಲುಷಿತ ನೀರು ಕುಡಿದು ಅನೇಕ ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಇದನ್ನೂ ಓದಿ: 'ಹಿಂದುಗಳೆಲ್ಲ ಒಂದು ಎನ್ನುವ ನಿಮ್ಮ ಸಂಘದ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ?'

ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ 60 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಿರ್ಜಲೀಕರಣದಿಂದ ಖಾಸಗಿ ಆಸ್ಪತ್ರೆಗಳಲ್ಲಿಯೂ ಹಲವರನ್ನು ದಾಖಲಿಸಲಾಗಿದೆ. ಶುದ್ದೀಕರಣ ಮಾಡದೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಿದ ಕಾರಣ ಈ ರೀತಿತಾಗಿದೆ ಎಂದು ಹೇಳಲಾಗುತ್ತಿದೆ.  ಕೆಲವೆಡೆ ಕುಡಿಯುವ ನೀರಿಗೆ ಚರಂಡಿ ನೀರು ಸೇರುತ್ತಿರುವ ಆರೋಪ ಕೂಡ ಕೇಳಿ ಬಂದಿದೆ. 

ಈ ಬಗ್ಗೆ ರಿಮ್ಸ್ ಆಸ್ಪತ್ರೆ ಅಧೀಕ್ಷಕ ಡಾ.ಭಾಸ್ಕರ್ ಮಾತನಾಡಿದ್ದು, ಕಲುಷಿತ ನೀರಿನಿಂದ ವಾಂತಿ, ಭೇದಿಯಾಗುತ್ತಿದೆ. ಸುಮಾರು‌ 60 ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದಲ್ಲದೇ ಮೂವರಲ್ಲಿ ಮೂತ್ರಪಿಂಡ ಸಮಸ್ಯೆ ಎದುರಾಗಿದೆ. ಒಬ್ಬರಿಗೆ ಡಯಾಲೈಸಿಸ್ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿ ದಾಖಲಾದವರಲ್ಲಿ 23 ಮಕ್ಕಳು ಅಡ್ಮಿಟ್ ಆಗಿದ್ದಾರೆ. ಈ ಬಗ್ಗೆ ಮಾನಿಟರ್ ಮಾಡಲಾಗುತ್ತಿದೆ ಎಂದು ಹೇಳಿದರು. 

ಇದನ್ನೂ ಓದಿ: ಖಾಸಗಿ ಲೋನ್ ಆಪ್‌ಗಳನ್ನ ಬಳಸುವವರೇ ಎಚ್ಚರ.! ಹಣದ ಆಸೆಗೆ ಹೋದೀತು ಮಾನ!!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News