HD Kumaraswamy: 'ಶ್ರೀರಾಮನ ಮೇಲೆ ನಂಬಿಕೆ ಇದ್ರೆ ಕುಮಾರಸ್ವಾಮಿ ರಾಮಮಂದಿರ ದೇಣಿಗೆ ನೀಡಲಿ'

ಹಿಂದುತ್ವ ಹಾಗೂ ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಎಚ್‌ಡಿ ಕುಮಾರಸ್ವಾಮಿ ರಾಮಮಂದಿರಕ್ಕೆ ದೇಣಿಗೆ ನೀಡಲಿ.

Last Updated : Feb 16, 2021, 02:44 PM IST
  • ಹಿಂದುತ್ವ ಹಾಗೂ ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಎಚ್‌ಡಿ ಕುಮಾರಸ್ವಾಮಿ ರಾಮಮಂದಿರಕ್ಕೆ ದೇಣಿಗೆ ನೀಡಲಿ.
  • ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವಿಚಾರವಾಗಿ ಕುಮಾರಸ್ವಾಮಿಗೆ ತಪ್ಪು ಕಲ್ವನೆ ಬೇಡ ಎಂದರು
  • ಅಷ್ಟೇ ಅಲ್ಲದೆ, ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ.
HD Kumaraswamy: 'ಶ್ರೀರಾಮನ ಮೇಲೆ ನಂಬಿಕೆ ಇದ್ರೆ ಕುಮಾರಸ್ವಾಮಿ ರಾಮಮಂದಿರ ದೇಣಿಗೆ ನೀಡಲಿ' title=

ಬೆಂಗಳೂರು: ಹಿಂದುತ್ವ ಹಾಗೂ ಶ್ರೀರಾಮನ ಮೇಲೆ ನಂಬಿಕೆ ಇದ್ದರೆ ಎಚ್‌ಡಿ ಕುಮಾರಸ್ವಾಮಿ ರಾಮಮಂದಿರಕ್ಕೆ ದೇಣಿಗೆ ನೀಡಲಿ ಎಂದು ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಈ ವಿಚಾರವಾಗಿ ಕುಮಾರಸ್ವಾಮಿಗೆ ತಪ್ಪು ಕಲ್ವನೆ ಬೇಡ ಎಂದರು.

ರಾಮಮಂದಿರ(Ram Mandira)ಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ ಎಂದು ಎಚ್‌ಡಿಕೆ ಟ್ವೀಟ್ ಮಾಡಿದ್ದರು.

ಫೆ.22ರಿಂದ ಎಲ್ಲಾ ತರಗತಿಗಳನ್ನು ತೆರೆಯಲು ಸರ್ಕಾರದ ನಿರ್ಧಾರ

ಅಷ್ಟೇ ಅಲ್ಲದೆ, ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ ಆರೆಸ್ಸೆಸ್ ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. ಆರೆಸ್ಸೆಸ್(RSS)‌ ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ.ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ.ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ.ಇದು ಅಘೋಷಿತ ತುರ್ತು ಪರಿಸ್ಥಿತಿ.

Heavy Rain: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಗುಡುಗುಸಹಿತ ಭಾರಿ ಮಳೆ!

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ.ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದಿದ್ದರು. ಎಚ್‌ಡಿಕೆ ಈ ಆರೋಪಕ್ಕೆ ರೇಣುಕಾಚಾರ್ಯ(MP Renukacharya) ತಿರುಗೇಟು ನೀಡಿದ್ದಾರೆ.

Congress: 'ಪಿಎಂ ಮೋದಿ ಸ್ವಾತಂತ್ರ್ಯ ಬಂದ್ಮೇಲೆ ಹುಟ್ಟಿದ ಗಿರಾಕಿ, ನಾನು ಅದಕ್ಕೂ ಮೊದ್ಲೆ ಹುಟ್ಟಿದವನು'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News