MUDA Scam: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ(MUDA Scam)ಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯನವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು ಮಂಗಳವಾರ ವಜಾಗೊಳಿಸಿತ್ತು. ಈ ತೀರ್ಪನ್ನು ಬುಧವಾರ ಎತ್ತಿಹಿಡಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.
ಪ್ರಕರಣದ ತನಿಖೆಯ ಅಂತಿಮ ವರದಿಯನ್ನು ಮೂರು ತಿಂಗಳೊಳಗೆ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲು ನ್ಯಾಯಾಧೀಶರು ನಿರ್ದೇಶಿಸಿದ್ದಾರೆ. ಸಿಎಂ ಸಿದ್ದರಾಮಯ್ಯರ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು ಎನ್ನುವ ಮೂಲಕ ರಾಜ್ಯಪಾಲರ ಆದೇಶ ಸರಿ ಎಂದು ತೀರ್ಪು ನೀಡದ ಬೆನ್ನಲ್ಲೇ ಜನಪ್ರತಿನಿಧಿಗಳ ನ್ಯಾಯಾಲಯ ಸಹ ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿರುವ ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅವರು ಸಿದ್ದರಾಮಯ್ಯರಿಗೆ ಮಹತ್ವದ ಸಲಹೆ ನೀಡಿದ್ದಾರೆ.
ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು
ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರಾಜೀನಾಮೆ ಉದಾಹರಣೆಯೊಂದಿಗೆ ಸಿಎಂಗೆ ಮಹತ್ವದ ಸಲಹೆ ನೀಡಿರುವ ಸಂತೋಷ್ ಹೆಗ್ಡೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ. ಕೇಂದ್ರ ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದಾಗ ಲಾಲ್ ಬಹದ್ದೂರ್ ಶಾಸ್ತ್ರಿಯವರು ರಾಜೀನಾಮೆ ನೀಡಿದ್ದರು. ಅದೇ ರೀತಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವುದು ಸೂಕ್ತ. ರಾಜೀನಾಮೆ ನೀಡಬೇಕೋ ಅಥವಾ ಬೇಡವೋ ಅನ್ನೋದು ಅವರಿಗೆ ಬಿಟ್ಟಿದ್ದು. ಇಂತಹ ಗಂಭೀರ ಆರೋಪ ಕೇಳಿಬಂದಾಗ ರಾಜೀನಾಮೆ ನೀಡಬೇಕು. ಒಂದು ವೇಳೆ ರಾಜೀನಾಮೆ ನೀಡಿದ್ದರೆ ಕಾನೂನಿನಲ್ಲಿ ಯಾವುದೇ ತಪ್ಪಿಲ್ಲ. ಆದರೆ ಸಾರ್ವಜನಿಕರ ದೃಷ್ಟಿಯಲ್ಲಿ ಅವರು ರಾಜೀನಾಮೆ ನೀಡುವುದೇ ಸೂಕ್ತ ಅಂತಾ ಹೇಳಿದ್ದಾರೆ.
ಮುಡಾ ಪ್ರಕರಣದಲ್ಲಿ ಹೈಕೋರ್ಟ್ ಸಹ ಮೇಲ್ನೋಟಕ್ಕೆ ಪುರಾವೆ ಇದೆ ಎಂದು ಹೇಳಿದೆ. ಹೀಗಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ. ರಾಜೀನಾಮೆ ನೀಡುವುದು ಸಿದ್ದರಾಮಯ್ಯರಿಗೆ ಬಿಟ್ಟದ್ದು. ಯಾವ ತನಿಖಾ ಸಮಿತಿ ಉತ್ತಮವೆಂದು ನಾನು ಹೇಳಲ್ಲ, ಅದು ಸರ್ಕಾರಕ್ಕೆ ಬಿಟ್ಟ ವಿಚಾರ. ಯಾವುದೇ ತನಿಖಾ ಸಮಿತಿ ವಿಚಾರಣೆ ಮಾಡಬಹುದು. ಒಂದು ವೇಳೆ ಅವರು ಆರೋಪಿಯಲ್ಲವೆಂದು ತೀರ್ಪು ಬಂದರೆ ಮತ್ತೆ ಸಿಎಂ ಹುದ್ದೆ ಅಲಂಕರಿಸಬಹುದು. ಹೈಕೋರ್ಟ್ ತೀರ್ಪಿಗೂ ಮುನ್ನ ನಾನು ತಪ್ಪೇ ಮಾಡಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಕೋರ್ಟ್ ಮೇಲ್ನೋಟಕ್ಕೆ ಅವರು ತಪ್ಪು ಮಾಡಿರುವುದು ಕಂಡುಬಂದಿದೆ ಎಂದು ಹೇಳಿದೆ. ಹೀಗಾಗಿ ಅವರು ಹೇಳಿದ್ದು ಸರಿಯಿಲ್ಲವೆಂದು ಆಯ್ತಲ್ಲ. ಸದ್ಯ ಸಿದ್ದರಾಮಯ್ಯನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಸಂತೋಷ್ ಹೆಗ್ಡೆ ಹೇಳಿದ್ದಾರೆ.
ಇದನ್ನೂ ಓದಿ: ಲಿಂಗಾಯತ ಸ್ವಾಮೀಜಿಯೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.