ನಾವೆಲ್ಲ ಬಡ್ಡಿ ಮಕ್ಕಳು : ಮುಖ್ಯಮಂತ್ರಿ ಚಂದ್ರು

ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಗುಡುಗಿದರು.

Written by - Prashobh Devanahalli | Edited by - Krishna N K | Last Updated : Jul 22, 2023, 04:09 PM IST
  • ರಾಜ್ಯದ ಸಾಲ 5.5 ಲಕ್ಷ ಕೋಟಿ ಮುಟ್ಟಿದೆ, 35 ಸಾವಿರ ಕೋಟಿ ರೂಪಾಯಿಗಳಷ್ಟು ಕಟ್ಟಬೇಕಾಗಿದೆ.
  • ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ.
  • ಬಿಜೆಪಿ-ಕಾಂಗ್ರೆಸ್‌ ವಿರುದ್ಧ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ನಾವೆಲ್ಲ ಬಡ್ಡಿ ಮಕ್ಕಳು : ಮುಖ್ಯಮಂತ್ರಿ ಚಂದ್ರು title=

ಬೆಂಗಳೂರು : ಇಂದು ನಗರದ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ. ರಾಷ್ಟ್ರದ ಸಾಲ 175 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ರಾಜ್ಯದ ಸಾಲ 5.5 ಲಕ್ಷ ಕೋಟಿ ಮುಟ್ಟಿದೆ. 35 ಸಾವಿರ ಕೋಟಿ ರೂಪಾಯಿಗಳಷ್ಟು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.

ದೆಹಲಿ ರಾಜ್ಯದಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಉಚಿತ ವಿದ್ಯುತ್, ಉಳಿಯುವ ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ ಎಂದು ಬಣ್ಣಿಸಿದರು.

ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಬಸವರಾಜ ಬೊಮ್ಮಾಯಿ  

ಕೌಟಿಲ್ಯನ ಅರ್ಥಶಾಸ್ತ್ರ ದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, "ಗಳಿಕೆ- ಉಳಿಕೆ - ಬಳಕೆ" ಬಜೆಟ್ ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು, ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಮ್ ಆದ್ಮಿ ಪಕ್ಷದ ಗ್ಯಾರೆಂಟಿಗಳನ್ನು ಕಾಪಿ ಮಾಡಿಲ್ಲ,  ನೀಚತನದಿಂದ  ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಗಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: ವಿರೋಧಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಣಿಪುರ ಘಟನೆ ಯ ಬಗ್ಗೆ  ಆತಂಕ ವ್ಯಕ್ತಪಡಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ.  ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ. ಮುಂಬರುವ ರಾಜ್ಯದ ಜಿಲ್ಲಾ - ತಾಲೂಕು ಪಂಚಾಯಿತಿ,  ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ  ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು  ಹಾಗೂ ನಾಯಕರುಗಳು  ಹಗಲಿರುಳು  ದುಡಿಯಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು. 

ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ.ಟಿ. ನಾಗಣ್ಣ, ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರುಗಳು ಸಹ ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News