ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಸಚಿವರ ಸ್ಪಷ್ಟನೆ

ವಿಲ್ಸನ್ ಗಾರ್ಡನ್ ನಾಗ ಸಚಿವ  ಸೋಮಣ್ಣ ಅವರನ್ನು ಭೇಟಿಯಾದ ವಿಚಾರ ಮಾಧ್ಯಮಗಳಲ್ಲಿ ಸಖತ್ ಸದ್ದು ಮಾಡಿತ್ತು. ಈ ಕುರಿತಂತೆ ಮಾಧ್ಯಮ ಮಿತ್ರರಿಗೆ ಪ್ರತಿಕ್ರಿಯೆ ನೀಡಿರುವ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ, ನಾನು ಶಾಸಕನಾಗಿ 40 ವರ್ಷ ಆಯ್ತು. ನಮ್ಮ ಮನೆಗೆ ನೂರಾರು ಜನ ಬರ್ತಾರೆ. ಇವರಲ್ಲಿ ನಾಗ ಯಾರು..? ತಿಮ್ಮ ಯಾರು..? ಬೊಮ್ಮ ಯಾರು..? ನನಗೆ ಗೊತ್ತಿಲ್ಲ ಎಂದರು.

Written by - Prashobh Devanahalli | Edited by - Yashaswini V | Last Updated : Dec 1, 2022, 02:53 PM IST
  • ವಿಲ್ಸನ್ ಗಾರ್ಡನ್ ನಾಗ ಸಚಿವ ಸೋಮಣ್ಣ ಅವರನ್ನು ಭೇಟಿಯಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ವಿ. ಸೋಮಣ್ಣ
  • ನಾನು ಶಾಸಕನಾಗಿ 40 ವರ್ಷ ಆಯ್ತು. ನಮ್ಮ ಮನೆಗೆ ನೂರಾರು ಜನ ಬರ್ತಾರೆ.

    ಇವರಲ್ಲಿ ನಾಗ ಯಾರು..? ತಿಮ್ಮ ಯಾರು..? ಬೊಮ್ಮ ಯಾರು..? ನನಗೆ ಗೊತ್ತಿಲ್ಲ ಎಂದ ಸಚಿವರು
ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಸಚಿವರ ಸ್ಪಷ್ಟನೆ title=
Minister V Somanna

ಬೆಂಗಳೂರು: ರೌಡಿಶೀಟರ್ ಕಚೇರಿಗೆ ಭೇಟಿ ನೀಡಿದ್ದಾರೆಂದು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ರವರು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ವಾಸ್ತವವಾಗಿ, ವಿಲ್ಸನ್ ಗಾರ್ಡನ್ ನಾಗ ಸಚಿವ  ಸೋಮಣ್ಣ ಅವರನ್ನು ಭೇಟಿಯಾದ ವಿಚಾರ ಮಾಧ್ಯಮಗಳಲ್ಲಿ ಸಖತ್ ಸದ್ದು ಮಾಡಿತ್ತು. ಈ ಕುರಿತಂತೆ ಮಾಧ್ಯಮ ಮಿತ್ರರಿಗೆ ಪ್ರತಿಕ್ರಿಯೆ ನೀಡಿರುವ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ, ನಾನು ಶಾಸಕನಾಗಿ 40 ವರ್ಷ ಆಯ್ತು. ನಮ್ಮ ಮನೆಗೆ ನೂರಾರು ಜನ ಬರ್ತಾರೆ. ಇವರಲ್ಲಿ ನಾಗ ಯಾರು..? ತಿಮ್ಮ ಯಾರು..? ಬೊಮ್ಮ ಯಾರು..? ನನಗೆ ಗೊತ್ತಿಲ್ಲ ಎಂದರು.

ಇದನ್ನೂ ಓದಿ- ರೌಡಿ ಶೀಟರ್ ಗಳ ಸೇರ್ಪಡೆ ವಿಚಾರ : ಬಿಜೆಪಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ : ಡಿಕೆಶಿ

ವಿಧಾನಸೌಧದಲ್ಲಿಂದು ಮಾಧ್ಯಮ ಮಿತ್ರರನ್ನು ಉದ್ದೇಶಿಸಿ ಮಾತನಾಡಿದ ಸಚಿವ ವಿ.ಸೋಮಣ್ಣ,  50 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಸಾವಿರಾರು ಜನ ನನ್ನ ಮನೆಯ ಹತ್ತಿರ ಬಂದು ಹೋಗಿದ್ದಾರೆ. ಅದರಲ್ಲಿ ನಾಗ ಯಾರು, ತಿಮ್ಮ ಯಾರು ಅನ್ನೋದು ನನಗೆ ಗೊತ್ತಿಲ್ಲ. ನಾಗ ಎಂಬುವವರನ್ನು ನಾನೂ ನೋಡಿಲ್ಲ. ಒಂದು ಗಂಟೆಯಲ್ಲ, ಒಂದು ನಿಮಿಷವೂ ನಾನು ಮಾತನಾಡಿಲ್ಲ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಆ ತರಹದ ಜೀವನ ಮಾಡಿಲ್ಲ. ಸಾರ್ವಜನಿಕ ರಸ್ತೆ ಎಂದ ಮೇಲೆ ಯಾರ್ಯಾರೋ ಓಡಾಡುತ್ತಾರೆ. ಅದಕ್ಕೆ ನಾನು ಹೇಗೆ ಹೊಣೆಯಾಗಲು ಸಾಧ್ಯ.  ಒಳ್ಳೆಯವರನ್ನೂ ರಸ್ತೆಗೆ ಕರೆ ತಂದು ನಿಲ್ಲಿಸುವ ಕೆಲಸ ಮಾಡಬೇಡಿ ಎಂದು ಹೇಳಿದರು.

ಇದನ್ನೂ ಓದಿ- ಗಡಿ ವಿವಾದ: ರಾಜ್ಯದ ನಿಲುವು ಸಂವಿಧಾನಬದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರಾಜಕಾರಣದಲ್ಲಿ 11 ಚುನಾವಣೆ ಎದುರಿಸಿದ್ದೇನೆ. ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ. ಅದರ ಅವಶ್ಯಕತೆಯೂ ನನಗಿಲ್ಲ. ನಮ್ಮ ವಯಸ್ಸು, ನಮ್ಮ ಸೇವೆಯನ್ನು ಮಾಧ್ಯಮ ಸ್ನೇಹಿತರೂ ಒಮ್ಮೆ ಅವಲೋಕಿಸಿಕೊಳ್ಳಬೇಕು.  ಆರೋಪ ಮಾಡುವ ಮೊದಲು ನಮ್ಮ ರಾಜಕೀಯ ಇತಿಹಾಸವನ್ನು ನೋಡಬೇಕು. ಸುಮ್ಮನೆ ಸುಳ್ಳು ಆರೋಪ ಮಾಡಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಬೇಡಿ. ದಯಮಾಡಿ ಇಂತಹ ಸುದ್ದಿಯನ್ನು ಬಿತ್ತರಿಸುವಾಗ ನಮ್ಮ ಪೂರ್ವಾಪರ ತಿಳಿದುಕೊಳ್ಳಿ ಎಂದು ಮಾಧ್ಯಮ ಮಿತ್ರರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಸಚಿವರು ಇದೇ ವೇಳೆ ಮನವಿ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News