ಬೆಂಗಳೂರು: ನನ್ನದೂ ಸೇರಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಇಂದಿಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಪೋನು ಸೇರಿದಂತೆ ಅನೇಕ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಇದೇ ರೀತಿ ಮುಂದುವರೆದರೆ ಪರಿಣಾಮ ನೆಟ್ಟಗಿರಲ್ಲ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.
ಮುಂದುವರೆದು ಮಾತನಾಡಿದ ಅವರು, ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಬಿಜೆಪಿ ಸೇರ್ಪಡೆ ಬಗ್ಗೆ ಒಲವಿದೆ. ಆದರೆ, ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಹಾಗೂ ಚರ್ಚೆಯೂ ಸಹ ನಡೆದಿಲ್ಲ ಎಂದರು. ಮಾಜಿ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇರಿದಂತೆ ಹಲವು ಅಧಿಕಾರಿಗಳು ಕೂಡ ರಾಜಕೀಯ ಪ್ರವೇಶದ ಬಗ್ಗೆ ಸಂಪರ್ಕದಲ್ಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.