ಮೈಸೂರು ಗ್ಯಾಂಗ್ ರೇಪ್ ಪ್ರಕರಣ: 85 ಗಂಟೆಗಳ ಬಳಿಕ ಐವರು ಕಾಮುಕರು ಅಂದರ್..!

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದರು.

Written by - Puttaraj K Alur | Last Updated : Aug 28, 2021, 11:55 AM IST
  • ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಐವರು ಕಾಮುಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ
  • 85 ಗಂಟೆಗಳ ಕಾಲ ಯಶಸ್ವಿ ಕಾರ್ಯಾಚರಣೆ ಮೂಲಕ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
  • ಸತ್ಯಮಂಗಲ ಮೂಲದ ಐವರು ಆರೋಪಿಗಳು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು
ಮೈಸೂರು ಗ್ಯಾಂಗ್ ರೇಪ್ ಪ್ರಕರಣ: 85 ಗಂಟೆಗಳ ಬಳಿಕ ಐವರು ಕಾಮುಕರು ಅಂದರ್..! title=
ತಮಿಳುನಾಡಿನಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ (Photo Courtesy: @Zee News)

ಮೈಸೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣ(Mysore Gangrape Case) ಸಂಬಂಧ ಐವರು ಕಾಮುಕರು ಪೊಲೀಸರ ಬಲೆಗೆ ಬಿದ್ದಿದ್ದಾರೆ. 85 ಗಂಟೆಗಳ ಕಾಲ ಯಶಸ್ವಿ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಮೂಹಿಕ ಅತ್ಯಾಚಾರವೆಸಗಿದ ಬಳಿಕ ಆರೋಪಿಗಳು ಎಸ್ಕೇಪ್ ಆಗಿದ್ದರು. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾರೆಂದು ತಿಳಿದುಬಂದಿದೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣ(Mysore Gangrape Case)ದ ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದರು. ತಮಿಳುನಾಡಿಗೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಸತ್ಯಮಂಗಲ ಮೂಲದ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇವರೆಲ್ಲರೂ ಕೂಲಿ ಕಾರ್ಮಿಕರೆಂದು ತಿಳಿದುಬಂದಿದೆ. ಆರೋಪಿಗಳನ್ನು ಬಂಧಿಸಿ ಪೊಲೀಸರು ಮೈಸೂರಿಗೆ ಕರೆತಂದಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: Rare Neelakurinji Flowers : ರಾಜ್ಯದಲ್ಲಿ ಅರಳಿದ 12 ವರ್ಷಗಳಿಗೊಮ್ಮೆ ಅರಳುವ ಅಪರೂಪದ 'ನೀಲಕುರಿಂಜಿ ಹೂವುಗಳು' 

ಆರೋಪಿಗಳನ್ನು ಬಂಧಿಸಿದ್ದಕ್ಕೆ ಸಿಎಂ ಪ್ರತಿಕ್ರಿಯೆ

ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಬಳಿಕ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ( Basavaraj Bommai) ಪೊಲೀಸರಿಗೆ ಯಶಸ್ವಿ ಕಾರ್ಯಾಚರಣೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುವಂತೆ ಪೊಲೀಸರಿಗೆ ನಿರ್ದೇಶನ ನೀಡಿದ್ದೆ. ಹೀಗಾಗಿ 6 ವಿಶೇಷ ತಂಡಗಳನ್ನು ರಚಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಹಿಂದೆಯೂ ಕರ್ನಾಟಕ ಪೊಲೀಸರು ಅತ್ಯುತ್ತಮ ಕೆಲಸ ಮಾಡಿದ್ದರು. ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನು ಶೀಘ್ರವೇ ಬಂಧಿಸಿದ್ದರು ಅಂತಾ ಸಿಎಂ ತಿಳಿಸಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ(Araga Jnanendra) ಮಾತನಾಡಿ, ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆಂದು ಹೇಳಿದ್ದಾರೆ. ವಿಶೇಷ ತಂಡಗಳನ್ನು ರಚಿಸುವ ಮೂಲಕ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮೈಸೂರಿಗೆ ಕರೆತಂದಿದ್ದಾರೆಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: JC Madhu Swamy : ರಾಜ್ಯದಲ್ಲಿ 'ಮಾನಸಿಕ ಆರೋಗ್ಯ ರಕ್ಷಣೆ ಕಾಯ್ದೆ' ಜಾರಿಗೆ ಕ್ಯಾಬಿನೆಟ್ ಅನುಮೋದನೆ! 

ಕಾಮುಕರಿಂದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಹೀನ ಕೃತ್ಯ

ಆಗಸ್ಟ್ 24ರ ಸಂಜೆ ಸ್ನೇಹಿತ ಜೊತೆಗೆ ಚಾಮುಂಡಿ ಬೆಟ್ಟ(Chamundi Hill)ದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಪ್ರದೇಶಕ್ಕೆ ತೆರಳಿದ್ದ ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿ ಮೇಲೆ ಐದಾರು ಕಾಮುಕರ ತಂಡ ಹೀನ ಕೃತ್ಯ ಎಸಗಿತ್ತು.

ದುಷ್ಕರ್ಮಿಗಳ ತಂಡ ಮೊದಲು ಯುವಕನ ಮೇಲೆ ಹಲ್ಲೆ ನಡೆಸಿ ನಂತರ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ(Gang Rape) ನಡೆಸಿದ್ದರು. ವಿದ್ಯಾರ್ಥಿನಿಗೂ ಥಳಿಸಿದ್ದ ಕಾಮುಕರು ಇಳಿಸಂಜೆ ಹೊತ್ತಲ್ಲಿ ಚಾಮುಂಡಿ ಬೆಟ್ಟದ ಬಳಿ ದುಷ್ಕೃತ್ಯವೆಸಗಿದ್ದರು. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀನಕೃತ್ಯವೆಸಗಿದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News