Maneka Gandhi: ಮೇನಕಾ ಗಾಂಧಿಗೆ ನೋಟಿಸ್ ನೀಡಿದ ಮೈಸೂರು ಕೋರ್ಟ್‌..!

ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಮಾಜಿ ರಾಜ್ಯಸಭಾ ಸದಸ್ಯೆ ಮೇನಕಾ ಗಾಂಧಿ ಅವರಿಗೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌

Last Updated : Feb 7, 2021, 08:55 PM IST
  • ಮಾಜಿ ರಾಜ್ಯಸಭಾ ಸದಸ್ಯೆ ಮೇನಕಾ ಗಾಂಧಿ ಅವರಿಗೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌
  • ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಮಾಜಿ ರಾಜ್ಯಸಭಾ ಸದಸ್ಯೆ ಮೇನಕಾ ಗಾಂಧಿ ಅವರಿಗೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌
  • ಅನಿಮಲ್‌ ವೆಲ್‌ಫೇರ್‌ ಬೋರ್ಡ್‌ ಆಫ್‌ ಇಂಡಿಯಾದ ಸದಸ್ಯ ಡಾ.ಎಸ್‌.ಕೆ.ಮಿತ್ತಲ್‌ ಅವರು ತಮಗೆ ಮಾನಹಾನಿ ಮಾಡಲಾಗಿದೆ ಎಂದು ಕೋರ್ಟ್‌ ಮೊರೆ
Maneka Gandhi: ಮೇನಕಾ ಗಾಂಧಿಗೆ ನೋಟಿಸ್ ನೀಡಿದ ಮೈಸೂರು ಕೋರ್ಟ್‌..! title=

ಮೈಸೂರು: ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಮಾಜಿ ರಾಜ್ಯಸಭಾ ಸದಸ್ಯೆ ಮೇನಕಾ ಗಾಂಧಿ ಅವರಿಗೆ ಮೈಸೂರಿನ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿದೆ.

ಮೈಸೂರಿನ ನಿವಾಸಿ, ಅನಿಮಲ್‌ ವೆಲ್‌ಫೇರ್‌ ಬೋರ್ಡ್‌ ಆಫ್‌ ಇಂಡಿಯಾದ ಸದಸ್ಯ ಡಾ.ಎಸ್‌.ಕೆ.ಮಿತ್ತಲ್‌ ಅವರು ತಮಗೆ ಮಾನಹಾನಿ ಮಾಡಲಾಗಿದೆ ಎಂದು ಕೋರ್ಟ್‌ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಮೇನಕಾ ಗಾಂಧಿ(Maneka Gandhi) ಅವರಿಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದು, ಮಾ.1ಕ್ಕೆ ವಿಚಾರಣೆಯನ್ನು ಮುಂದೂಡಿದೆ.

BJP: ಬಿಎಸ್ ವೈ  ಸಂಪುಟದ ಮತ್ತೋರ್ವ ಸಚಿವರಿಂದ ಖಾತೆ ಬಗ್ಗೆ ಅಸಮಾಧಾನ!

ಮಿತ್ತಲ್‌ ಅವರು ಬೋರ್ಡ್‌ ಸದಸ್ಯರಾಗಿದ್ದು, ಕರ್ನಾಟಕ ಮತ್ತು ಕೇರಳ ರಾಜ್ಯ ಉಸ್ತುವಾರಿ ಹೊತ್ತಿದ್ದರು. ಈ ವೇಳೆ ಕಸಾಯಿಖಾನೆ ಭೇಟಿ ಸೇರಿ ಸಾಕಷ್ಟು ಹಲವು ಕಾರ್ಯಗಳಲ್ಲಿ ಮಿತ್ತಲ್‌ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಿಲ್ಲ ಎಂದು ಮೇನಕಾ ಗಾಂಧಿ ಆರೋಪಗಳನ್ನು ಮಾಡಿದ್ದರು. ಈ ಸಂಬಂಧ ಅಂದಿನ ಕೇಂದ್ರದ ಪರಿಸರ ಸಚಿವ ಡಾ.ಹರ್ಷವರ್ಧನ್(Dr Harsh Vardhan)‌ ಅವರಿಗೆ ಪತ್ರವನ್ನು ಸಹ ಬರೆದಿದ್ದರು.

"ಒಂದು ವೇಳೆ ಕುವೆಂಪು ಬದುಕಿದ್ದರೆ ಈ ಸರ್ಕಾರ ಅವರನ್ನು ದೇಶದ್ರೋಹಿಗಳ ಸಾಲಿನಲ್ಲಿ ನಿಲ್ಲಿಸುತಿತ್ತು"

ಈ ಪತ್ರದಲ್ಲಿ ಮಂಡಳಿಯ ಸದಸ್ಯರ ವಿರುದ್ಧ ಆರೋಪ ಮಾಡಿದ್ದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ಎಸ್‌.ಕೆ.ಮಿತ್ತಲ್‌ , ಮೇನಕಾ ಗಾಂಧಿ ಅವರಿಗೆ ಪತ್ರ ಬರೆದು ಸ್ಪಷ್ಟನೆ ನೀಡಿದ್ದರು. ಆದರೂ ಕಿವಿಗೊಡದೆ, ಆರೋಪ ಮಾಡುವುದನ್ನು ಮುಂದುವರಿಸಿದ್ದರು. ಇದರಿಂದ ಬೇಸತ್ತ ಮಿತ್ತಲ್‌ ಅವರು ಮೈಸೂರಿನ ಜೆಎಂಎಫ್‌ಸಿ ನ್ಯಾಯಾಲಯ(JMFC Court)ದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

Taluk Panchayat: ರಾಜ್ಯದಲ್ಲಿ ತಾಲೂಕು ಪಂಚಾಯತ್ ರದ್ಧತಿ : ಸಚಿವರಿಂದ ಸ್ಪಷ್ಟನೆ..!

ಆದರೆ, ನ್ಯಾಯಾಲಯವು ಅವರ ಅರ್ಜಿಯನ್ನು ವಜಾ ಮಾಡಿತ್ತು. ಮತ್ತೆ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮೊರೆ ಹೋದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಪ್ರಕರಣ ದಾಖಲಿಸಿಕೊಂಡು ಮೇನಕಾ ಗಾಂಧಿ ಅವರಿಗೆ ನೋಟಿಸ್‌ ಜಾರಿಗೊಳಿಸಿದೆ ಎಂದು ಮಿತ್ತಲ್‌ ಪರ ವಕೀಲ ಎಚ್‌.ಬಿ.ಪ್ರಭು ತಿಳಿಸಿದ್ದಾರೆ.

Ram Mandir: ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ '₹ 1 ಕೋಟಿ' ಹೆಚ್ಚು ದೇಣಿಗೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News