"ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಲೋದಿಲ್ಲ : ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ"

ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಮಮಂತ್ರ ಸಾಲುವುದಿಲ್ಲ. ಪ್ರತಿಯೊಬ್ಬರೂ ಪಕ್ಷದ ಸಂಘಟನೆ,ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

Written by - RACHAPPA SUTTUR | Edited by - Manjunath N | Last Updated : Apr 17, 2022, 12:31 AM IST
  • ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂಬ ಸಂದೇಶವನ್ನು ಬಿಎಸ್ವೈ ಹಾಗೂ ಇತರರಿಗೂ ರವಾನಿಸಿದ್ದಾರೆ ಎಂಬ‌ ಮಾಹಿತಿಯಿದೆ.
"ಚುನಾವಣೆ ಗೆಲ್ಲಲು ಮೋದಿ ಮಂತ್ರ ಸಾಲೋದಿಲ್ಲ : ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ" title=

ಹೊಸಪೇಟೆ: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಧಾನಿ ನರೇಂದ್ರ ಮೋದಿ ಅವರ ನಾಮಮಂತ್ರ ಸಾಲುವುದಿಲ್ಲ. ಪ್ರತಿಯೊಬ್ಬರೂ ಪಕ್ಷದ ಸಂಘಟನೆ,ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಕ್ಷದ ನಾಯಕರು ಹಾಗೂ ಪದಾಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಜ್ಯ ಕಾರ್ಯಕಾರಿಣಿ ಬೈಠಕ್ ನಲ್ಲಿ ದಿಕ್ಸೂಚಿ ಭಾಷಣ ಮಾಡಿರುವ ಅವರು, ವಿಶ್ವದಲ್ಲಿ ಭಾರತದ ಕುರಿತು ಒಳ್ಳೆಯ ಅಭಿಪ್ರಾಯ ಮೂಡಲು ಪ್ರಧಾನಿ ನರೇಂದ್ರ ಮೋದಿಯವರು ನಾಯಕತ್ವ ಕಾರಣ.ಅವರ ವಿದೇಶಾಂಗ ನೀತಿಯಿಂದ ವಿಶ್ವವೇ ಭಾರತವನ್ನು ತಿರುಗಿ ನೋಡುವಂತೆ ಮಾಡಿದೆ.ಆದರೆ,ಮುಂಬರುವ ಚುನಾವಣೆಯನ್ನು ಎದರುಸಿಸಲು ಕೇವಲ ಮೋದಿ ಹೆಸರು ಹೇಳಿದರೆ ಗೆದ್ದು ಬರುತ್ತೇನೆಂಬ ಭ್ರಮೆಯಿಂದ ಅಭ್ಯರ್ಥಿಗಳು, ಮುಖಂಡರು ಹೊರ ಬಂದು ಚುನಾವಣೆ ಗೆಲ್ಲಲು ಪ್ರಯತ್ನಿಸಬೇಕು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್. ಸಂತೋಷ್ ನೇಮಕ

ಪ್ರತಿ ವಿಧಾನಸಭಾ  ಕ್ಷೇತ್ರದಲ್ಲಿರುವ ಲೋಪಗಳು ಅದನ್ನು ಸರಿಪಡಿಸಲು ಇರುವ ಮಾರ್ಗಗಳನ್ನು ಈಗಿನಿಂದಲೆ ಪತ್ತೆ ಹಚ್ಚಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದ್ದಾರೆ.ಪಕ್ಷದ ಪ್ರಭಾರಿಗಳು ಮತ್ತು ಸಹ ಪ್ರಭಾರಿಗಳು ಒಂದು ತಿಂಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಇರುವ ವೀಕ್ ನೆಸ್ ಗಳನ್ನು ಪತ್ತೆ ಹಚ್ಚಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಆಡಳಿತ ವಿರೋಧಿ ಅಲೆ ಎದುರಿಸಬೇಕು :

ಮುಂಬರುವ ವಿಧಾನಸಭೆ ಚುನಾವಣೆ ಎದುರಿಸಲು ಆಡಳಿತ ವಿರೋಧಿ ಅಲೆ ಎದುರಿಸಬೇಕು. ಪಂಚರಾಜ್ಯ ಚುನಾವಣೆಗಳಲ್ಲಿ ಆಕಷ್ಟು ಆಡಳಿತ ವಿರೋಧಿ ಅಲೆಯಿತ್ತು ಆದರೆ,ಅದನ್ನು ಗೆಲುವಾಗಿ ಪರಿಣಮಿಸುವಲ್ಲಿ ಪಕ್ಷ ಯಶಸ್ವಿಯಾಯಿತು. ಆಡಳಿತ ವಿರೋಧಿ ಅಲೆಯನ್ನು ಎದುರಿಸಿ ಗೆಲ್ಲುವ ರೀತಿ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ನಂತರ ಹೊಸ ಕಾರ್ಯತಂತ್ರ ರೂಪಿಸಲು ಬಿಜೆಪಿ ಸಜ್ಜು

ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ : 

ಇದೇ ಸಂದರ್ಭದಲ್ಲಿ ಸಂತೋಷ್ ಅವರು ಪಕ್ಷದಲ್ಲಿ ಇನ್ನು ಮುಂದೆ ಕುಟುಂಬ ರಾಜಕಾರಣಕ್ಕೆ ಪಕ್ಷದಲ್ಲಿ ಅವಕಾಶವಿಲ್ಲ ಎನ್ನುವುದನ್ನು ಸಭೆಯಲ್ಲಿ ಒತ್ತಿ ಒತ್ತಿ ಹೇಳಿದ್ದಾರೆ.ಆ ಮೂಲಕ ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿಯೂ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂಬ ಸಂದೇಶವನ್ನು ಬಿಎಸ್ವೈ ಹಾಗೂ ಇತರರಿಗೂ ರವಾನಿಸಿದ್ದಾರೆ ಎಂಬ‌ ಮಾಹಿತಿಯಿದೆ.

ಶಿಸ್ತು ಮೀರಿದರೆ ಸಹಿಸುವುದಿಲ್ಲ : ಪಕ್ಷದಲ್ಲಿ ಅಶಿಸ್ತು , ಬಂಡಾಯ,‌ ಉಡಾಫೆ ಪ್ರದರ್ಶಿಸುವವರನ್ನು  ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸಂತೋಷ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದ್ದು, ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು, ಶಾಸಕರು,ಸಚಿವರು, ಮುಖ್ಯಮಂತ್ರಿ ಯಾರೇ ಆಗಿದ್ದರೂ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವಂತೆ ನಡೆದುಕೊಂಡರೆ ಪಕ್ಷ ಸಹಿಸುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.ಆಮೂಲಕ ಶಾಸಕರು,ಸಚಿವರು,ಮುಖಂಡರು ಎಚ್ಚರಿಕೆಯಿಂದ ಇರಬೇಕೆಂದು‌ ತಿಳಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News