ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯ

Lok Sabha Elections: ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Written by - Puttaraj K Alur | Last Updated : Apr 22, 2024, 11:07 PM IST
  • ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು
  • ಹಿಂದೂಗಳ ಮಂಗಳಸೂತ್ರ ತೆಗೆದು ಮುಸ್ಲಿಮರಿಗೆ ನೀಡುತ್ತಾರೆನ್ನುವುದು ಅವರ ಸ್ಥಾನಕ್ಕೆ ಗೌರವ ತರುವ ಮಾತಲ್ಲ
  • ದೇಶದ ಪ್ರಧಾನಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು
ಮೋದಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು: ಸಿಎಂ ಸಿದ್ದರಾಮಯ್ಯ title=
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ರಾಜಸ್ಥಾನದ ಬನ್ಸ್​ವಾರಾದಲ್ಲಿ ಭಾನುವಾರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲ್ಯವನ್ನು ಮುಸ್ಲಿಂಮರಿಗೆ ಕೊಡುತ್ತಾರೆಂಬ ಪ್ರಧಾನಿ ಮೋದಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.  

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯನವರು, ʼಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವ ಮಾತಲ್ಲ. ದೇಶದ ಪ್ರಧಾನಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದುʼ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: Loksabha Election : ಚುನಾವಣಾ ಪ್ರಚಾರದಲ್ಲಿ ಶಾರುಖ್ ಖಾನ್! ಯಾವ ಪಕ್ಷದ ಪರ ಇವರ ನಡೆ ?

ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂತಹ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲವೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಸಮಾನವಾಗಿ ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಗೆದ್ದರೆ ನಿಮ್ಮ ಮಂಗಳಸೂತ್ರ ಸುರಕ್ಷಿತವಾಗಿರಲ್ಲ: ಪ್ರಧಾನಿ ಮೋದಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News