ಹುಬ್ಬಳ್ಳಿಯ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ

 ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 

Written by - Manjunath N | Last Updated : Dec 5, 2023, 04:02 PM IST
  • ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ.
  • ಪರಸ್ಪರ ಪ್ರೀತಿ , ವಿಶ್ವಾಸ ಮತ್ತು ಬಾಂದವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ ಎಂದು ಮೆಚ್ಚುಗೆ ಸೂಚಿಸಿದರು.
 ಹುಬ್ಬಳ್ಳಿಯ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ  title=
file photo

ಹುಬ್ಬಳ್ಳಿ: ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. 

ಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ.ಹುಟ್ಟುವಾಗ ವಿಶ್ವ ಮಾನವರಾಗಿರುವ ಎಲ್ಲರೂ ಕೊನೆಯವರೆಗೂ ವಿಶ್ವ ಮಾನವರಾಗಿಯೇ ಉಳಿಯಬೇಕು ಎಂದು ಹೇಳಿದರು.

ಇದನ್ನೂ ಓದಿ: 35KM ಮೈಲೇಜ್ ನೀಡುವ 5 ಸೀಟರ್ ಕಾರು: ಅದ್ಭುತ ವೈಶಿಷ್ಟ್ಯದ ಜೊತೆ ಅತೀ ಕಡಿಮೆ ಬೆಲೆಯಲ್ಲಿ ಲಭ್ಯ- ಖರೀದಿಗೆ ಇದು ಬೆಸ್ಟ್ ಟೈಂ

ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ.ಪರಸ್ಪರ ಪ್ರೀತಿ , ವಿಶ್ವಾಸ ಮತ್ತು ಬಾಂದವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ ಎಂದು ಮೆಚ್ಚುಗೆ ಸೂಚಿಸಿದರು.

ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, "ಇವ ನಮ್ಮವ ಇವ ನಮ್ಮವ" ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಷದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು.

ಇದನ್ನೂ ಓದಿ: 15ನೇ ವಯಸ್ಸಿಗೆ ಓಡಿ ಹೋದ ಕಿರುತೆರೆಯ ಖ್ಯಾತ ನಟಿ.. ಮದುವೆಗೂ ಮುನ್ನ ಪ್ರೆಗ್ನೆಂಟ್!!

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News