Neha Murder Case : ನೇಹಾ ಮನೆಗೆ "ಒಳ್ಳೆ ಹುಡುಗ ಪ್ರಥಮ" ಭೇಟಿ

Neha murder case : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಹಿನ್ನೆಲೆ ಚಿತ್ರರಂಗದ ನಟ ನಟಿಯರು ಆಕ್ರೋಶ ವ್ಯಕ್ತ ಪಡಿಸುತ್ತಲೇ ಇದ್ದಾರೆ.

Written by - Zee Kannada News Desk | Last Updated : Apr 21, 2024, 12:52 PM IST
  • ಈ ಪ್ರಕರಣಕ್ಕೆ ತಕ್ಕಂತೆ ಆರೋಪಿಗೆ ಯಾವ ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ.
  • ಸೋಷಿಯಲ್ ಮೀಡಿಯಾಗಳಲ್ಲಿ ವಿವಿಧ ರೀತಿಯ ವ್ಯಕ್ತವಾಗುತ್ತಲೇ ಇದ್ದು, ಕಾವು ಏರುತ್ತಲೇ ಇದೆ.
  • ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​​ ಅವರೂ ಈ ಕುರಿತು ಟ್ವಿಟರ್​ ಮೂಲಕ ಧ್ವನಿ ಎತ್ತಿದ್ದಾರೆ.
Neha Murder Case :  ನೇಹಾ ಮನೆಗೆ "ಒಳ್ಳೆ ಹುಡುಗ ಪ್ರಥಮ" ಭೇಟಿ title=

Olle huduga pratham visits neha house : ಹುಬ್ಬಳ್ಳಿ ವಿದ್ಯಾನಗರದ ಬಿವಿಬಿ ಕಾಲೇಜ್‌ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ದಿನದಿಂದ ದಿನಕ್ಕೆ ಹೆಚ್ಚು ಕಾವು ಪಡೆದುಕೊಳ್ಳುತ್ತಿದೆ. ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಅಂತ ಕರುನಾಡಿನ ಜನತೆ ಒತ್ತಾಯ ಮಾಡುತ್ತಿದ್ದಾರೆ. 

ಇದನ್ನು ಓದಿ : ಮೋದಿಯವರು ಕರ್ನಾಟಕಕ್ಕೆ ಕೊಟ್ಟಿರುವುದು ಚೊಂಬು: ಡಿಸಿಎಂ ಡಿ.ಕೆ ಶಿವಕುಮಾರ್

ಹಾ ಹತ್ಯೆ ಪ್ರಕರಣ ಸಂಬಂಧಿಸಿ ಈಗಾಗಲೇ ಸೋಷಿಯಲ್ ಮೀಡಿಯಾಗಳ ಮೂಲಕ ಧ್ವನಿ ಎತ್ತಿದ್ದಾರೆ ಸ್ಯಾಂಡಲ್​ವುಡ್ ಸೆಲೆಬ್ರಿಟಿಗಳು. ಬಿಗ್​​ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್ ಅವರೂ ಈ ಕುರಿತು ಈಗಾಗಲೇ ಧ್ವನಿ ಎತ್ತಿದ್ದಾರೆ. ಈಗ ನಟ ಪ್ರಥಮ್ ಅವರು ಇಂದು ಏಪ್ರಿಲ್ 21ರಂದು ನೇಹಾ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. 

ಚಿತ್ರರಂಗದ ನಟ ನಟಿಯರಾದ ರಿಷಬ್ ಶೆಟ್ಟಿ , ರಚಿತಾ ರಾಮ್, ಧ್ರುವ ಸರ್ಜಾ, ಸೇರಿದಂತೆ ಹಲವರು ಈ ಕೃತ್ಯದ ಕುರಿತು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಇದೀಗ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ ಈ ಕುರಿತಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ ಮತ್ತು ಕಣ್ಣು ಮುಚ್ಚಿದರೂ ನಿಮ್ಮ ಸಾವು ಕಾಡುತ್ತಿದೆ;ಹುಬ್ಬಳ್ಳಿಯ # justicefornehahiremat ರವರ ಕೊಂದ ಭಯೋತ್ಪಾದಕನಿಗೆ ಗಲ್ಲು ಶಿಕ್ಷೆಯಾಗಬೇಕು;ನಾಳೆ ಹುಬ್ಬಳ್ಳಿಯ ನೇಹಾ ರವರ ಮನೆಗೆ ಭೇಟಿ ನೀಡಲಿದ್ದೇನೆ ಎಂದು ಬರೆದು ಕೊಂಡಿದ್ದಾರೆ. 

ರಾಜ್ಯಾದ್ಯಂತ ನೇಹಾ ಹಿರೇಮಠ ಸಾವಿಗೆ ನ್ಯಾಯ ಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ. ಈ ವೇಳೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಕೂಡಾ ನೇಹಾ ಪರ ಧ್ವನಿ ಎತ್ತಿದ್ದು ಸಂತ್ರಸ್ತೆ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗಲಿ ಎಂದು ಕೇಳಿ ಕೊಳ್ಳುತ್ತಿದ್ದಾರೆ. ಧ್ರುವ ಸರ್ಜಾ, ದರ್ಶನ್, ರಚಿತಾ ರಾಮ್, ಶರಣ್ಯ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಖ್ಯಾತ ನಟ, ನಟಿಯರು ನೇಹಾ ಕೊಲೆ ಪ್ರಕರಣ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಧ್ವನಿ ಎತ್ತಿದ್ದಾರೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್​​ ಅವರೂ ಈ ಕುರಿತು ಟ್ವಿಟರ್​ ಮೂಲಕ ಧ್ವನಿ ಎತ್ತಿದ್ದಾರೆ.

ಇದನ್ನು ಓದಿ : ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ

ಸೋಷಿಯಲ್ ಮೀಡಿಯಾಗಳಲ್ಲಿ ವಿವಿಧ ರೀತಿಯ ವ್ಯಕ್ತವಾಗುತ್ತಲೇ ಇದ್ದು, ಕಾವು ಏರುತ್ತಲೇ ಇದೆ. ಈ ಪ್ರಕರಣಕ್ಕೆ ತಕ್ಕಂತೆ ಆರೋಪಿಗೆ ಯಾವ ರೀತಿಯಲ್ಲಿ ಶಿಕ್ಷೆಯಾಗುತ್ತದೆ ಎಂದು ಎಲ್ಲರೂ ಕಾಯುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News