ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ: ಐಟಿಐ, ಡಿಪ್ಲೊಮೊ ಕೋರ್ಸ್ ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಅರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ

Written by - Prashobh Devanahalli | Last Updated : Jun 22, 2024, 03:33 PM IST
    • ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆ
    • 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿ
    • ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತೆಗೆದುಕೊಂಡ ದಿಟ್ಟ ನಿರ್ಧಾರ
ಉದ್ಯೋಗ  ಕ್ರಾಂತಿಗೆ ಹೊಸ ಮುನ್ನುಡಿ: ಐಟಿಐ, ಡಿಪ್ಲೊಮೊ ಕೋರ್ಸ್ ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ title=
Job Revolution

ಬೆಂಗಳೂರು:  ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರ ದೇಶಗಳಲ್ಲಿ ಉದ್ಯೋಗ ಒದಗಿಸುವ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೊವೆನಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ  ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಯಶಸ್ವಿಯಾಗಿದೆ.

ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ತೆಗೆದುಕೊಂಡ ದಿಟ್ಟ ನಿರ್ಧಾರದಿಂದಾಗಿ ಉದ್ಯೋಗವಿಲ್ಲದೆ ಕೆಲಸ ಅರಸುತ್ತಿದ್ದ ಯುವಕರು ಇದೀಗ ವಿದೇಶದಲ್ಲಿ ಕೈತುಂಬಾ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯ ರೂಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ವ್ಯಕ್ತಿಯ ಖಾಸಗಿ ಭಾಗಕ್ಕೆ ಕಚ್ಚಿದ ಹಾವು..! ಮುಂದೇನಾಯ್ತು.. ವಿಡಿಯೋ ನೋಡಿ..

ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆ ಮಾತ್ರವಲ್ಲದೆ ಹೊರರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿ ವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರ ಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇ ನಿಗಾವಹಿಸುತ್ತಾರೆ.

ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟು ಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆಕಿಯಾ ರಾಷ್ಟ್ರವು ಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಡಾ.ಶರಣಪ್ರಕಾಶ್  ಪಾಟೀಲ್ ಅವರು ತಮ್ಮ ಅಧಿಕಾರಿಗಳ ತಂಡವನ್ನು ಸಿದ್ಧವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ  ಜೊತೆ ಒಡಂಬಡಿಕೆ ಮಾಡಿಕೊಂಡರು.

ಸ್ಲೊವೆಕಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿ (54 ಮಂದಿ ಐಟಿಐ, 31 ಮಂದಿ ಡಿಪ್ಲೊಮೊ)ಗಳನ್ನು ಆ ದೇಶಕ್ಕೆ ಬೀಳ್ಕೊಡಲಾಗಿದೆ

ಉಚಿತ ತರಬೇತಿ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಡದಿ ಸಮೀಪ ಇರುವ ಟೊಯೋಟಾ ಕೀರ್ಲೋಸ್ಕರ್‍’ನಲ್ಲಿ ತರಬೇತಿ ನೀಡಲಾಯಿತು. ಈ ಮೊದಲು ಇಲ್ಲಿ ತರಬೇತಿ ಪಡೆಯಲು 35,000 ರೂ. ಖರ್ಚು ವೆಚ್ಚವಾಗುತ್ತಿತ್ತು. ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳೇ ಇಲ್ಲಿ ತರಬೇತಿ ಪಡೆಯುತ್ತಾರೆ ಎಂಬುದನ್ನು ಮನಗಂಡ ಸಚಿವ ಪಾಟೀಲ್ ಅವರು, ಯಾವುದೇ ಒಬ್ಬ ಅಭ್ಯರ್ಥಿಯು ಒಂದೇ ಒಂದು ಪೈಸಾ ಕಟ್ಟುವುದು ಬೇಡ. ಎಲ್ಲ ಹಣವನ್ನು ಇಲಾಖೆ ವತಿಯಿಂದಲೇ ಭರಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಾನವೀಯತೆ ಮೆರೆದರು.

ತರಬೇತಿ ಪಡೆದ ನಂತರ ಸ್ಲೊವೆಕಿಯಾದಲ್ಲಿ ಇವರಿಗೆ ತಿಂಗಳಿಗೆ970 ಯೂರೋ (86 ಸಾವಿರ ರೂ.) ವೇತನ ನೀಡಲಾಗುತ್ತಿದೆ. ಜೂನ್ 5ರಂದು ಮೊದಲ ತಂಡ ಹಾಗೂ ಜೂ.20ರಂದು 2ನೇತಂಡವನ್ನು ಬೀಳ್ಕೊಡಲಾಗಿದೆ. ಜೂ.24 ಮತ್ತು ಜು.1ರಂದುಉಳಿದ ತಂಡಗಳು ಸ್ಲೋವಾಕಿಯಾಕ್ಕೆ ತೆರಳಲಿದೆ ಎಂದುಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. 

 ಕೆಎಸ್‍ಡಿಸಿ ಇದೀಗ 37 ಚಾಲಕರನ್ನು ಹಂಗೇರಿಗೆ ದೇಶಕ್ಕೆ ಕಳುಹಿಸಿಕೊಟ್ಟಿದೆ.  ಅಲ್ಲದೆ ಮಾರಿಷಸ್‍ಗೆ ವೆಲ್ಡರ್‍ಗಳು, ಬಾಯ್ಲರ್ ತಯಾರಕರು ಮತ್ತು ಇತರ ಬ್ಲೂ ಕಾಲರ್ ಕೆಲಸಗಳಿಗಾಗಿ ಪ್ರಕ್ರಿಯೆಗೆಚಾಲನೆ ನೀಡಿದ್ದಾರೆ

ಆಸ್ಟ್ರೇಲಿಯಾ, ಜಪಾನ್, ಫಿನ್ಲ್ಯಾಂಡ್, ಜರ್ಮನಿ, ನಾರ್ವೆಯಿಂದದಾದಿಯರ ಬೇಡಿಕೆಯನ್ನು ಪೂರೈಸಲು ಮುಂದಾಗಿದೆ. ಅಲ್ಲದೆ ಸ್ಲೊವೆಕಿಯಾ ಕೂಡ ಹೆಚ್ಚುವರಿಯಾಗಿ ದೊಡ್ಡ ಸಂಖ್ಯೆಯ ಆಪರೇಟರ್‍ಗಳನ್ನು ಕೇಳಿಕೊಂಡಿದೆ. ಜೊತೆಗೆ ಗಲ್ಫ್ ಮತ್ತು ಯುರೋಪ್ ರಾಷ್ಟ್ರಗಳಿಂದಲೂ ಬೇಡಿಕೆಗಳು ಬಂದಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತಿದ್ದೇವೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ.ಕನಗವಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?

ಇಂಗ್ಲೀಷ್ ತರಬೇತಿ:

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷೆ ಅಗತ್ಯ ಇರುವುದನ್ನು ಮನಗಂಡಿರುವ ಕೌಶಲ್ಯಾಭಿವೃದ್ಧಿ ನಿಗಮ ಆಯ್ಕೆಯಾಗುವ ಉದ್ಯೋ ಆಕಾಂಕ್ಷಿಗಳಿಗೆ ಉಚಿತವಾಗಿ ಇಂಗ್ಲೀಷ್ ಭಾಷೆ ತರಬೇತಿ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಇಂಗ್ಲೀಷ್ ಭಾಷೆಯಲ್ಲಿ ಪರಿಣಿತಿ ಹೊಂದಿರುವವರನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News