ಕೋವಿಡ್ ಅಕ್ರಮ – ಭ್ರಷ್ಟಾಚಾರ ತನಿಖೆಗೆ ಹೊಸ ಎಸ್.ಐ.ಟಿ : ಸಚಿವ ಸಂಪುಟ ನಿರ್ಣಯ

ಸಾರ್ವಜನಿಕರ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಗಳ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡಿದ ಮಹತ್ವದ ಘಟನೆಗಳು ನಡೆದು ಹೋದವು.  

Written by - Ranjitha R K | Last Updated : Nov 14, 2024, 06:44 PM IST
ಕೋವಿಡ್ ಅಕ್ರಮ – ಭ್ರಷ್ಟಾಚಾರ ತನಿಖೆಗೆ ಹೊಸ ಎಸ್.ಐ.ಟಿ : ಸಚಿವ ಸಂಪುಟ ನಿರ್ಣಯ  title=

ಬೆಂಗಳೂರು : ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ ಕಾರ್ಯ ಅವಧಿಯಲ್ಲಿ ತನಖೆ ನಡೆಸಿ 2 ಮಧ್ಯಂತರ ವರದಿಗಳನ್ನು ನೀಡಿ ಬ್ರಹ್ಮಾಂಡ ಭ್ರಷ್ಟಾಚಾರದ ಕುರಿತು, ಎಳೆ ಎಳೆಯಾಗಿ ಬಿಡಿಸಿಟ್ಟಿದೆ.ಈ ಬ್ರಹ್ಮಾಂಡ ಭ್ರಷ್ಟಾಚಾರ, ಜನರ ಜೀವಗಳ ಜೊತೆ ಚೆಲ್ಲಾಟವಾಡಿದ ಅಮಾನವೀಯ ಘಟನೆಗಳ ಬಗ್ಗೆ ಸತ್ಯ ಸಂಶೋಧನೆ ನಡೆಸಿರುವ ಆಯೋಗದ ವರದಿಯ ಆಧಾರದ ಮೇಲೆ ಮುಂದುವರೆದ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವೊಂದನ್ನು ನೇಮಕ ಮಾಡಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ ಎಂದು ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು. 

ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ತನಿಖಾ ವರದಿಯ ನಂತರ ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಅಧಿಕಾರಸ್ಥ ರಾಜಕಾರಣಿಗಳ ಅಪವಿತ್ರ ಮೈತ್ರಿಯ ಫಲವಾಗಿ ನಡೆದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು. 

ಕೋವಿಡ್ 19 ಕಾರಣಗಳಿಂದ ಜಗತ್ತಿನಲ್ಲಿ ದೊಡ್ಡ ಅಲ್ಲೋಲ-ಕಲ್ಲೋಲ ಉಂಟಾಯಿತು. ಆ ಸಂದರ್ಭದಲ್ಲಿ ರಾಜ್ಯದ ಜನರ ರಕ್ಷಣೆ ಮಾಡಬೇಕಾದಂತಹ ಸಂದರ್ಭದಲ್ಲಿ ಭ್ರಷ್ಟಾಚಾರ, ಬೇಜವಾಬ್ದಾರಿ, ಜನರಿಗೆ ಮೋಸ ವಿಷಯಗಳ ಮಾಹಿತಿಗಳನ್ನು ಬಚ್ಚಿಟ್ಟುಕೊಳ್ಳುವ ಮತ್ತು ಸರ್ಕಾರದ ದಾಖಲೆಗಳು ಸಾರ್ವಜನಿಕರ ಪರಿಶೀಲನೆಗೆ ಲಭ್ಯವಾಗದಂತೆ ಮಾಡುವುದು ಮುಂತಾದವುಗಳನ್ನು ಅಂದಿನ ಸರ್ಕಾರ ಕೈಗೊಂಡಿತ್ತು. ಸಾರ್ವಜನಿಕರ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಗಳ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡಿದ ಮಹತ್ವದ ಘಟನೆಗಳು ನಡೆದು ಹೋದವು. ಶಾಸನಬದ್ಧ ಸಮಿತಿಗಳ ಕಾರ್ಯನಿರ್ವಹಣೆಯನ್ನು ಅಸಾಧ್ಯವೆನ್ನುವ ರೀತಿಯಲ್ಲಿ ವಾತಾವರಣ ನಿರ್ಮಾಣ ಮಾಡಲಾಯಿತು ಮತ್ತು ಕಡಿವಾಣ ಹಾಕಲಾಗಿತ್ತು. ಸಮಿತಿಗಳ ಕಾರ್ಯನಿರ್ವಹಣೆಯನ್ನು ತಡೆದು ಭ್ರಷ್ಟಾಚಾರವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು.

ಇದನ್ನೂ ಓದಿ : ನಾನೂ ಈ ರಾಜ್ಯದ ಸಿಎಂ ಆಗಬೇಕು, ವಿದ್ಯಾರ್ಥಿಗಳಿಗೂ ಫ್ರೀ ಬಸ್ ಕೊಡಿ ಅಂತ ಅಂದವರಿಗೆ ಡಿಸಿಎಂ ಹೇಳಿದ್ದೇನು..?
 
ಕೋರೋನಾ ಸಂದರ್ಭದಲ್ಲಿ 330 ರಿಂದ 400 ರೂ ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ ಗಳನ್ನು 2117 ರೂ.ಗೆ ಖರೀದಿಸಲಾಯಿತು. 3 ಲಕ್ಷ ಕಿಟ್ ಖರಿದಿಸಲಾಯಿತು. ಆಮದು ಸಾಗಣೆ ವೆಚ್ಚ ನೀಡಿ ಅನುಮಾನಾಸ್ಪದ ವೆಚ್ಚ ಮಾಡಲಾಯಿತು. ಚೀನಾ ಕಂಪನಿಗಳಿಗೆ ಲಾಭ ಮಾಡಿಕೊಡಲಾಯಿತು. ಒಂದೇ ದಿನ ಎರಡು ದರಗಳಲ್ಲಿ 2117.53 ಹಾಗು 2104 ರೂ ಗೆ ಖರೀದಿ ಮಾಡಲಾಯಿತು. ಅದೇ ದಿನ 2049 ರೂ ಗಳಂತೆ ಇನ್ನೊಂದು ಕಂಪನಿಯಿಂದ ಖರೀದಿಸಲಾಯಿತು. ನ್ಯಾ. ಮೈಕಲ್ ಡಿ ಕುನ್ಹಾ ಸಲ್ಲಿಸಿದ್ದ ಮಧ್ಯಂತರ ವರದಿಯಲ್ಲಿ ಅಕ್ರಮದ ಉಲ್ಲೇಖ ನಿಯಮ ಬಾಹಿರವಾಗಿ ಖಾಸಗಿ ಲ್ಯಾಬ್ ಗಳಿಗೆ  6.93 ಕೋಟಿ ಸಂದಾಯದ ಪ್ರಸ್ತಾಪ, ಖಾಸಗಿ ಲ್ಯಾಬ್ ಗಳಿಗೆ ನಿಯಮ ಬಾಹಿರವಾಗಿ ಹಣ ಸಂದಾಯವಾದ ಆರೋಪ ಐಸಿಎಂಆರ್ ಮಾನ್ಯತೆ ಇಲ್ಲದ ಲ್ಯಾಬ್ ಗಳಿಗೆ  ಹಣ ಸಂದಾಯ ಮಾಡಿದ ಉಲ್ಲೇಖ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಹಣ ಸಂದಾಯ ಮಾಡಿರುವುದಕ್ಕೆ ಆಕ್ಷೇಪ, 8 ಲ್ಯಾಬ್ ಗಳಿಗೆ 4 ಕೋಟಿ 28 ಲಕ್ಷ ಸಂದಾಯ ಮಾಡಲಾಗಿದೆ ಅಂತ ವರದಿಯಲ್ಲಿ ಪ್ರಸ್ತಾಪ, ಒಪ್ಪಂದ ಮಾಡಿಕೊಳ್ಳದೆ ಲ್ಯಾಬ್ ಗಳಿಗೆ ಬೇಕಾಬಿಟ್ಟಿ ಹಣ ಸಂದಾಯ ಮಾಡಿರುವುದಕ್ಕೆ ಆಯೋಗ ತರಾಟೆ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ಪ್ರಚಾರಕ್ಕಾಗಿ ಇಟ್ಟಿದ್ದ 7 ಕೋಟಿ 3 ಲಕ್ಷ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಉಲ್ಲೇಖ ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ 8 ಲಕ್ಷ 85 ಸಾವಿರ ನಿಯಮ ಬಾಹಿರವಾಗಿ ಪಾವತಿ ಕೆಲವು ಏಜೆನ್ಸಿಗಳಿಗೆ ಹಣ ಪಾವತಿಸಿದ್ದ ಬಗ್ಗೆ ದಾಖಲೆಯೇ ಇಡದ ಆರೋಗ್ಯ ಇಲಾಖೆ 5 ಕೋಟಿ ರೂ. ಹಣದ ಬಗ್ಗೆ ದಾಖಲೆ ಒದಗಿಸಲಿಲ್ಲ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಸಾವಿನ ಬಗ್ಗೆ ಸರಿಯಾಗಿ ಲೆಕ್ಕ ಕೊಡದೇ ಸಾವಿನ ಲೆಕ್ಕ ಪರಿಶೋಧನೆ ನಡೆಸದೇ ನೈಜವಾದ ಸಾವಿನ ಸಂಖ್ಯೆಗಳನ್ನು ಬಚ್ಚಿಟ್ಟ ಸರ್ಕಾರ ನ್ಯಾಯಯುತವಾದ ಯಾವುದೇ ಕ್ರಮ ಕೈಗೊಳ್ಳದೇ ಜನರಿಗೆ ಮೋಸ ಎಸಗಿ, ಅವ್ಯವಹಾರದಲ್ಲಿ ತೊಡಗಿತ್ತು ಎಂದು ಸಚಿವರು ವಿವರಿಸಿದರು. ಈ ಎಲ್ಲಾ ಅವ್ಯವಹಾರ ಕ್ರಮಗಳಲ್ಲಿ ಅಪರಾಧಿ ಅಂಶಗಳನ್ನು ತನಿಖೆ ಮಾಡಿ ಎಫ್.ಐ.ಆರ್, ದೋಷಾರೋಪ ಪಟ್ಟಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಶಿಕ್ಷೆಗೆ ಅಭಿಯೋಜನೆಗೆ ಒಳಪಡಿಸುವ ಮೂಲಕ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಚಿವರು ವಿವರಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News