ಬೆಂಗಳೂರು : ಜೈಲಿನಲ್ಲಿ ಕುಳಿತು ದೇಶದ ವಿರುದ್ಧ ಸಂಚು ಹಾಗೂ ಆತ್ಮಹುತಿ ದಾಳಿಗೆ ಸಂಚು ಪ್ರಕರಣದಲ್ಲಿ ಲಷ್ಕರ್ ಎ ತೊಯ್ಬಾ ಸಂಘಟನೆಯ 8 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾದಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಒಬ್ಬ ಸೇರಿ ನಾಪತ್ತೆಯಾಗಿರುವ ಇಬ್ಬರನ್ನೊಳಗೊಂಡಂತೆ ಒಟ್ಟು 8 ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದೆ.
2013ರಿಂದಲೂ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಟಿ.ನಜೀರ್ ಮತ್ತು ವಿದೇಶದಲ್ಲಿ ತಲೆಮರೆಸಿಕೊಂಡಿರುವ ಜುನೈದ್ ಅಹಮದ್, ಸಲ್ಮಾನ್ ಖಾನ್ ಹಾಗೂ ಕಳೆದ ವರ್ಷ ಜುಲೈ 18 ರಂದು ಆರ್ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧನವಾಗಿರುವ ಸೈಯ್ಯದ್ ಸುಹೈಲ್ ಖಾನ್, ಮೊಹಮ್ಮದ್ ಉಮರ್, ಜಾಹೀದ್ ತಬ್ರೇಜ್, ಸೈಯ್ಯದ್ ಮುದಾಸಿರ್ ಪಾಶಾ, ಮೊಹಮ್ಮದ್ ಫೈಸಲ್ ರಬ್ಬಾನಿ ವಿರುದ್ಧ ಐಪಿಸಿ ಸೆಕ್ಷನ್, ಯುಎಪಿಎ ಕಾಯ್ದೆ, ಸ್ಪೋಟಕ ಹಾಗೂ ಶಸ್ತ್ರಾಸ್ತ್ರ ನಿಗ್ರಹ ಕಾಯ್ದೆ ಸೇರಿ ವಿವಿಧ ಸೆಕ್ಷನ್ಗಳಡಿಯಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ.
ಇದನ್ನೂ ಓದಿ:"ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬಲು ಸರ್ಕಾರ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ"
ಬೆಂಗಳೂರಿನ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಶಸ್ತ್ರಾಸ್ತ್ರ, ಹ್ಯಾಂಡ್ ಗ್ರೆನೇಡ್, ವಾಕಿ ಟಾಕಿಗಳ ಸಹಿತ 7 ಜನರನ್ನ ಬಂಧಿಸಿದ್ದರು. ಬಳಿಕ ರಾಷ್ಟ್ರೀಯ ತನಿಖಾದಳಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು. 2017ರ ಅವಧಿಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಸಲ್ಮಾನ್ ಖಾನ್ ಹಾಗೂ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಉಳಿದ ಆರೋಪಿಗಳಿಗೆ ಜೈಲಿನಲ್ಲಿ ಟಿ.ನಜೀರ್ ಸಂಪರ್ಕ ದೊರೆತಿತ್ತು.
ಜೈಲಿನಲ್ಲಿ ಎಲ್ಲರನ್ನೂ ತನ್ನ ಬ್ಯಾರಕ್'ಗೆ ಶಿಫ್ಟ್ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ ಟಿ.ನಜೀರ್, ಆರಂಭದಲ್ಲಿ ಜುನೈದ್ ಅಹಮದ್, ಸಲ್ಮಾನ್ ಖಾನ್ ಹಾಗೂ ನಂತರದಲ್ಲಿ ಉಳಿದ ಆರೋಪಿಗಳನ್ನ ಲಷ್ಕರ್ ಎ ತೊಯ್ಬಾಗೆ ಸಂಘಟನೆಯ ಸದಸ್ಯರನ್ನಾಗಿ ಸೇರಿಸಿಕೊಂಡಿದ್ದ ಎಂಬುದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.
ಇದನ್ನೂ ಓದಿ:ಜನತಾ ದರ್ಶನದಲ್ಲಿ ಶಾಸಕರ ಬೆಂಬಲಿಗರು ಹಾಗೂ ರೈತರ ನಡುವೆ ಜಟಾಪಟಿ
ಜೈಲಿನಿಂದ ಬಿಡುಗಡೆಯಾದ ಬಳಿಕ ಕೆಲ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ವಿದೇಶಕ್ಕೆ ತೆರಳಿರುವ ಜುನೈದ್ ಅಹಮದ್, ಇಲ್ಲಿನ ಜೈಲಿನ ಒಳಗೆ ಹಾಗೂ ಹೊರಗೆ ಲಷ್ಕರ್ ಎ ತೊಯ್ಬಾದ ಚಟುವಟಿಕೆಗಳಿಗೆ ವಿದೇಶದಿಂದಲೇ ಹಣ ಒದಗಿಸುತ್ತಿದ್ದ. ಅಲ್ಲದೆ ಹ್ಯಾಂಡ್ ಗ್ರೆನೇಡ್, ವಾಕಿಟಾಕಿಗಳನ್ನ ಉಳಿದ ಆರೋಪಿಗಳಿಗೆ ತಲುಪಿಸುವ ಜವಾಬ್ದಾರಿಯನ್ನ ಸಲ್ಮಾನ್ ಖಾನ್'ಗೆ ನೀಡಲಾಗಿತ್ತು.
ಅವುಗಳನ್ನ ಬಳಸಿ ಟಿ.ನಜೀರ್'ನನ್ನ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಆತ್ಮಾಹುತಿ ದಾಳಿ ನಡೆಸಿ, ನಜೀರ್ ಪರಾರಿಯಾಗಲು ಸಹಾಯ ಮಾಡಲು ಸಿದ್ದವಾಗಿದ್ದರು. ಅಲ್ಲದೆ, ಕೃತ್ಯದ ತಯಾರಿಯ ಭಾಗವಾಗಿ ಪೊಲೀಸ್ ಕ್ಯಾಪ್ಗಳನ್ನು ಕದಿಯಲು ಮತ್ತು ಸರ್ಕಾರಿ ಬಸ್ಗಳಿಗೆ ಬೆಂಕಿ ಹಚ್ಚಿ ತಪ್ಪಿಸಿಕೊಳ್ಳುವಂತೆ ಜುನೈದ್ ಸಹ ಆರೋಪಿಗಳಿಗೆ ಸೂಚನೆ ನೀಡಿದ್ದ ಎಂಬುದು ಎನ್ಐಎ ತನಿಖೆಯಲ್ಲಿ ತಿಳಿದು ಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.