ನಿಖಿಲ್ ಕುಮಾರಸ್ವಾಮಿ ಕೂಡ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು!

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ಸಲ್ಲಿಸಿದ್ದ ರಾಜೀನಾಮೆ ಬುಧವಾರ ಅಂಗೀಕಾರವಾಗಿದೆ. 

Last Updated : Jun 12, 2019, 02:57 PM IST
ನಿಖಿಲ್ ಕುಮಾರಸ್ವಾಮಿ ಕೂಡ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು! title=

ಮಡಿಕೇರಿ: ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಹ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು ಎಂಬ ಹೇಳಿಕೆ ನೀಡುವ ಮೂಲಕ ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅಚ್ಚರಿ ಮೂಡಿಸಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ಸಲ್ಲಿಸಿದ್ದ ರಾಜೀನಾಮೆ ಬುಧವಾರ ಅಂಗೀಕಾರವಾಗಿದೆ. ಈ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ವಿಶ್ವನಾಥ್, "ನಾನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಅಂಗೀಕಾರವಾಗಿದೆ. ಇನ್ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದ ಅವರು, ನಿಖಿಲ್ ಕೂಡಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅರ್ಹರು ಎಂದಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್‌ನಲ್ಲಿ ಎರಡು ಸಚಿವ ಸ್ಥಾನ ಖಾಲಿ ಇದೆ. ಒಬ್ಬ ದಲಿತರಿಗೆ ಅಥವಾ ಅಲ್ಪಸಂಖ್ಯಾತರಿಗೆ ಸಚಿವಸ್ಥಾನ ನೀಡಿದರೆ ಉತ್ತಮ ಎಂದು ವಿಶ್ವನಾಥ್ ಹೇಳಿದ್ದಾರೆ.

Trending News