ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶ ಇಲ್ಲ: ಕುಮಾರಸ್ವಾಮಿ

ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ವರೆಗೂ ವಿರಮಿಸುವುದಿಲ್ಲ-ಎಚ್ಡಿಕೆ.

Last Updated : Dec 16, 2017, 04:56 PM IST
  • ಕುಮಾರಸ್ವಾಮಿಗೆ ಇಂದು 59ನೇ ಹುಟ್ಟುಹಬ್ಬದ ಸಂಭ್ರಮ.
  • ನಗರದ ಜೆ.ಪಿ. ಭವನದಲ್ಲಿಂದು ಎಚ್ಡಿಕೆ ಹುಟ್ಟು ಹಬ್ಬದ ಆಚರಣೆ.
  • ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೇ ನಮ್ಮ ಬಲ-ಎಚ್ಡಿಕೆ.
ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶ ಇಲ್ಲ: ಕುಮಾರಸ್ವಾಮಿ title=

ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಗರದ ಜೆ.ಪಿ. ಭವನದಲ್ಲಿಂದು ತಮ್ಮ 59ನೇ ಹುಟ್ಟು ಹಬ್ಬದ ಆಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಖಿಲ್ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ, ಆದರೆ ಪಕ್ಷದ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಾನೆ ಎಂದು ಹೇಳುವ ಮೂಲಕ ನಿಖಿಲ್ ರಾಜಕೀಯ ಪ್ರವೇಶದ ಬಗ್ಗೆ ಎದ್ದಿದ್ದ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.

ಮುಂದುವರೆದು ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೇ ನಮ್ಮ ಬಲ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ವರೆಗೂ ವಿರಮಿಸುವುದಿಲ್ಲ ಎಂದು ಹೇಳಿದರು.

Trending News