Basavaraj Bommai : 'ಸಿಎಂ ಬದಲಾವಣೆ ಮಾತುಗಳಿಗೆ ಆಧಾರವಿಲ್ಲ'

ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ

Written by - Channabasava A Kashinakunti | Last Updated : Aug 11, 2022, 12:41 PM IST
  • ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ
  • ಇದೊಂದು ರಾಜಕೀಯ ಪ್ರೇರಿತ ನಡೆ
  • ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Basavaraj Bommai : 'ಸಿಎಂ ಬದಲಾವಣೆ ಮಾತುಗಳಿಗೆ ಆಧಾರವಿಲ್ಲ' title=

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಮಾತುಗಳಿಗೆ ಆಧಾರ ಇಲ್ಲ. ಇದೊಂದು ರಾಜಕೀಯ ಪ್ರೇರಿತ ನಡೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಇದರಿಂದ  ನನ್ನ ನಿರ್ಣಯಗಳು ಇನ್ನಷ್ಟು ಗಟ್ಟಿಯಾಗುತ್ತದೆ. ಇನ್ನೂ ಹೆಚ್ಚಿನ ಕೆಲಸವನ್ನು ಜನರಿಗೆ, ರಾಜ್ಯಕ್ಕೆ ಮಾಡಬೇಕೆಂಬ ಪ್ರೇರಣೆಯನ್ನು ಈ ಎಲ್ಲಾ ವಿಚಾರಗಳು ಕೊಟ್ಟಿವೆ. ದಿನಕ್ಕೆ ಇನ್ನೂ 2 ಗಂಟೆಗಳ ಹೆಚ್ಚಿನ ಕೆಲಸ, ರಾಜ್ಯದ ಅಭಿವೃದ್ಧಿ ಗೆ ಅತಿ ಹೆಚ್ಚು ಸಮಯವನ್ನು ನೀಡಲಾಗುವುದು. ಬರುವ ದಿನಗಳಲ್ಲಿ ಪಕ್ಷದ ಬಲವರ್ಧನೆ ಹಾಗೂ ಜನರ ಬಳಿಗೆ ಹೋಗುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುವುದು ಎಂದರು. 

ಇದನ್ನೂ ಓದಿ : ನಟ ಯಶ್ ಜೊತೆ ಮೈಸೂರಿಗೆ ತೆರಳಿದ ಸಿಎಂ ಬೊಮ್ಮಾಯಿ : ನಾಯಕತ್ವ ಬದಲಾವಣೆ ಬಗ್ಗೆ ಹೀಗಂದ್ರು..

ಕಾಂಗ್ರೆಸ್ ಮನಸ್ಸಿನಲ್ಲಿ ಅತಂತ್ರ

ಕಾಂಗ್ರೆಸ್ ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ಸತ್ಯ ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News