‘ಓಮಿಕ್ರಾನ್’ ಆತಂಕ ಬೇಡ: ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲವೆಂದ ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಕೊರೊನಾ ರೂಪಾಂತರಿ ‘ಒಮಿಕ್ರಾನ್’ ಸೇರಿದಂತೆ ಸಾಂಕ್ರಾಮಿಕ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Written by - Zee Kannada News Desk | Last Updated : Nov 30, 2021, 01:04 PM IST
  • ಕೊರೊನಾ ರೂಪಾಂತರಿ ತಳಿ ‘ಓಮಿಕ್ರಾನ್’ ಕುರಿತಂತೆ ಜನರು ಆತಂಕಪಡುವ ಅಗತ್ಯವಿಲ್ಲ
  • ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲವೆಂದ ಸಿಎಂ ಬಸವರಾಜ್ ಬೊಮ್ಮಾಯಿ
  • ರಾಜ್ಯದ ಜನರು ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ
‘ಓಮಿಕ್ರಾನ್’ ಆತಂಕ ಬೇಡ: ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲವೆಂದ ಸಿಎಂ ಬೊಮ್ಮಾಯಿ title=
ಲಾಕ್‌ಡೌನ್ ಮಾಡುವ ಪ್ರಸ್ತಾವನೆ ಇಲ್ಲವೆಂದ ಸಿಎಂ

ಬೆಂಗಳೂರು: ಕೊರೊನಾ ರೂಪಾಂತರಿ ತಳಿ ‘ಓಮಿಕ್ರಾನ್’ ಕುರಿತಂತೆ ಜನರು ಆತಂಕಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಲಾಕ್‌ಡೌನ್(COVID-19 Lockdown) ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ರೂಪಾಂತರಿ ‘ಒಮಿಕ್ರಾನ್’(Omicron Virus) ಸೇರಿದಂತೆ ಸಾಂಕ್ರಾಮಿಕ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ವಿಶೇಷವಾಗಿ ಜನಸಂದಣಿ ಅಧಿಕವಾಗಿರುವ ಕಡೆಗಳಲ್ಲಿ ಕೋವಿಡ್-19 ಸೂಕ್ತ ನಡವಳಿಕೆಗಳನ್ನು ತಪ್ಪದೇ ಪಾಲಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಧರ್ಮ, ಸಂಸ್ಕೃತಿಗಳೆಲ್ಲವೂ ಬಿಜೆಪಿಗೆ ಬೂಟಾಟಿಕೆಯ ತೋರಿಕೆಗಳು ಮಾತ್ರ: ಕಾಂಗ್ರೆಸ್

ವಿದೇಶದಿಂದ ಬರುವ ಪ್ರವಾಸಿಗರ ಮೇಲೆ ವಿಶೇಷ ನಿಗಾ ಇಡಲಾಗುತ್ತಿದೆ. ಕೊರೊನಾ ರೂಪಾಂತರಿ ವೈರಸ್(CoronaVirus) ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲು ಇಂದು ಸಚಿವರು ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಚರ್ಚಿಸುವ ವಿಷಯಗಳ ಆಧಾರದ ಮೇಲೆ ಸರ್ಕಾರವು ನಿರ್ಧಾರ ತೆಗೆದುಕೊಳ್ಳಲಿದೆ. ರಾಜ್ಯದಲ್ಲಿರುವ ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಾವು ಕ್ರಮ ತೆಗೆದುಕೊಳ್ಳಲಿದ್ದೇವೆ. ಆದರೆ ಸರ್ಕಾರದ ಮುಂದೆ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾವನೆಯಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಲಾಕ್‌ಡೌನ್(Karnataka Lockdown)ಕುರಿತು ಈಗಾಗಲೇ ಸಾಕಷ್ಟು ಊಹಾಪೋಹಗಳು ಹರಡುತ್ತಿವೆ. ಇದಕ್ಕೆ ಯಾವುದೇ ರೀತಿ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಜನಜೀವನ ಯಾವ ರೀತಿ ನಡೆಯುತ್ತಿದೆಯೋ ಅದೇ ನಡೆಯಬೇಕು. ಆದರೆ ಜನರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಗುಂಪು ಗೂಡಬಾರದು. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಮಾರಕ ವೈರಸ್ ನ ಅಪಾಯದಿಂದ ದೂರವಿರಬೇಕು ಎಂದು  ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಭೀತಿ : ಧಾರವಾಡದ ಎಸ್‌ಡಿಎಂ ಓಪಿಡಿ ಬುಧವಾರದವರೆಗೆ ಬಂದ್

ಎಲ್ಲಿ ಕೊರೊನಾ ಸೋಂಕು(CoronaVirus) ಹೆಚ್ಚಿದೆಯೋ ಆ ಪ್ರದೇಶವನ್ನು ಕಂಟೈನ್ ಮೆಂಟ್ ವಲಯ ಮಾಡಿ ವೈರಸ್ ನಿಯಂತ್ರಣಕ್ಕೆ ತರುತ್ತಿದ್ದೇವೆ. ರಾಜ್ಯದಲ್ಲಿ ಕ್ಲಸ್ಟರ್ ಮಟ್ಟವೂ ಸೇರಿದಂತೆ ಎಲ್ಲ ಕಡೆಯೂ ಕೊರೊನಾ ಪರೀಕ್ಷೆಗಳು ಹೆಚ್ಚು ಹೆಚ್ಚು ನಡೆಯುತ್ತಿವೆ. ಸಾಂಕ್ರಾಮಿಕ ವೈರಸ್ ನಿಯಂತ್ರಣಕ್ಕೆ ಏನು ಮಾಡಬೇಕೋ ಅದನ್ನು ಸರ್ಕಾರಿ ಮಾಡುತ್ತಿದೆ. ಜನರು ಹೊಸ ವೈರಸ್ ಬಗ್ಗೆ ಆತಂಕಪಡಬೇಕಾದ ಅಗತ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಕೂಡ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News