ಹಿಂದಿ ಭಾಷೆ ಹೇರಿಕೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಡಿ.ವಿ.ಸದಾನಂದಗೌಡ

ರಾಜಕೀಯ ಉದ್ದೇಶಗಳಿಗಾಗಿ, ಕೇಂದ್ರ ಸರ್ಕಾರವನ್ನು ವಿರೋಧಿಸಲು ಹಿಂದಿ ಹೇರಿಕೆ ವಿಚಾರ ಚರ್ಚಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

Last Updated : Jun 3, 2019, 12:43 PM IST
ಹಿಂದಿ ಭಾಷೆ ಹೇರಿಕೆ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಡಿ.ವಿ.ಸದಾನಂದಗೌಡ title=

ಬೆಂಗಳೂರು: ಶಿಕ್ಷಣದಲ್ಲಿ ಹಿಂದಿ ಭಾಷೆ ಹೇರುವಿಕೆ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು  ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

ಹಿಂದಿ ಭಾಷೆ ಹೇರಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಡಿ.ವಿ.ಸದಾನಂದಗೌಡ ಅವರು, ರಾಜಕೀಯ ಉದ್ದೇಶಗಳಿಗಾಗಿ, ಕೇಂದ್ರ ಸರ್ಕಾರವನ್ನು ವಿರೋಧಿಸಲು ಹಿಂದಿ ಹೇರಿಕೆ ವಿಚಾರ ಚರ್ಚಿಸುವುದು ಸರಿಯಲ್ಲ. ಇದು ನ್ಯಾಯೋಚಿತ ಎಂದು ನಾನು ಒಪ್ಪುವುದಿಲ್ಲ. ಇಲ್ಲಿಯವರೆಗೆ ಹಿಂದಿ ಹೇರುವಿಕೆಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದಿದ್ದಾರೆ. 

ಇದಕ್ಕೂ ಮುನ್ನ, ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ತ್ರಿಭಾಷಾ ಸೂತ್ರ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ ಅವರು, ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯ ಆಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ" ಎಂದಿದ್ದರು. 

Trending News