ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ: ಯಡಿಯೂರಪ್ಪ

ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆಯೂ ಯಾವುದೇ ಚರ್ಚೆ ನಡೆಸಿಲ್ಲ. ಅವರ ನಿರ್ಧಾರದ ನಂತರ ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

Last Updated : Mar 7, 2019, 02:18 PM IST
ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ: ಯಡಿಯೂರಪ್ಪ title=

ಹುಬ್ಬಳ್ಳಿ: ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಮಲತಾ ಅಂಬರೀಶ್ ಅವರು ಚುನಾವಣೆಗೆ ನಿಲ್ಲುವುದಾಗಿ ಈಗಾಗಲೇ ಬಹಿರಂಗಪಡಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ. ಈ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರು, ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ. ಹಾಗೆಯೇ ಸುಮಲತಾ ಅವರು ಬಿಜೆಪಿ ಸೇರುವ ಬಗ್ಗೆಯೂ ಯಾವುದೇ ಚರ್ಚೆ ನಡೆಸಿಲ್ಲ. ಅವರ ನಿರ್ಧಾರದ ನಂತರ ಮಂಡ್ಯ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈಗಾಗಲೇ ಜೆಡಿಎಸ್ ಪಕ್ಷದಿಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಘೋಷಿಸಿದ್ದಾರೆ. ಮತ್ತೊಂದೆಡೆ ಸುಮಲತಾ ಅವರು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ ಕಾಂಗ್ರೆಸ್ ಇದುವರೆಗೂ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. 

Trending News