Supreme Court Verdict: ರಾಜ್ಯ ರಾಜಧಾನಿ ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಪೂಜೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈದ್ಗಾ ಮೈದಾನದಲ್ಲಿ ಗಣೇಶ ಪೂಜೆ ನಡೆಸುವುದಿಲ್ಲ ಎಂದು ಕೋರ್ಟ್ ಹೇಳಿದ್ದು ಯಥಾಸ್ಥಿತಿ ಮುಂದುವರೆಯಲಿದೆ ಎಂದು ಅದು ಹೇಳಿದೆ. ಈ ಸಂದರ್ಭದಲಿ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಹಿಂದೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಹೈಕೋರ್ಟ್ ಅನುಮತಿ ನೀಡಿದ್ದು, ಇದನ್ನು ಪ್ರಶ್ನಿಸಿ ಮುಸ್ಲಿಂ ಬಾಂಧವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿವಾದಿತ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಸದ್ಯ ಅಲ್ಲಿ ಗಣೇಶ ಹಬ್ಬ ನಡೆಸಬಾರದು ಎಂದು ಹೇಳಿದೆ.
ಈದ್ಗಾ ಮೈದಾನದಲ್ಲಿ ಗಣೇಶ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ ಮತ್ತೊಂದು ವಿವಾದ ಭುಗಿಲೆದ್ದಿತ್ತು. ಬಳಿಕ ಮೈದಾನದ ಸುತ್ತ ಪೊಲೀಸರನ್ನು ನಿಯೋಜಿಸಲಾಗಿತ್ತು. ಈ ಸಂಬಂಧ ರಾಜ್ಯದ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ವಿಚಾರಣೆಯನ್ನು ತ್ರಿಸದಸ್ಯ ಪೀಠ ನಡೆಸಿದೆ.
ಹೈಕೋರ್ಟ್ ಹೇಳಿದ್ದೇನು?
ಇತ್ತೀಚೆಗೆ, ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಯನ್ನು ಪರಿಗಣಿಸುವಂತೆ ರಾಜ್ಯ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದಾದ ಬಳಿಕ ರಾಜ್ಯ ಸರ್ಕಾರ ಕೂಡ ಎರಡು ದಿನ ಈ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಅನುಮತಿ ನೀಡಿತ್ತು. ಆ ನಂತರ ವಿವಾದ ಹುಟ್ಟಿಕೊಂಡಿತ್ತು. ಇದನ್ನು ವಿರೋಧಿಸಿದ ವಕ್ಫ್ ಮಂಡಳಿ, ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಇದನ್ನೂ ಓದಿ-ರಾಜ್ಯದ ಏಕೈಕ ಸ್ವರ್ಣಗೌರಿ ದೇವಾಲಯದ ಬಗ್ಗೆ ನಿಮಗೆಷ್ಟು ಗೊತ್ತು?
ಇಬ್ಬರು ನ್ಯಾಯಾಧೀಶರ ನಡುವೆ ಭಿನ್ನಾಭಿಪ್ರಾಯ
ವಿಷಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದಾಗ, ಮಧ್ಯಂತರ ಆದೇಶದ ಬಗ್ಗೆ ಇಬ್ಬರು ನ್ಯಾಯಾಧೀಶರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ನಂತರ ಪ್ರಕರಣವನ್ನು ಸಿಜೆಐಗೆ ವರ್ಗಾಯಿಸಲಾಗಿತ್ತು. ಸಿಜೆಐ ನ್ಯಾಯಮೂರ್ತಿ ಯುಯು ಲಲಿತ್ ಅವರು ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎಂಎಂ ಸುಂದರೇಶ್ ಮತ್ತು ಎಎಸ್ ಓಕಾ ಅವರನ್ನೊಳಗೊಂಡ ತ್ರೀಸದಸ್ಯ ಪೀಠಕ್ಕೆ ವಹಿಸಿದ್ದರು. ಈ ಹಿಂದೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಯೋಜಿಸದಿದ್ದ ಯಥಾಸ್ಥಿತಿ ಮುಂದುವರಿಯಲಿದ್ದು, ಈ ಬಾರಿಯೂ ಅಲ್ಲಿ ಗಣೇಶ ಉತ್ಸವ ಆಚರಣೆ ಅಲ್ಲಿ ಇರುವುದಿಲ್ಲ ಎಂದು ಇದೇ ಪೀಠ ತೀರ್ಪು ನೀಡಿದೆ.
ಇದನ್ನೂ ಓದಿ-"ಸರ್ಕಾರ ಕೊಟ್ಟ ಮಾತಿಗೆ ತಪ್ಪಿ ಜನರ ನಂಬಿಕೆಗೆ ದ್ರೋಹ ಎಸಗಿದೆ"
ಈ ಮೈದಾನವನ್ನು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಬಳಸಿಕೊಳ್ಳಬಹುದು ಎಂದು ಹೈಕೋರ್ಟ್‌ನ ಏಕ ಪೀಠ ಈ ಹಿಂದೆ ಹೇಳಿತ್ತು. ಇದಲ್ಲದೆ, ಇದನ್ನು ಆಟದ ಮೈದಾನವಾಗಿಯೂ ಬಳಸಬಹುದು. ಜೊತೆಗೆ, ಮುಸ್ಲಿಂ ಸಮುದಾಯದ ಜನರು ಎರಡೂ ಈದ್‌ನಲ್ಲಿ ನಮಾಜ್ ಮಾಡಬಹುದು ಎಂದು ಹೇಳಿತ್ತು. ನಂತರ ವಿಭಾಗೀಯ ಪೀಠವು ಆದೇಶವನ್ನು ಮಾರ್ಪಡಿಸಿ ರಾಜ್ಯ ಸರ್ಕಾರಕ್ಕೆ ನಿರ್ಧರಿಸಲು ಅವಕಾಶ ನೀಡಿತ್ತು. ಇದಾದ ಬಳಿಕ ರಾಜ್ಯ ಸರ್ಕಾರ ಗಣೇಶ ಚತುರ್ಥಿಗೆ ಅನುಮೋದನೆ ನೀಡಿತ್ತು.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.