ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರಂಟ್

   

Last Updated : Dec 7, 2017, 05:10 PM IST
ಶಾಸಕ ಎಂ.ಕೆ.ಸೋಮಶೇಖರ್ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರಂಟ್ title=

ಮೈಸೂರು: ಕಾಂಗ್ರೆಸ್​ ಶಾಸಕ ಎಂ.ಕೆ.ಸೋಮಶೇಖರ್​ ಅವರ ವಿರುದ್ಧ ಮೈಸೂರಿನ ಜೆಎಂಎಫ್​ ನ್ಯಾಯಾಲಯ ಜಾಮೀನು ರಹಿತ ವಾರಂಟ್​ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ವಾರಂಟ್ ಜಾರಿ ಮಾಡಿದೆ.

ಇಲ್ಲಿನ ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ಶಾಸಕ ಸೋಮಶೇಖರ್ ಅವರು ಸುಳ್ಳು ಮಾಹಿತಿ ನೀಡಿ ಗ್ಯಾಸ್ ಏಜೆನ್ಸಿ ಪಡೆದಿದ್ದಾರೆಂದು ಮಾಜಿ ಕಾರ್ಪೊರೇಟರ್  ಎಂ.ಸಿ.ಚಿಕ್ಕಣ್ಣ 2008ರ ಮೇ ನಲ್ಲಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದರು.

ಇದಕ್ಕೆ ಎಂ.ಕೆ.ಸೋಮಶೇಖರ್ ಅವರು ಎಂ.ಸಿ.ಚಿಕ್ಕಣ್ಣ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ್ದರು. ಇದರಿಂದ ಬೇಸರಗೊಂಡ ಚಿಕ್ಕಣ್ಣ ಅವರು ಸೋಮಶೇಖರ್ ವಿರುದ್ಧ ಮೈಸೂರಿನ ಜೆಎಂಎಫ್‍ಸಿ ಮಾನನಷ್ಟ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ಆದರೆ, ಈ ಪ್ರಕರಣ ಸಂಬಂಧ ವಿಚಾರಣೆಗೆ ಸೋಮಶೇಖರ್ ಅವರು ಹಲವು ಬಾರಿ ನ್ಯಾಯಾಲಯಕ್ಕೆ ಗೈರಾಗಿದ್ದರು.

ಇದೀಗ ಮೊನ್ನೆ ಡಿ. 4ರಂದು ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುವುದಿದ್ದು ಶಾಸಕರ ಹಾಜರಾತಿ ಅನಿವಾರ್ಯವಾಗಿತ್ತು. ಆದರೂ ಶಾಸಕ ಎಂ.ಕೆ.ಸೋಮಶೇಖರ್ ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ನ್ಯಾಯಾಲಯವು ಶಾಸಕರ ವಿರುದ್ಧ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. 

Trending News