ಕೈ ಕೊಟ್ಟ ‌ಹಿಂಗಾರು,‌ ಮುಂಗಾರು ಮಳೆ, ಆತ್ಮಹತ್ಯೆಗೆ ಶರಣಾದ ಅನ್ನದಾತ

ಹಿಂಗಾರು‌ ಮಳೆಯಾಗಲಿಲ್ಲ.‌ ಈಗ ಮುಂಗಾರು ಮಳೆಯೂ ಸಮಯಕ್ಕೆ ಸರಿಯಾಗಿ ಬಾರದೆ ಬೆಳೆದ ಬೆಳೆಯಲ್ಲ ಹಾಳಾಗಿದ್ದು ಇದರಿಂದ ನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. 

Written by - Yashaswini V | Last Updated : Oct 25, 2023, 08:29 AM IST
  • ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.
  • ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಸುಮಾರು 2 ಲಕ್ಷ ರೂ.ಗಳಷ್ಟು ಕೈ ಸಾಲ ಮಾಡಿಕೊಂಡಿದ್ದ.
  • ಅದಲ್ಲದೆ 4.50 ಲಕ್ಷ ರೂ. ಟ್ರ್ಯಾಕ್ಟರ್ ಸಾಲ ಕೂಡ ಇತ್ತು
ಕೈ ಕೊಟ್ಟ ‌ಹಿಂಗಾರು,‌ ಮುಂಗಾರು ಮಳೆ, ಆತ್ಮಹತ್ಯೆಗೆ ಶರಣಾದ ಅನ್ನದಾತ title=

Farmer Committed Suicide:  ಹಿಂಗಾರು ಹಾಗೂ ಮುಂಗಾರು ಮಳೆ ‌ಕೈಕೊಟ್ಟಿದ್ದರಿಂದ ಅನ್ನದಾತರು ಕಂಗಾಲಾಗಿದ್ದು, ಆತ್ಮಹತ್ಯೆ ಹಾದಿ‌ ಹಿಡಿಯುತ್ತಿದ್ದಾರೆ. ಸಾಲದ ಬಾಧೆಯಿಂದ ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಸಮೀಪದ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದಲ್ಲಿ ನಡೆದಿದೆ.

ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದಾನೆ.  ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಸುಮಾರು 2 ಲಕ್ಷ ರೂ.ಗಳಷ್ಟು ಕೈ ಸಾಲ ಮಾಡಿಕೊಂಡಿದ್ದ. ಅದಲ್ಲದೆ ಟ್ರ್ಯಾಕ್ಟರ್ ಸಾಲ 4.50 ಲಕ್ಷ ರೂ. ಇತ್ತು. ಆದರೆ,  ಹಿಂಗಾರು‌ ಮಳೆಯಾಗಲಿಲ್ಲ.‌ ಈಗ ಮುಂಗಾರು ಮಳೆಯೂ ಸಮಯಕ್ಕೆ ಸರಿಯಾಗಿ ಬಾರದೆ ಬೆಳೆದ ಬೆಳೆಯಲ್ಲ ಹಾಳಾಗಿದ್ದು ಇದರಿಂದ ನೊಂದು ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ- ಬಿಬಿಎಂಪಿ ನಿಯಮ ಉಲ್ಲಂಘಿಸಿದ ಪಬ್, ಬಾರ್, ಮಾಲೀಕರಿಗೆ ನೋಟೀಸ್

ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ!
ಮಳೆ ಇಲ್ಲದೆ ಬೆಳೆ ಬಾರದೆ ರೈತ ಪೂಜಾರ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ರತ್ನ ಭಾರತ ರೈತ ಸಮಾಜದ ರಾಷ್ಟ್ರೀಯ ಉಪಾಧ್ಯಕ್ಷರಾದ ಹೇಮನಗೌಡ್ರು ಬಸನಗೌಡರು ಭೇಟಿ ನೀಡಿ ಮೃತ ರೈತನ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸರ್ಕಾರದಿಂದ ಮೃತ ರೈತನ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಬೇಕು, ಅವರ ಕುಟುಂಬಕ್ಕೆ ಸರ್ಕಾರದಿಂದ ಸರಿಯಾದ ಸೌಲತ್ತುಗಳನ್ನು ಕೊಡಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ- ಸಿಎಂ ಸಿದ್ದರಾಮಯ್ಯ ಕಾಲದಲ್ಲಿ ಸತೀಶ್ ಅವರಿಗೆ ಹಿಂಸೆ ಆಗುತ್ತಿದೆ: ರಮೇಶ್ ಜಾರಕಿಹೊಳಿ

ಈ ಸಂದರ್ಭದಲ್ಲಿ ರೈತ ಮುಖಂಡರಾದ ಬಸವರಾಜ ಯೋಗಪ್ಪನವರ ವಿಟ್ಟಲ್ ಗಾಡಿಗೆ ಗುರುನಾಥ ಹೊನ್ನಳ್ಳಿ ಗ್ರಾಮದ ವಿವಿಧ ರೈತ ಮುಖಂಡರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮೃತ ರೈತನಿಗೆ ಒಂದು ನಿಮಿಷ ಮೌನ ಆಚರಣೆ ಮಾಡಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News