ಬೆಂಗಳೂರು : ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞಾರು ಹಾಗೂ ಫಾರ್ಮಾಸಿಷ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪಟ್ಟಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗೆ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞಾರು ಹಾಗೂ ಫಾರ್ಮಾಸಿಷ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನೆಡೆಸಿ ಜುಲೈ. 22 ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಜುಲೈ27 ರ ಒಳಗಡೆ ಲಿಖಿತವಾಗಿ ಸಲ್ಲಿಸಲು ಸೂಚಿಸಲಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.