ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಮಿತವ್ಯಯಕರ ಸೇವೆಯನ್ನು ಸಲ್ಲಿಸುತ್ತಾ ಬಂದಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಜಾಹೀರಾತು ಸಂಖ್ಯೆ: 01-2019 2020ರ ಡಿಸೆಂಬರ್ 10 ರನ್ವಯ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ತುಂಬಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸರ್ಕಾರಿ ಬಸ್ಗಳ ದರ ಶೇ. 12ರಷ್ಟು ಹೆಚ್ಚಳ
ಮುಂದಿನ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರದ ಆದೇಶದನುಸಾರ ಸದ್ಯದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತದ ಮಾಹಿತಿಯನ್ನು ನಂತರ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.