Puneeth Rajkumar Hriday Jyoti Yojana : ಮಾರ್ಚ್ 15 ರಂದು ಧಾರವಾಡದಲ್ಲಿ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು.
ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದ್ದು, ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು
ಇದನ್ನು ಓದಿ : ಮನೆಯಲ್ಲಿಯೇ ಆರೋಗ್ಯಕರ ತೂಕ ಹೆಚ್ಚಿಸಬೇಕೆ ? ಇಲ್ಲಿದೆ ಸರಳವಾದ 5 ಸಲಹೆಗಳು
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ.
ಏನಿದು ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ: ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, 71ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನ ಸ್ಪೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರದಂತೆ 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನ ಹಬ್ ಕೇಂದ್ರಗಳನ್ನಾಗಿ ರಚಿಸಲಾಗಿದೆ.
ನಮ್ಮ ಗ್ರಾಮೀಣ ಪ್ರದೇಶದ ಜನರು ಇದರ ಉಪಯೋಗ ಪಡೆಯವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆಯಬಹುದಾಗಿದೆ.
ಇದನ್ನು ಓದಿ : Aditi Rao Hydari : 'ಹೇ ಸಿನಾಮಿಕಾ' ಖ್ಯಾತಿಯ ಅದಿತಿ, ರೆಡ್ ಸೀರೆಯಲ್ಲಿ ಫೋಟೋಸ್ ವೈರಲ್
ಎದೆನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ 6 ನಿಮಿಷದೊಳಗೆ ಅವರ ಕಂಡಿಷನ್ ಕ್ರಿಟಕಲ್ ಹಂತದಲ್ಲಿದೆಯೋ ಇಲ್ಲವೋ ಎಂಬುದನ್ನ AI ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾಗುವುದು. Tricog ಸಂಸ್ಥೆಯವರ AI ತಂತ್ರಜ್ಞಾನದ ಮೂಲಕ ಮೇಲ್ವಿಚಾರಣೆ ನಡೆಸಿ, ಎದೆನೋವು ಕಾಣಿಸಿಕೊಂಡವರ ಇಸಿಜಿ ಪರೀಕ್ಷೆಯಲ್ಲಿ ತೀವ್ರ ಹೃದಯಾಘಾತವಾಗುವ ಮೂನ್ಸೂಚನೆಯನ್ನ ನೀಡುತ್ತಾರೆ. ಕ್ರಿಟಿಕಲ್ ಎಂದು ಖಚಿತವಾದ ತಕ್ಷಣವೇ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನ ಸ್ಪೋಕ್ ಕೇಂದ್ರಗಳಾದ ತಾಲೂಕು ಆಸ್ಪತ್ರೆಯಲ್ಲೇ ನೀಡಲಾಗುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.