ಪ್ಲಾಸ್ಟಿಕ್ ಅಂಗಡಿಗಳ ಮೇಲೆ ಅಧಿಕಾರಿಗಳಿಂದ ದಾಳಿ, 27 ಸಾವಿರ ರೂ. ದಂಡ

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.

Written by - Zee Kannada News Desk | Last Updated : May 20, 2023, 01:39 AM IST
  • ಅಂಗಡಿ ಮೇಲೆ ದಾಳಿ ನಡೆಸಿ ಸುಮಾರು 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ
  • ಸ್ಥಳದಲ್ಲಿಯೇ ರಸೀದಿ ನೀಡಿ ದಂಡ ಪಡೆದಿದಲ್ಲದೆ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಣೆ, ಮಾರಾಟ, ಬಳಕೆ ಮಾಡದಂತೆ‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.
ಪ್ಲಾಸ್ಟಿಕ್ ಅಂಗಡಿಗಳ ಮೇಲೆ ಅಧಿಕಾರಿಗಳಿಂದ ದಾಳಿ, 27 ಸಾವಿರ ರೂ. ದಂಡ title=

ಕಲಬುರಗಿ: ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ವೇದಿಕೆ ಸಜ್ಜು : ಕಾರ್ಯಕ್ರಮದಲ್ಲಿ ಸೇರಲಿದೆ ಗಣ್ಯರ ದಂಡು, ಭದ್ರತೆಗೆ ಹೆಚ್ಚಿನ ಒತ್ತು

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರಿನ ಅಪರ ನಿರ್ದೇಶಕಿ ಪಿ.ಕೆ.ಸೆಲ್ವಿ ನೇತೃತ್ವದ ಅಧಿಕಾರಿಗಳ ತಂಡವು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿರುವ ರಾಮದೇವ ಟ್ರೇಡರ್ಸ್, ವಿಕಾಸ ಟ್ರೇಡರ್ಸ್ , ಮಹಾದೇವಿ ಟ್ರೇಡರ್ಸ್ ಹಾಗೂ ಬಸ್ ಸ್ಟ್ಯಾಂಡ್ ಹತ್ತಿರದ ಬನಶಂಕರಿ ಟ್ರೇಡರ್ಸ್ ಹಾಗೂ ಸ್ವಾಮಿ ಅಂಗಡಿ ಮೇಲೆ ದಾಳಿ ನಡೆಸಿ ಸುಮಾರು 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿಯೇ ರಸೀದಿ ನೀಡಿ ದಂಡ ಪಡೆದಿದಲ್ಲದೆ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಣೆ, ಮಾರಾಟ, ಬಳಕೆ ಮಾಡದಂತೆ‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ‌.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ಶಾಸಕರ ನಡುವೆ ಭಾರಿ ಪೈಪೋಟಿ: ಸಿದ್ದು ಬಣಕ್ಕೆ ಎಷ್ಟು..? ಡಿಕೆ ಬಣಕ್ಕೆ ಎಷ್ಟು..?

ಈ‌‌ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಆದಮ್ ಸಾಬ್ ಪಟೇಲ್, ಸುಧಾರಾಣಿ, ಶಾರದಾ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಕೆ. ಎಸ್.ಪಾಟೀಲ್, ಸಿದ್ದಲಿಂಗ, ದೀಪಕ್ ಚೌಹಾಣ್ ಹಾಗೂ ಧನರಾಜ್ ಇದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News