ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.26ರಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಧಾನಸೌಧ ಚಲೋಹಮ್ಮಿಕೊಳ್ಳಲಾಗಿದೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಳಗ್ಗೆ 11ಗಂಟೆಗೆ ರ‍್ಯಾಲಿ ಆರಂಭವಾಗಲಿದೆ. ಕೆ.ಎಸ್.ಆರ್. ರೈಲ್ವೆ ನಿಲ್ದಾಣದಿಂದ ವಿಧಾನಸೌಧವರೆಗೂ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
ಹಲವಾರು ಬೇಡಿಕೆ ಈಡೇರಿಕೆಗಾಗಿ ಹಮ್ಮಿಕೊಂಡಿರುವ ರ‍್ಯಾಲಿಯಲ್ಲಿ, ಒಂದು ಲಕ್ಷಕ್ಕೂ ಹೆಚ್ಚು ಸಂಖ್ಯೆಯಲ್ಲಿ ರೈತರು ಭಾಗಿಯಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ : Karnataka CM : ಪೌರಕಾರ್ಮಿಕರೊಂದಿಗೆ ಟಿಫಿನ್ ಮಾಡಿದ ಸಿಎಂ ಬೊಮ್ಮಾಯಿ
ರೈತರ ಪ್ರಮುಖ ಬೇಡಿಕೆಗಳೇನು..?
-.ಪ್ರಸಕ್ತ ಸಾಲಿನ ಕಬ್ಬಿನ ಎಪ್.ಆರ್.ಪಿ. ದರ ಕನಿಷ್ಠ 3,500ರೂ ನಿಗದಿಯಾಗಬೇಕು
-ಕೃಷಿ ಪಂಪ್‌ಸೆಟ್‌ಗಳಿಗೆ ನೀಡುವ ಉಚಿತ ವಿದ್ಯುತ್ ನಿಲ್ಲಿಸುವ ಹುನ್ನಾರ ನಿಲ್ಲಬೇಕು
-ವಿದ್ಯುತ್ ಖಾಸಗೀಕರಣ ಕಾಯ್ದೆ ಮಾಡುವುದನ್ನು ಕೈಬಿಡಬೇಕು
-ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಸಿಗಬೇಕು
-ಡಾ ಎಂ.ಎಸ್ ಸ್ವಾಮಿನಾಥನ್ ವರದಿಯಂತೆ ಖಾತರಿ ಬೆಲೆ ಶಾಸನ ಜಾರಿಯಾಗಬೇಕು
-ಮೂರು ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟ ಮಾಡಿದ 750 ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಕೊಡಬೇಕು
ಇದನ್ನೂ ಓದಿ : 'ನಾನು ಆರೋಗ್ಯವಾಗಿದ್ದೇನೆ'; ಮುಖಂಡರು, ಕಾರ್ಯಕರ್ತರಿಗೆ ಹೆಚ್.ಡಿ.ದೇವೇಗೌಡರ ಸಂದೇಶ
-ಕೊರೊನಾ ಲಾಕ್‌ಡೌನ್ ಸಂಕಷ್ಟ , ಮಳೆಹಾನಿ , ಅತಿವೃಷ್ಟಿ , ಬೆಳೆ ನಷ್ಟ , ಮೂರುವರೆ ಲಕ್ಷ ರೈತರ ಆತ್ಮಹತ್ಯೆ ಪರಿಗಣಿಸಿ ದೇಶದ ರೈತರ ಸಾಲ ಮನ್ನಾ ಆಗಬೇಕು
-ಕೃಷಿ ಉಪಕರಣಗಳು , ಕೃಷಿ ಉತ್ಪನ್ನಗಳ ಮೇಲೆ ವಿಧಿಸಿರುವ ಜಿ.ಎಸ್.ಟಿ. ರದ್ದುಗೊಳಿಸಬೇಕು
-ಫಸಲ್ ಭೀಮಾ ಬೆಳೆ ವಿಮೆ ಯೋಜನೆಯ ಮಾನದಂಡ ಬದಲಾಗಬೇಕು
-ಅತಿವೃಷ್ಟಿ ಮಳೆ ಹಾನಿ ಎಲ್ಲ ಬೆಳೆಗಳಿಗೂ ಬೆಳೆ ವಿಮೆ ಸಿಗುವಂತಾಗಬೇಕು
-ಅತಿವೃಷ್ಟಿ ಸಮಸ್ಯೆಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಸಾಲ ವಸೂಲಾತಿ ನಿಲ್ಲಬೇಕು
-ಇರುವ ಸಾಲದ ಮೇಲೆ ಶೇಕಡ 25 ರಷ್ಟು ಹೆಚ್ಚುವರಿ ಸಾಲ ನೀಡಬೇಕು
-ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಬೇಕು
-ರೈತರ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಬೇಡಿಕೆ ನಿಲ್ಲಬೇಕು
-ನೇರವಾಗಿ ರೈತರಿಗೆ ಬ್ಯಾಂಕ್ ಗಳಿಂದ ಸಾಲ ಕೊಡುವಂತಾಗಬೇಕು
ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಳಗ್ಗೆ 11ಗಂಟೆಗೆ ರ‍್ಯಾಲಿ ಆರಂಭವಾಗಲಿದ್ದು, ಸುಮಾರು ಒಂದು ಲಕ್ಷಕ್ಕಿಂತ ಹೆಚ್ಚು ರೈತರು, ಕೆ.ಎಸ್.ಆರ್. ರೈಲ್ವೆ ನಿಲ್ದಾಣದಿಂದ ವಿಧಾನಸೌಧವರೆಗೂ ನಡೆಯುವ ರ‍್ಯಾಲಿ ಯಲ್ಲಿ ಭಾಗವಹಿಸಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.