ಹೋರಿ ಬೆದರಿಸುವ ಸ್ಪರ್ಧೆ : ವ್ಯಕ್ತಿ ಸಾವು

ನಿಷೇಧದ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆಯನ್ನು ಹಿರೇಕೆರೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Last Updated : Jan 9, 2018, 06:22 PM IST
ಹೋರಿ ಬೆದರಿಸುವ ಸ್ಪರ್ಧೆ : ವ್ಯಕ್ತಿ ಸಾವು title=
ಸಾಂದರ್ಭಿಕ ಚಿತ್ರ

ಹಾವೇರಿ : ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ವ್ಯಕ್ತಿ ಮೃತಪಟ್ಟ ಘಟನೆ ಹಾವೇರಿ ಜೆಲ್ಲೆ ಹಿರೇಕೆರೂರು ತಾಲೂಕಿನ ಮಾಸೂರು ಗ್ರಾಮದಲ್ಲಿ ನಡೆದಿದೆ. ಅರುಣ ಮಡಿವಾಳರ (39) ಮೃತನು. ಮಾಸೂರಿನಲ್ಲಿ ಇಂದು ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹಿರಿಯ ಕೊಂಬು ತಿವಿತದಿಂದ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ.  

ನಿಷೇಧದ ನಡುವೆಯೂ ಹೋರಿ ಬೆದರಿಸುವ ಸ್ಪರ್ಧೆಯನ್ನು ಹಿರೇಕೆರೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಾಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ರೀತಿಯಲ್ಲಿ ಜಲ್ಲಿಕಟ್ಟು ಎಂಬ ಹೆಸರಿನಲ್ಲಿ ತಮಿಳುನಾಡಿನಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಕೆಲವು ಸ್ವಯಂಸೇವಾ ಸಂಘಟನೆಗಳು ಕೋರ್ಟ್ ಮೊರೆ ಹೋದ ಕಾರಣ ನಿಷೇಧಿಸಲಾಗಿತ್ತು. ನಂತರ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡ ಕಾರಣ ಕೇಂದ್ರ ನಿಷೇಧವನ್ನು ತೆರವುಗೊಳಿಸಿತ್ತು.

Trending News