2019 ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

2019 ನೇ ವರ್ಷದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹಿಂದಿನ 4 ವರ್ಷಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಅರ್ಹತೆಯುಳ್ಳ ಪುರುಷ / ಮಹಿಳಾ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು.

Last Updated : Jun 12, 2020, 03:22 PM IST
2019 ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ title=
file photo

ಬೆಂಗಳೂರು : 2019 ನೇ ವರ್ಷದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಹಿಂದಿನ 4 ವರ್ಷಗಳಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ಅರ್ಹತೆಯುಳ್ಳ ಪುರುಷ / ಮಹಿಳಾ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುವುದು.

ಅರ್ಜಿ ನಮೂನೆಯು ಆನ್‍ಲೈನ್‍ನ ಅಧಿಕೃತ ಜಾಲತಾಣ www.karnataka.gov.in/dye ರ ಮೂಲಕ ಲಭ್ಯವಿರುತ್ತದೆ. ದಿ:10-7-2020 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಕ್ರೀಡಾ ಕ್ಷೇತ್ರದಲ್ಲಿ ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದಂತಹ ತರಬೇತುದಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿÀಸಲಾಗುವುದು. ಈ ಸಂಭಂಧ ಅರ್ಹ ಪುರುಷ ಹಾಗೂ ಮಹಿಳಾ ತರಬೇತುದಾರರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ನಮೂನೆಯು ಆನ್‍ಲೈನ್‍ನ ಅಧಿಕೃತ ಜಾಲತಾಣ http://serviceonline.gov.in/karnataka ರ ಮೂಲಕ ಲಭ್ಯವಿರುತ್ತದೆ. ದಿ:10-7-2020 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಗಳ ಮೂಲಕ ಸಂಪರ್ಕಿಸಬಹುದಾಗಿದೆ.

Trending News