ಚಾಮರಾಜನಗರ: ಅಂಚೆ ಇಲಾಖೆಯು ನಂಜನಗೂಡು ವಿಭಾಗದಲ್ಲಿ ಖಾಲಿ ಇರುವ 78 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದ್ದು 18 ರಿಂದ 40ರ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಯೋಮಿಯಲ್ಲಿ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪಿ.ಡಬ್ಯ್ಲೂಡಿ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷ ಸಡಿಲಿಕೆ ಇರುತ್ತದೆ.
ಇದನ್ನೂ ಓದಿ: Post Office: ಯಾವ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ನಿಮ್ಮ ಹಣ ಡಬಲ್ ಆಗುತ್ತೆ ಗೊತ್ತಾ!
ಅಭ್ಯರ್ಥಿಗಳು ತಮ್ಮ ಹೆಸರನ್ನು http://appost.in/gdsonline ರಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.ಹಿಂದುಳಿದ ವರ್ಗ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಯಾವುದೇ ಮುಖ್ಯ ಕಚೇರಿ ಅಥವಾ ಆಯ್ದ ಅಂಚೆ ಕಚೇರಿ (Post office) ಗಳಲ್ಲಿ ಪಾವತಿಸಬಹುದಾಗಿದೆ. ಹೋಮ್ ಪೇಜ್ ನಲ್ಲಿ ನೀಡಲಾಗಿರುವ ಯು.ಆರ್.ಎಲ್ ಲಿಂಕಿನ ಮೂಲಕವೂ ಪಾವತಿಸಬಹುದಾಗಿದೆ.
ಮಹಿಳಾ ಅಭ್ಯರ್ಥಿಗಳು, ತೃತಿಯ ಲಿಂಗಿಗಳು, ಅಂಗವಿಕಲ ಅಭ್ಯರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಪಿ.ಡಬ್ಯ್ಲೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿಯನ್ನು ಆನ್ ಲೈನ್ ನಲ್ಲಿ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.
ಇದನ್ನೂ ಓದಿ: Post Officeನಲ್ಲಿ 10, 12ನೇ ತರಗತಿ ಪಾಸ್ ಆದವರಿಗೆ ಭರ್ಜರಿ ಉದ್ಯೋಗಾವಕಾಶ
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ದೂ.ಸಂ 08226-224430 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳಾದ ಎ. ಮಹಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.