ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಮಾಡಿ ಪ್ರತಿಭಟನೆ

Doctors Protest: ತುರ್ತು ಸೇವೆಗಳನ್ನು ಹೊರತುಪಡಿಸಿ, ಇನ್ನುಳಿದ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯವಿರುವುದಿಲ್ಲ.

Written by - Chetana Devarmani | Last Updated : Aug 17, 2024, 09:10 AM IST
  • ಕೋಲ್ಕತ್ತಾದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣ
  • ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಮಾಡಿ ಪ್ರತಿಭಟನೆ
  • ಐಎಂಎ ನೀಡಿದ ಕರೆಯ ಮೇರೆಗೆ ಹುಬ್ಬಳ್ಳಿಯಲ್ಲೂ ಒಪಿಡಿ ಬಂದ್‌
ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಮಾಡಿ ಪ್ರತಿಭಟನೆ title=

ಹುಬ್ಬಳ್ಳಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಕೊಲೆ ಪ್ರಕರಣವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ನೀಡಿದ ಕರೆಯ ಮೇರೆಗೆ ಹುಬ್ಬಳ್ಳಿಯಲ್ಲೂ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. 

ತುರ್ತು ಸೇವೆಗಳನ್ನು ಹೊರತುಪಡಿಸಿ, ಇನ್ನುಳಿದ ಯಾವುದೇ ವೈದ್ಯಕೀಯ ಸೇವೆಗಳು ಲಭ್ಯವಿರುವುದಿಲ್ಲ. ಇದರಿಂದಾಗಿ ರೋಗಿಗಳು ಪರದಾಡುವ ಸ್ಥಿತಿ ಉಂಟಾಗಿದೆ. 

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯರ ಚಡ್ಡಿ ಫುಲ್‌ ಕಪ್ಪಾಗಿದೆ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯ

ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗುತಿದ್ದು. ವೈದ್ಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಸರ್ಕಾರ ಇದರ ಬಗ್ಗೆ ತಕ್ಷಣ ಕ್ರಮಕೈಗೊಂಡು, ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಐಎಂಎ ಒತ್ತಾಯಿಸಿದೆ.

ಸರ್ಕಾರದ ಮೇಲೆ ಒತ್ತಡ ತರಲು ಒಂದು ದಿನದ ಮಟ್ಟಗೆ ಒಪಿಡಿ ಸ್ಥಗಿತಗೊಳಿಸಲಾಗಿದೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆಯವರೆಗೆ ಒಪಿಡಿ ಬಂದ್‌ ಇರಲಿವೆ. ಶನಿವಾರ ಸಂಜೆ 4.30ಕ್ಕೆ ಹುಬ್ಬಳ್ಳಿಯ ತಹಶೀಲ್ದಾರ್ ಅವರನ್ನು ಭೇಟಿ ಮಾಡಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:  ಸಕಲೇಶಪುರದಲ್ಲಿ ಭೂಕುಸಿತ... ರೈಲು ಸಂಚಾರ ಸ್ಥಗಿತ, ಸಾವಿರಾರು ಪ್ರಯಾಣಿಕರ ಪರದಾಟ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News