Operation Kamala: ರಾಜ್ಯದ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿಯು ಮತ್ತೊಮ್ಮೆ ‘ಆಪರೇಷನ್ ಕಮಲ’ ನಡೆಸಬಹುದು ಎನ್ನುವ ಬಗ್ಗೆ ಈಗ ಬಾರಿ ಚರ್ಚೆ ನಡೆಯುತ್ತಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ‘ನಮ್ಮ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನಿಸುತ್ತಿದೆ. ಒಬ್ಬೊಬ್ಬರಿಗೆ ತಲಾ 50 ಕೋಟಿ ರೂಪಾಯಿಗಳ ಆಫರ್ ನೀಡಲಾಗಿದೆ’ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ನಡುವೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಸಕರ ಖರೀದಿಗೆ ಮುಂದಾಗಿದೆ ಎನ್ನಲಾಗುವ ಬಿಜೆಪಿ ನಡೆಗೆ ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಯಾವತ್ತೂ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ. ಪ್ರತಿ ಬಾರಿಯೂ ಬಿಜೆಪಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿದಿದೆ. ಬೇರೆ ಬೇರೆ ಪಕ್ಷದಿಂದ ಗೆದ್ದಿರುವ ಶಾಸಕರಿಂದ ರಾಜೀನಾಮೆ ಕೊಡಿಸುವುದು, ಆ ಮೂಲಕ ಸರ್ಕಾರಗಳನ್ನು ಅತಂತ್ರಗೊಳಿಸುವುದು ಬಿಜೆಪಿಯ ಹಳೆಯ ಚಾಳಿ ಎಂದು ಮಧು ಬಂಗಾರಪ್ಪ ಅವರ ಬಿಜೆಪಿ ನಾಯಕರ ಆಪರೇಷನ್ ಕಮಲದ ಪ್ರಯತ್ನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರನ್ನು ತಲಾ 50 ಕೋಟಿ ರೂಪಾಯಿ ನೀಡಿ ಕೊಟ್ಟು ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿಜಯೇಂದ್ರ ಅವರೇ ಆಪರೇಷನ್ ಕಮಲದ ಸೂತ್ರದಾರ. ಹಿಂದೆಯೂ ವಿಜಯೇಂದ್ರ ಬೇರೆ ಪಕ್ಷಗಳ ಶಾಸಕರ ಜೊತೆ ಮುಂಬೈಗೆ ಕರೆದೊಯ್ದಿದ್ದರು ಎಂದು ನೇರವಾಗಿಯೇ ಆರೋಪಿಸಿದ್ದಾರೆ.
ಇದನ್ನೂ ಓದಿ- Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ವಾರ ರಣಭೀಕರ ಮಳೆ; ಗುಡುಗು-ಮಿಂಚು ಸಹಿತ ಬಿರುಗಾಳಿ ಆರ್ಭಟದ ಎಚ್ಚರಿಕೆ!
ಬಿಜೆಪಿಎಯ ನಾಯಕರು ಬೇರೆ ಪಕ್ಷಗಳ ಶಾಸಕರನ್ನು ಖರೀದಿ ಮಾಡುವ, ಅಂದರೆ ಆಪರೇಷನ್ ಕಮಲ ಮಾಡುವ ತಮ್ಮ ಹಳೆಯ ಪ್ರಯತನವನ್ನು ಮುಂದುವರೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿರುವುದು ಇದನ್ನೇ. ಶಾಸಕ ರವಿ ಗಣಿಗ ಅವರ ಹೇಳಿಕೆಯನ್ನು ಕೂಡ ನೋಡಿದ್ದೇನೆ. ಅವರು ಈ ಬಗ್ಗೆ ವಿಡಿಯೋ ಬಿಡುಗಡೆ ಮಾಡುತ್ತಾರೆ ಎಂದು ಗೊತ್ತಾಗಿದೆ. ಆಗ ಆಪರೇಷನ್ ನಂತಹ ಕುಕೃತ್ಯ ಮಾಡುತ್ತಿರುವವರು ತಿಳಿಯಲಿದೆ ಎಂಡಿದ್ದಾರೆ.
ಈ ರೀತಿ ಒಂದು ಪಕ್ಷದ ಚಿಹ್ನೆಯಿಂದ ಗೆದ್ದ ಶಾಸಕರನ್ನು ಇನ್ನೊಂದು ಪಕ್ಷ ದುಡ್ಡು ಕೊಟ್ಟು ಖರೀದಿ ಮಾಡುವುದು ಸರಿಯಾದ ನಡೆ ಅಲ್ಲ. ಯಾರೇ ಇಂಥಾ ಆಪರೇಷನ್ ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು. ಹಿಂದೆ ಗೋವಾದಲ್ಲಿ ಕೂಡ ಬಿಜೆಪಿಗೆ ಬಹುಮತ ಇರದಿದ್ದರೂ ಆಪರೇಷನ್ ಮಾಡಿ ಸರ್ಕಾರ ರಚಿಸಿದರು. ನಂತರ ಕರ್ನಾಟಕದಲ್ಲೂ ಆಪರೇಷನ್ ಕಮಲ ಮಾಡಿದರು. ಇಂತಹ ನಡೆಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಮಧು ಬಂಗಾರಪ್ಪ ಅವರು ಪ್ರತಿಪಾದಿಸಿದರು.
ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಜನ ಕೊಟ್ಟ ತೀರ್ಪಿಗೆ ಅನುಗುಣವಾಗಿ ನಾವು ನಡೆದುಕೊಳ್ಳಬೇಕು. ಅದು ಬಿಟ್ಟು ಅಕ್ರಮವಾಗಿ ಆಪರೇಷನ್ ಗಳ ಮೂಲಕ ಅಧಿಕಾರಕ್ಕೆ ಬರುವ ಅನಿಷ್ಟ ನಡೆಗೆ ತಡೆ ಹಾಕಬೇಕು. ಇದಕ್ಕಾಗಿ ಕಾನೂನು ಹೋರಾಟ ಮಾಡಬೇಕು. ಗಂಭೀರವಾಗಿ ಚಿಂತಿಸಿ ಸೂಕ್ತ ಕ್ರಮ ಜರುಗಿಸುವ ಕುರಿತಾಗಿ ನಾನು ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ- ಗ್ಯಾರಂಟಿ ಹಣೆಬರಹ ನೋಡೋಕೆ ನಾವೇ ಇದ್ದೇವಲ್ಲಾ?- ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ
ಇದೇ ವೇಳೆ ರಾಜ್ಯದ ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿಯವರು ಮೂರೂ ಕ್ಷೇತ್ರಗಳನ್ನು ಗೆಲ್ಲುವುದಾಗಿ ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ಅವರು, ನಾವು ಕೂಡ ಮೂರೂ ಕ್ಷೇತ್ರ ಗೆಲ್ಲುತ್ತೇವೆ ಎಂದೇ ಹೇಳುತ್ತೇವೆ. ನಮಗೆ ಮೂರೂ ಕ್ಷೇತ್ರಗಳಲ್ಲೂ ಉತ್ತಮವಾದ ಅವಕಾಶ ಇದೆ. ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಶಿಗ್ಗಾವಿಯಲ್ಲೂ ಕಾಂಗ್ರೆಸ್ ಪಕ್ಷದ ಬಗ್ಗೆ ಉತ್ತಮವಾದ ಪ್ರತಿಕ್ರಿಯೆ ಇದೆ. ನಮ್ಮ ಅಭ್ಯರ್ಥಿ ಪಠಾಣ್ ಅವರಿಗೆ ಜನರ ಬೆಂಬಲ ಇದೆ. ಅಲ್ಲಿಯೂ ನಾವು ಗೆಲ್ಲಬಹುದು ಎಂದು ಹೇಳಿದರು.
ಇನ್ನು ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ನಮ್ಮ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಸ್ಥಳೀಯರಾಗಿದ್ದು, ಅವರಿಗೆ ಗೆಲುವಿನ ಅವಕಾಶಗಳು ಜಾಸ್ತಿ ಇವೆ. ಆದರೆ ಸಚಿವ ಜಮೀರ್ ಅಹಮದ್ ಆ ರೀತಿ ಹೇಳಿಕೆ ನೀಡಬಾರದಿತ್ತು. ಅದು ನಮಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗಿದೆ. ಯಾರೇ ಆಗಲಿ, ಧರ್ಮ, ಜಾತಿ ಮತ್ತು ಬಣ್ಣದ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.
ನಾನು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಮಗ. ಹಾಗಂತಾ ನಾನು ಒಂದೇ ಜಾತಿಯ ಬಗ್ಗೆ ಮಾತನಾಡುವುದು ಸರಿಯಲ್ಲ. ನಾವು ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ನಮ್ಮ ಮಾತಿನ ಮೇಲೆ ಹಿಡಿತ ಇರಬೇಕು. ಹಣ ಅಥವಾ ಇನ್ಯಾವುದೇ ಶಕ್ತಿಯಿಂದ ಚುನಾವಣೆ ನಡೆಯುವುದಿಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.
ವಕ್ಫ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ ಅವರು, ಬಿಜೆಪಿಯವರು ಏನು ಬೇಕಾದರೂ ಮಾಡಲಿ, ನಮಗೆ ಇನ್ನೂ ಮೂರುವರೆ ವರ್ಷ ಅಧಿಕಾರ ಇದೆ. ಅವರು ಹೋರಾಟ ಮಾಡುತ್ತಲೇ ಇರಲಿ. ವಕ್ಫ್, ಮುಡಾ ಎಲ್ಲದರ ಬಗ್ಗೆಯೂ ಹೋರಾಡಲಿ. ಅದಕ್ಕೆಲ್ಲಾ ಜನರೇ ಉತ್ತರ ನೀಡುತ್ತಾರೆ ಎಂದು ಬಿಜೆಪಿ ನಾಯಕರನ್ನು ಲೇವಡಿ ಮಾಡಿದರು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ