ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ : ಪ್ರತಿಪಕ್ಷ ನಾಯಕ ಆರ್‌.ಅಶೋಕ

ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿದರು.

Written by - Prashobh Devanahalli | Edited by - Krishna N K | Last Updated : Nov 28, 2024, 06:27 PM IST
    • ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ
    • ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ
    • ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ : ಪ್ರತಿಪಕ್ಷ ನಾಯಕ ಆರ್‌.ಅಶೋಕ title=

ಬೆಂಗಳೂರು : ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. 

ಉತ್ತರ ಕರ್ನಾಟಕ ಭಾಗದ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಹಣ ಇದೆ ಎಂದು ಹೇಳುತ್ತಲೇ ಇದೆ. ಆದರೂ ಉತ್ತರ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಎಷ್ಟು ಹೂಡಿಕೆ ಬಂದಿದೆ, ಎಷ್ಟು ಬೆಳೆಹಾನಿ ಪರಿಹಾರ ಸಿಕ್ಕಿದೆ, ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ. ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರ್ಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಾಂಗ್ರೆಸ್‌ ಹೇಳಿದ್ದು ಏನು, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು ಎಂಬ ಬಗ್ಗೆ ಶಾಸಕರೇ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡುವುದು 25 ಸಾವಿರ ರೂಪಾಯಿ !ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಈ ಯೋಜನೆ 

ಸಾರಿಗೆ ಇಲಾಖೆ ನೌಕರರು ಬಂದ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಬಕಾರಿ ಇಲಾಖೆ ಗುತ್ತಿಗೆದಾರರು ಕೂಡ ಬಂದ್‌ ಮಾಡಲು ಮುಂದಾಗಿದ್ದರು. ಈ ನಡುವೆ ರಸ್ತೆ ಅಭಿವೃದ್ಧಿ, ಆಸ್ಪತ್ರೆ ನಿರ್ಮಾಣ, ಬೆಳೆಹಾನಿ ಪರಿಹಾರ ಯಾವುದಕ್ಕೂ ಹಣ ಇಲ್ಲ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು.

ಇದನ್ನೂ ಓದಿ:ನಿಮ್ಮ ಸ್ಮಾರ್ಟ್‌ಫೋನ್‌ನಲ್ಲೂ ಈ 15 ಅಪ್ಲಿಕೇಶನ್‌ಗಳಿವೆಯೇ ಕೂಡಲೇ ಡಿಲೀಟ್ ಮಾಡಿ, ಇಲ್ಲ ಅಕೌಂಟ್ ಖಾಲಿಯಾದೀತೂ ಎಚ್ಚರ! 

ಅಬಕಾರಿ ಇಲಾಖೆಯಲ್ಲಿ ಪರವಾನಗಿಗೆ ಅರ್ಜಿ ಸಲ್ಲಿಸಿದಾಗ ಲಂಚ ಕೇಳಿದ ಧ್ವನಿಮುದ್ರಣ ಈಗ ಬಿಡುಗಡೆಯಾಗಿದೆ. ಕಾಂಗ್ರೆಸ್‌ ಕಾರ್ಯಕರ್ತ ಆಗಿರುವುದರಿಂದ 50% ರಿಯಾಯಿತಿ ಎಂದು ಅಧಿಕಾರಿ ಹೇಳಿದ್ದಾರೆ. ಇದು ಈಗ ಜಗಜ್ಜಾಹೀರಾಗಿದೆ. ಈ ಭ್ರಷ್ಟಾಚಾರದ ವಿರುದ್ಧವೂ ಬಿಜೆಪಿ ಹೋರಾಟ ಮಾಡಲಿದೆ. ಇಷ್ಟು ಸಾಕ್ಷಿ ಇದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಪುಸ್ತಕ ಎಂದು ಹೇಳುತ್ತಿದ್ದಾರೆ. ದಾಖಲೆ ನೀಡಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈಗ ಅವರು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. ಅಲ್ಲದೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಶುಲ್ಕ ಏರಿಕೆಯಾಗಿದೆ. ಆಸ್ಪತ್ರೆಗಳೇ ವಸೂಲಿ ಕೇಂದ್ರಗಳಾಗಿವೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ವರದಿ ತರಿಸಿಕೊಳ್ಳುತ್ತೇನೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News