ಬೆಂಗಳೂರು: ಹಿಜಾಬ್ ವಿವಾದ(Hijab Row) ವಿಚಾರವಾಗಿ ಮಾತನಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ‘ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳುವುದಿಲ್ಲವೇ’ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ ‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಎಂದು ಹೇಳಿದ್ದಾರೆ.
ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. 1/4
— Siddaramaiah (@siddaramaiah) March 25, 2022
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ(Siddaramaiah), ‘ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಇಲ್ಲಿ ಸೈಲೆಂಟ್,ಅಲ್ಲಿ ವೈಲೆಂಟ್ : ಆರ್ ಅಶೋಕ್ ಲೇವಡಿ
ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. 2/4
— Siddaramaiah (@siddaramaiah) March 25, 2022
‘ಸರ್ವ ಜಾತಿಗಳ ಸ್ವಾಮೀಜಿಗಳ(Swamijis) ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.
‘ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ(Swamijis)ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು’ ಎಂದು ಹೇಳಿದ್ದಾರೆ.
ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. 3/4
— Siddaramaiah (@siddaramaiah) March 25, 2022
ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ.
ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು. 4/4— Siddaramaiah (@siddaramaiah) March 25, 2022
ಇದನ್ನೂ ಓದಿ: ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ- ಡಾ.ಕೆ.ಸುಧಾಕರ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.