ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರವೇ ನಡೆದಿಲ್ಲವೆಂದು ಬೊಬ್ಬಿರಿಯುವ ಬಿಜೆಪಿ ನಾಯಕರಿಗೆ ತಮ್ಮ ಪ್ರಾಮಾಣಿಕತೆ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಮ್ಮ ಮೇಲಿರುವ ಆರೋಪದಿಂದ ಮುಕ್ತಿ ಹೊಂದಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
‘ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ನಾವು ಸಾಬೀತು ಮಾಡುತ್ತೇವೆ, ಒಂದು ವೇಳೆ ಸಾಬೀತುಪಡಿಸಲು ಆಗದಿದ್ದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾರಾದರೂ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಈ ಸವಾಲು ಸ್ವೀಕರಿಸಲಿ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಪ್ರಧಾನಿಗೆ ಬರೆದ ಪತ್ರವನ್ನು ನೋಡಿದ್ದು ಬಿಟ್ಟರೆ ಅವರ ಭೇಟಿ ಸಾಧ್ಯವಾಗಿರಲಿಲ್ಲ. ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಭೇಟಿಮಾಡಿ ಸಮಾಲೋಚನೆ ನಡೆಸಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದರು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಬೊಬ್ಬಿರಿಯುವ @BJP4Karnataka ನಾಯಕರಿಗೆ ತಮ್ಮ ಪ್ರಾಮಾಣಿಕತೆ ಬಗ್ಗೆ ಅಷ್ಟೊಂದು ವಿಶ್ವಾಸವಿದ್ದರೆ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಮ್ಮ ಮೇಲಿರುವ ಆರೋಪದಿಂದ ಮುಕ್ತಿ ಹೊಂದಲಿ. 1/8#40PercentGovt
— Siddaramaiah (@siddaramaiah) August 24, 2022
ಇದನ್ನೂ ಓದಿ: 40% ಸರ್ಕಾರದ ಬಿಜೆಪಿ ಭ್ರಷ್ಟೋತ್ಸವ ನಿಲ್ಲುವುದು ಯಾವಾಗ?: ಕಾಂಗ್ರೆಸ್ ಪ್ರಶ್ನೆ
‘ರಾಜ್ಯ ಬಿಜೆಪಿ ಸರ್ಕಾರ ಕಳೆದ ಏಪ್ರಿಲ್ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಈವರೆಗೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕೆಂದು ಗುತ್ತಿಗೆದಾರರ ಸಂಘದವರು ನನಗೆ ಮನವಿ ಮಾಡಿದ್ದರು. ಟೆಂಡರ್ ಅನುಮೋದನೆಗೆ ಮೊದಲೇ 30 ರಿಂದ 40% ಲಂಚ ಕೊಡಬೇಕಾಗಿದೆ. ಪ್ರಧಾನಿಗೆ ಪತ್ರ ಬರೆದು 1 ವರ್ಷವಾದರೂ ಯಾವ ಕ್ರಮ ಕೈಗೊಂಡಿಲ್ಲ. ನ್ಯಾಯಾಂಗ ತನಿಖೆಗೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿ ಎಂದು ಇಂದು ಕೆಂಪಣ್ಣನವರು ನನ್ನ ಬಳಿ ಕೇಳಿಕೊಂಡಿದ್ದಾರೆ’ ಅಂತಾ ಅವರು ಹೇಳಿದ್ದಾರೆ.
ನ್ಯಾಯಾಂಗ ತನಿಖೆ ನಡೆಸಿದರೆ ಸರ್ಕಾರದ ಭ್ರಷ್ಟಾಚಾರವನ್ನು ನಾವು ಸಾಬೀತು ಮಾಡುತ್ತೇವೆ, ಒಂದು ವೇಳೆ ಸಾಬೀತುಪಡಿಸಲು ಆಗದಿದ್ದರೆ ನಮ್ಮ ಮೇಲೆ ಬೇಕಾದ ಕಾನೂನು ಕ್ರಮ ಜರುಗಿಸಿ ಎಂದು ಗುತ್ತಿಗೆದಾರರ ಸಂಘದವರು ಹೇಳುತ್ತಿದ್ದಾರೆ. @BJP4Karnataka ಸರ್ಕಾರದಲ್ಲಿ ಯಾರಾದರೂ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಈ ಸವಾಲು ಸ್ವೀಕರಿಸಲಿ. 2/8
— Siddaramaiah (@siddaramaiah) August 24, 2022
‘ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಆಮೆ ವೇಗದಲ್ಲಿತ್ತು, ಈಗ ಶರವೇಗದಲ್ಲಿ ಸಾಗುತ್ತಿದೆಯೆಂಬ ಪದಗಳನ್ನು ಬಳಸಿ ಗುತ್ತಿಗೆದಾರರು ಈ ಸರ್ಕಾರದ ಭ್ರಷ್ಟ ಮುಖವನ್ನು ತೆರೆದಿಟ್ಟಿದ್ದಾರೆ. ಜಲಸಂಪನ್ಮೂಲ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಹಾಗೂ ಬಿಬಿಎಂಪಿಯಿಂದ ಸುಮಾರು 22,000 ಕೋಟಿ ರೂ.ಗೂ ಅಧಿಕ ಬಿಲ್ ಹಣ ಬಿಡುಗಡೆಯಾಗಬೇಕಿದೆ. ಬಾಕಿ ಇರುವ ಬಿಲ್ ಹಣವನ್ನು ಆದ್ಯತೆ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು, ಜೊತೆಗೆ ಅನುದಾನ ಮೀಸಲಿಡದೆ ಟೆಂಡರ್ ಕರೆಯುವುದರಿಂದ ಹಣ ಬಿಡುಗಡೆ ವೇಳೆ ಆಗುತ್ತಿರುವ ಸಮಸ್ಯೆಗೆ ಸೂಕ್ತ ಪರಿಹಾರ ದೊರಕಿಸಲು ಒತ್ತಾಯಿಸಬೇಕೆಂದು ನನ್ನಲ್ಲಿ ಮನವಿ ಮಾಡಿದ್ದಾರೆ’ ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಬರೆದ ಪತ್ರವನ್ನು ನೋಡಿದ್ದು ಬಿಟ್ಟರೆ ಅವರ ಭೇಟಿ ಸಾಧ್ಯವಾಗಿರಲಿಲ್ಲ. ಒಮ್ಮೆ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಅರಣ್ಯ ಗುತ್ತಿಗೆದಾರರ ಸಂಘದವರು ಬಂದು ಭೇಟಿಮಾಡಿ ಸಮಾಲೋಚನೆ ನಡೆಸಿ, ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದರು. 3/8#40PercentGovt
— Siddaramaiah (@siddaramaiah) August 24, 2022
ಇದನ್ನೂ ಓದಿ: BC Nagesh : 2023ರ ಫೆಬ್ರವರಿಯಲ್ಲಿ ಶಿಕ್ಷಕರ ಹುದ್ದೆಗೆ ಮತ್ತೆ ಸಿಇಟಿ ಪರೀಕ್ಷೆ : ಬಿಸಿ ನಾಗೇಶ್
ರಾಜ್ಯ @BJP4Karnataka ಸರ್ಕಾರ ಕಳೆದ ಏಪ್ರಿಲ್ ತಿಂಗಳಿನಲ್ಲಿ ನಮ್ಮನ್ನು ಮಾತುಕತೆಗೆ ಕರೆದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದು ಬಿಟ್ಟರೆ ಈ ವರೆಗೆ ಯಾವ ಕ್ರಮ ಕೈಗೊಂಡಿಲ್ಲ. ಈ ವಿಚಾರವನ್ನು ತಾವು ವಿಧಾನಸಭೆಯಲ್ಲಿ ಒತ್ತಾಯ ಮಾಡಬೇಕು ಎಂದು ಗುತ್ತಿಗೆದಾರರ ಸಂಘದವರು ನನಗೆ ಮನವಿ ಮಾಡಿದ್ದರು. 4/8#40PercentGovt
— Siddaramaiah (@siddaramaiah) August 24, 2022
‘ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ. ಭಂಡ ಬಿಜೆಪಿ ಸರ್ಕಾರ ನಮ್ಮ ಮಾತಿಗೆ ಕಿವಿಗೊಡದೆ ಹೋದರೆ ಈ ವಿಚಾರವನ್ನು ರಾಜ್ಯದ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ. ನಾಡಿನ ಪ್ರಜ್ಞಾವಂತ ಜನ ಈ ಬಗ್ಗೆ ಸಂದರ್ಭ ಬಂದಾಗ ಸೂಕ್ತ ತೀರ್ಪು ನೀಡುತ್ತಾರೆಂಬ ನಂಬಿಕೆ ನನಗಿದೆ’ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.