ಸಂವಿಧಾನದ ಆಶಯ ರಕ್ಷಿಸಲು ಬಿಜೆಪಿ ಸರ್ಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ

'ರಾಜ್ಯದಲ್ಲಿ ಸಂವಿಧಾನಕ್ಕೆ ಸವಾಲು ಹಾಕುತ್ತಿರುವ ಸಂವಿಧಾನೇತರ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಾಗದ ಬಿಜೆಪಿ ಸರ್ಕಾರವು ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ’

Written by - Zee Kannada News Desk | Last Updated : Mar 22, 2022, 10:06 PM IST
  • ಸಂವಿಧಾನದ ಆಶಯಗಳನ್ನು ರಕ್ಷಿಸಲು ರಾಜ್ಯದ ಬಿಜೆಪಿ ಸರ್ಕಾರವು ಸಂಪೂರ್ಣ ವಿಫಲವಾಗಿದೆ
  • ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರುವಿಕೆ
  • ಕೆಲ ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ ಎಂದ ಸಿದ್ದರಾಮಯ್ಯ
ಸಂವಿಧಾನದ ಆಶಯ ರಕ್ಷಿಸಲು ಬಿಜೆಪಿ ಸರ್ಕಾರ ಸಂಪೂರ್ಣ ವಿಫಲ: ಸಿದ್ದರಾಮಯ್ಯ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಗುಡುಗು

ಬೆಂಗಳೂರು: ಸಂವಿಧಾನದ ಆಶಯಗಳನ್ನು ರಕ್ಷಿಸಲು ರಾಜ್ಯದ ಬಿಜೆಪಿ ಸರ್ಕಾರ(BJP Government)ವು ಸಂಪೂರ್ಣ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(​Siddaramaiah) ಕಿಡಿಕಾರಿದ್ದಾರೆ.

#ಸಂವಿಧಾನ #ಸೌಹಾರ್ದತೆ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ(Siddaramaiah), ‘ಹಿಂದೂ ಧಾರ್ಮಿಕ ಸಮಾರಂಭಗಳಲ್ಲಿ ಮುಸ್ಲಿಂ ವರ್ತಕರ ಅಂಗಡಿ-ಮುಂಗಟ್ಟುಗಳಿಗೆ ಅವಕಾಶ ನೀಡದಿರಲು ಕೆಲವು ಹಿಂದೂ ಸಂಘಟನೆಗಳು ಒತ್ತಡ ಹೇರುತ್ತಿರುವುದು ಕಳವಳಕಾರಿ ಬೆಳವಣಿಗೆ. ಇಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗಿರುವ ಜಿಲ್ಲಾಡಳಿತ(District Administration) ಮೌನವಾಗಿದ್ದು, ಪರೋಕ್ಷ ಬೆಂಬಲ ನೀಡುತ್ತಿರುವುದು ಖಂಡನೀಯ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: KIADB ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡವೆಂದವರಿಗೆ ಸೈಟ್: ಸಚಿವ ನಿರಾಣಿ

‘ಸಂವಿಧಾನದ ಆಶಯ(Constitution of India)ಗಳನ್ನು ಪಾಲಿಸುವುದು ಪ್ರತಿಯೊಂದು ಸರ್ಕಾರದ ಮೂಲ ಕರ್ತವ್ಯ. ರಾಜ್ಯದಲ್ಲಿ ಸಂವಿಧಾನಕ್ಕೆ ಸವಾಲು ಹಾಕುತ್ತಿರುವ ಸಂವಿಧಾನೇತರ ಶಕ್ತಿಗಳ ವಿರುದ್ಧ ಕ್ರಮಕೈಗೊಳ್ಳಲಾಗದ ರಾಜ್ಯ ಬಿಜೆಪಿ ಸರ್ಕಾರವು ಸಂವಿಧಾನದ ಆಶಯಗಳನ್ನು ರಕ್ಷಿಸಲು ಸಂಪೂರ್ಣ ವಿಫಲವಾಗಿದೆ’ ಅಂತಾ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ನಿರ್ಬಂಧ!

ಉಡುಪಿ ಜಿಲ್ಲೆಯ ಕಾಪುವಿನ ಪ್ರಸಿದ್ಧ ಮಾರಿಗುಡಿ ಜಾತ್ರೆ(Mariyamma Temple Jatre) ಮಂಗಳವಾರ(ಮಾ.22)ದಿಂದ ಆರಂಭವಾಗಿದ್ದು, ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಇಲ್ಲಿ ಅನುಮತಿ ನೀಡಿಲ್ಲ. ಪಡುಬಿದ್ರಿಯ ಮಹಾಲಿಂಗೇಶ್ವರ ದೇವಸ್ಥಾನದ ರಥೋತ್ಸವದಲ್ಲಿಯೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸುಗ್ಗಿ ಮಾರಿ ಪೂಜೆ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅಂಗಡಿಗಳನ್ನು ನೀಡದಿರುವ ಕುರಿತು ದೇವಸ್ಥಾನದ ಆಡಳಿತ ಮಂಡಳಿ ತೆಗೆದುಕೊಂಡಿರುವ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ವಿಚಾರವೂ ಸೇರಿದಂತೆ ಬಿಜೆಪಿ ನಾಯಕರು ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ: Siddharamaiah Allegations On BJP: ಜೇಮ್ಸ್ ಚಿತ್ರ ನಿಲ್ಲಿಸಲು ಬಿಜೆಪಿ ಒತ್ತಡ, ಸಿದ್ದರಾಮಯ್ಯ ಆರೋಪ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News