3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

Cauvery Water Dispute: ಮಳೆ ಕೈಕೊಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. 

Written by - Yashaswini V | Last Updated : Sep 27, 2023, 12:51 PM IST
  • ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ.
  • ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ.
  • ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ಈಗ ಹೋಗಿದೆ
3000 ಕ್ಯೂಸೆಕ್ ನೀರು ಹರಿಸಲು ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ title=

Cauvery Water Dispute: ಕಾವೇರಿ ನೀರು ನಿಯಂತ್ರಣ ಸಮಿತಿಯು 3000 ಕ್ಯೂಸೆಕ್ ನೀರನ್ನು ಹರಿಸಲು ಆದೇಶಿಸಿದೆ. ಈ ಬಗ್ಗೆ ಕಾನೂನು ತಂಡದೊಂದಿಗೆ ಚರ್ಚಿಸಿದ್ದು  ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಕಾನೂನು ತಂಡ ಸಲಹೆ ನೀಡಿದೆ. ನೀರು ಬಿಡಲು ನಮ್ಮ ಬಳಿ ನೀರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 

ಶ್ರೀ  ಮಲೈ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಮಹದೇಶ್ವರ ದೇವಸ್ಥಾನದ ಪ್ರಾಧಿಕಾರದ ಸಭೆಯಿದ್ದು, ಪ್ರಾಧಿಕಾರದ ಅಧ್ಯಕ್ಷನಾಗಿ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ತಿಳಿಸಿದರು. ಇದೇ ವೇಳೆ ಮಳೆ ಕೈಕೊಟ್ಟು 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಮಹದೇಶ್ವರನಲ್ಲಿ ಮಳೆಗಾಗಿ, ರಾಜ್ಯದ ಜನರಿಗೆ, ರೈತರಿಗೆ ಸೌಖ್ಯವಾಗಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. 

ಇದನ್ನೂ ಓದಿ- ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ: 
ಮೂಢನಂಬಿಕೆ, ಮೌಢ್ಯ, ಕಂದಾಚಾರದಲ್ಲಿ ನಂಬಿಕೆ ಇಲ್ಲ. ಅದಕ್ಕಾಗಿಯೇ ಹಿಂದೆ ಮುಖ್ಯಮಂತ್ರಿ ಯಾದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿದೆ. ಸುಮಾರು 12 ಬಾರಿ ಭೇಟಿ ನೀಡಿದ್ದು, 5 ವರ್ಷ ಗಟ್ಟಿಯಾಗಿ ಇದ್ದೆ. ಚಾಮರಾಜನಗರ ಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ  ಮೌಢ್ಯ ಈಗ ಹೋಗಿದೆ ಎಂದರು.

ಇದನ್ನೂ ಓದಿ- ಕಾವೇರಿ ವಿವಾದದ ಇತ್ಯರ್ಥಕ್ಕೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

ಬಂದ್ :  ಯಾರಿಗೂ ತೊಂದರೆಯಾಗಬಾರದು:
ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶವಿದೆ. ಆದರೆ ಇತರರಿಗೆ ತೊಂದರೆಯಾಗಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ನಾವು ಈ ಆದೇಶ ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತೇವೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News