"ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ದ"

ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Written by - Manjunath N | Last Updated : Jun 24, 2023, 12:08 AM IST
  • ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ದವಾಗಿದೆ.
  • ಸರ್ಕಾರಿ ಯೋಜನೆಗಳು ಅರ್ಹರಿಗೆ ತಲುಪಬೇಕು, ತಾರತಮ್ಯ ಮಾಡಬಾರದು ಎಂದು ಸೂಚಿಸಿರುವೆ.
  • ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು.ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು
"ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ದ" title=

ವಿಜಯಪುರ: ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಬಾರಿಗೆ ನಡೆದ ಕೆಡಿಪಿ-ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಸಾರ್ವಜನಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ದವಾಗಿದೆ. ಸರ್ಕಾರಿ ಯೋಜನೆಗಳು ಅರ್ಹರಿಗೆ ತಲುಪಬೇಕು, ತಾರತಮ್ಯ ಮಾಡಬಾರದು ಎಂದು ಸೂಚಿಸಿರುವೆ.ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು.ಇಲ್ಲದಿದ್ದರೆ ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆ ನೀಡಲಾಯಿತು ಎಂದು ತಿಳಿಸಿದರು.

ಸದ್ಯ ಮಳೆಯ ಕೊರತೆಯ ಕಾರಣ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮೊದಲ ಪ್ರಾಶಸ್ತ್ಯ ನೀಡುವಂತೆ ತಿಳಿಸಿರುವೆ. ಮಳೆಗಾಲ ಆರಂಭವಾಗಿದ್ದು ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವೆ ಎಂದು ಹೇಳಿದರು.ಬಬಲೇಶ್ವರ ಮತಕ್ಷೇತ್ರ  ಮತ್ತು ವಿಜಯಪುರ ಜಿಲ್ಲೆಯ ಹಲವು ಭಾಗಗಳಲ್ಲಿ ಕಿರಾಣಿ ಅಂಗಡಿ, ಹೋಟೆಲ್ ಗಳಲ್ಲೂ ಸಾರಾಯಿ ಮಾರುತ್ತಿರುವುದಾಗಿ ದೂರುಗಳು ಬರುತ್ತಿವೆ. ಇವುಗಳಿಗೆ ಸಂಪೂರ್ಣ ಕಡಿವಾಣ ಹಾಕುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿರುವೆ.  ಹಲವು ಜ್ವಲಂತ ಸಮಸ್ಯೆ – ಪರಿಹಾರದ ಕುರಿತು ಚರ್ಚಿಸಲಾಯಿತು.

ಇಂದಿನ  ಕೆಡಿಪಿ ಸಭೆಯಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News