ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಬಿಡಿ ಅದು ಐದು ವರ್ಷ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.  

Written by - Yashaswini V | Last Updated : May 14, 2024, 03:04 PM IST
  • ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ.
  • ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ.
  • ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ.
ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಬಿಡಿ ಅದು ಐದು ವರ್ಷ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ  title=

CM Siddaramaiah: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ (Lok Sabha Election) ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ.

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್.ಎಸ್.ಎಸ್ (RSS) ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ- ಸರ್ಕಾರ ಬೀಳಿಸುವುದು ಕನಸಿನ ಮಾತು; ಬಿಜೆಪಿಗರು ಬೇಕಿದ್ದರೆ ಜೋಗದ ಗುಂಡಿಗೆ ಹಾರಲಿ!

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ (BS Yediyurappa) ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ  ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ.

ಇದನ್ನೂ ಓದಿ- ನಮ್ಮಲ್ಲಿ ಒಳಜಗಳ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚುನಾವಣಾ ಫಲಿತಾಂಶದ (Election Result) ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ (Maharashtra Chief Minister Eknath Shinde) ಅವರು ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆ ಅವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News