ಪಂಚಮಸಾಲಿ ಮೀಸಲಾತಿ : ಮಧ್ಯಂತರ ವರದಿ ಬಗ್ಗೆ ಚರ್ಚಿಸಿ ಮುಂದಿನ ಕ್ರಮ : ಸಿಎಂ

ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ  ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ.

Written by - Prashobh Devanahalli | Edited by - Ranjitha R K | Last Updated : Dec 22, 2022, 12:19 PM IST
  • ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಿಂದ ಮಧ್ಯಂತರ ವರದಿ
  • ಕಾನೂನು ಸಚಿವರ ಜೊತೆ ಚರ್ಚಿಸಿ ಕಾನೂನಾತ್ಮಕ ಕ್ರಮ -ಸಿಎಂ
  • ಅವಧಿಗೆ ಮುನ್ನ ಚುನಾವಣೆ ಇಲ್ಲ ಮುಖ್ಯಮಂತ್ರಿ ಸ್ಪಷ್ಟನೆ
ಪಂಚಮಸಾಲಿ ಮೀಸಲಾತಿ : ಮಧ್ಯಂತರ ವರದಿ ಬಗ್ಗೆ ಚರ್ಚಿಸಿ ಮುಂದಿನ ಕ್ರಮ  :  ಸಿಎಂ title=
CM Basavaraja Bommai

ಬೆಳಗಾವಿ : ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ಕೊಟ್ಟಿದ್ದಾರೆ.  ಈ ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ಕಾನೂನು ಸಚಿವರ ಜೊತೆ ಚರ್ಚಿಸಿ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. 

ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ. ಈ ವರದಿ ಹಾಗೂ ಅನುಷ್ಠಾನದ ಬಗ್ಗೆ ಮಾತಾನಾಡಿದ ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ, ವರದಿ ಸಲ್ಲಿಕೆಯಾದ ತಕ್ಷಣ ಒಪ್ಪಿಕೊಳ್ಳುವಂಥಹ ಘಟನೆ ಯಾವತ್ತೂ ಆಗಿಲ್ಲ ಎಂದು ಹೇಳಿದ್ದಾರೆ. ಉದಾಹರಣೆಗೆ ನಾಗಮೋಹನ್ ದಾಸ್ ವರದಿ ಬಂದು ಒಂದು ವರ್ಷದ ಬಳಿಕ ಅದನ್ನು ಒಪ್ಪಿಕೊಂಡು ವಿವರವನ್ನು  ನೀಡಲಾಗಿತ್ತು.  ಸದಾಶಿವ ಆಯೋಗ ವರದಿ ಬಂದು ೧೦ ವರ್ಷ ಆಗಿದೆ. ಕಾಂತರಾಜ್ ವರದಿ ಕೂಡಾ ಬಂದಿದೆ. ಆದರೆ ಅದು ಇನ್ನೂ ಆಯೋಗದಲ್ಲೇ ಇದೆ ಎಂದು ಸಿಮೆ ಹೇಳಿದ್ದಾರೆ. ಆದರೆ ಇಂದು ಸಲ್ಲಿಕೆಯಾದ ವರದಿ ಬಗ್ಗೆ ಆದಷ್ಟು ಬೇಗನೇ ಕಾನೂನಾತ್ಮಕವಾಗಿ ಚರ್ಚಿಸಿ, ಎಲ್ಲರ ವಿಶ್ವಾಸದೊಂದಿಗೆ  ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 

ಇದನ್ನೂ ಓದಿ :  "ತಾಕತ್ತಿದ್ದರೆ ಭೂತಾನ್‌ ಅಡಿಕೆ ಆಮದನ್ನು ವಿರೋಧಿಸುವ ಧೈರ್ಯ ತೋರಲಿ": ಬ್ರಿಜೇಶ್‌ ಕಾಳಪ್ಪ 

ಅವಧಿಗೆ ಮುನ್ನ ಚುನಾವಣೆ ಇಲ್ಲ: 
ಅವಧಿ ಮುನ್ನ ಚುನಾವಣೆಯ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಪ್ರತಿಕ್ರಿಯೆ ನೀಡಿದ ಸಿಎಂ, ‌ದೆಹಲಿ ನಾಯಕರು ಸಿಎಂ ಜೊತೆಗೆ ಮಾತನಾಡಿದ್ದಾರೆ ಎಂಬುದು ಸತ್ಯವಲ್ಲ. ದೆಹಲಿ ನಾಯಕರು ‌ನನ್ನ ಜೊತೆ ಈ ಬಗ್ಗೆ ಮಾತನಾಡಿಲ್ಲ. ಅವಧಿಗೆ ಮುಂಚೆ ಚುನಾವಣೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು. 

ಇನ್ನು ಇದೇ ಸಂದರ್ಭದಲ್ಲಿ ಕೆ.ಎಸ್ ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಭೇಟಿ ನೀಡಿ, ಸಂಪುಟ ವಿಸ್ತರಣೆ ಬಗ್ಗೆ ಕೇಳಿದ್ದರು. ದೆಹಲಿ‌ ಭೇಟಿಯ ಬಗ್ಗೆ ಏನು ಮಾತುಕತೆ ನಡೆದಿದೆ ಅದರ ವಿವರ ನೀಡಿದ್ದೇನೆ. ಮತ್ತೊಂದು ಬಾರಿ ದೆಹಲಿಗೆ ಭೇಟಿ ‌ನೀಡಲಿದ್ದೇನೆ. ಈ ಬಾರಿ ವಿವರವನ್ನು ಪಡೆದುಕೊಂಡು ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸೂಚನೆ ನೀಡುತ್ತದೆ  ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇದೆ ವೇಳೆ, ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಕಲಾಪಕ್ಕೆ ಆಗಮಿಸುತ್ತಾರೆ ಎನ್ನುವ ಭರವಸೆ ಇದೆ ಎಂದು ಹೇಳಿದರು. 

ಇದನ್ನೂ ಓದಿ :  ನಿವೇಶನ ಕೊಡದ ಬಿಲ್ಡರ್ರಿಂದ 5 ಲಕ್ಷ ಪರಿಹಾರ ಮತ್ತು ದಂಡ ಕೊಡಲು ಗ್ರಾಹಕರ ಆಯೋಗದ ಆದೇಶ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News