ಎರಡು ದಾಖಲೆ ಬರೆದ ಪಂಚರತ್ನ ರಥಯಾತ್ರೆ.! ರೆಕಾರ್ಡ್ ಬುಕ್ ಸೇರಿದ ಹೆಚ್ ಡಿಕೆ ಹಾರಗಳು .!

ಗ್ರಾಮಕ್ಕೆ ಆಗಮಿಸಿದ ' ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಆರ್.ಹರೀಶ್ ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರಿಸಿದ್ದಾರೆ.   

Written by - Ranjitha R K | Last Updated : Dec 30, 2022, 01:20 PM IST
  • ಏಷ್ಯಾ ಬುಕ್ ಆಫ್ ರೆಕಾರ್ಡ್ಸ್, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಹಾರಗಳು
  • ಗ್ರಾಮ ವಾಸ್ತವ್ಯದ ಜಾಗಕ್ಕೆ ಬಂದು ದಾಖಲೆ ಪತ್ರ, ಮೆಡಲ್ ಗಳನ್ನು ನೀಡಿದ ತೀರ್ಪುಗಾರರು
  • ಎರಡೂ ದಾಖಲೆಗಳನ್ನು ನಾಡಿನ ಜನ ಮತ್ತು ಕಾರ್ಯಕರ್ತರಿಗೆ ಅರ್ಪಿಸಿದ ಮಾಜಿ ಮುಖ್ಯಮಂತ್ರಿ
ಎರಡು ದಾಖಲೆ ಬರೆದ ಪಂಚರತ್ನ ರಥಯಾತ್ರೆ.! ರೆಕಾರ್ಡ್ ಬುಕ್ ಸೇರಿದ ಹೆಚ್ ಡಿಕೆ ಹಾರಗಳು .!  title=

ತುಮಕೂರು : ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಎರಡು ದಾಖಲೆ ಬರೆದಿದೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ ಬೃಹತ್ ಹಾರಗಳನ್ನು ಹಾಕಿ ಹೆಚ್ ಡಿ ಕುಮಾರಸ್ವಾಮಿಯನ್ನು ಗೌರವಿಸಿದ್ದರು. ಈ ಹಾರಗಳು ಈಗ ' ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ನಲ್ಲಿ ಸ್ಥಾನ ಪಡೆದಿವೆ. 

ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಯಾತ್ರೆ ನಡೆಸಿದ ಹೆಚ್ ಡಿಕೆ ಕಳೆದ ರಾತ್ರಿ ಕ್ಷೇತ್ರದ ಯಲ್ಲಾಪುರದಲ್ಲಿ ಗ್ರಾಮ ವಾಸ್ತವ್ಯ ಹೂಡಿದ್ದರು. ಆ ಗ್ರಾಮಕ್ಕೆ ಆಗಮಿಸಿದ ' ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಮೋಹಿತ್ ಕುಮಾರ್ ವತ್ಸ ಹಾಗೂ ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ತೀರ್ಪುಗಾರರಾದ ಆರ್.ಹರೀಶ್ ಮಾಜಿ ಮುಖ್ಯಮಂತ್ರಿ ಅವರಿಗೆ ಎರಡೂ ದಾಖಲೆಗಳ ಪತ್ರಗಳು ಮತ್ತು ಮೆಡಲ್ ಗಳನ್ನು ಹಸ್ತಾಂತರಿಸಿದ್ದಾರೆ. 

ಇದನ್ನೂ ಓದಿ : ಪ್ರಯಾಣಿಕರಿಗೆ ಶಾಕ್ ನೀಡಿದ ಬಿಎಂಟಿಸಿ.! ಮುಂದಿನ ವಾರದಿಂದ ಟಿಕೆಟ್ ದರ ಹೆಚ್ಚಳ

ರೈತರಿಗೆ, ಕಾರ್ಯಕರ್ತರಿಗೆ ಸಮರ್ಪಣೆ:
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇದು ನನಗೆ ಅಚ್ಚರಿಯ ಗೌರವ. ಈ ದಾಖಲೆಗಳನ್ನು ನನ್ನ ನಾಡಿನ ರೈತರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸಮರ್ಪಣೆ ಮಾಡುತ್ತೇನೆ ಎಂಡು ಹೇಳಿದರು. ನಾನು ರಥಯಾತ್ರೆ ಮಾಡುತ್ತಿರುವ ಎಲ್ಲಾ ಕಡೆ ಜನರು ನನ್ನನ್ನು ಪ್ರೀತಿಯಿಂದ ಸ್ವಾಗತ ಮಾಡುತ್ತಿದ್ದಾರೆ. ದೊಡ್ಡ ದೊಡ್ಡ ಹಾರಗಳನ್ನು ಹಾಕಿ ಸ್ವಾಗತ ಮಾಡುತ್ತಿದ್ದಾರೆ. ಆ ಜನರ ಪ್ರೀತಿಯಿಂದ ಮಾತ್ರ ಈ ದಾಖಲೆ ನಿರ್ಮಾಣವಾಗಲು  ಸಾಧ್ಯವಾಗಿದೆ. ಹೀಗಾಗಿ ಈ ಎಲ್ಲಾ ದಾಖಲೆಯ ಹೆಗ್ಗಳಿಕೆ ಅವರಿಗೇ ಸಲ್ಲಬೇಕು ಎಂದು ತಿಳಿಸಿದರು.

ಇನ್ನೊಂದೆಡೆ ಪಂಚರತ್ನ ಯಾತ್ರೆ ಇದೀಗ 34ನೆ ದಿನಕ್ಕೆ ಕಾಲಿಟ್ಟಿದೆ. ಹಾರಗಳ ಸಂಖ್ಯೆ 500ರ ಗಡಿ ದಾಟಿದೆ. ನಿನ್ನೆ ತುಮಕೂರು ಗ್ರಾಮಾಂತರ ಕ್ಷೇತ್ರ ಒಂದರಲ್ಲೇ 30ಕ್ಕೂ ಹೆಚ್ಚು ಬೃಹತ್ ಹಾರಗಳನ್ನು  ಕುಮಾರಸ್ವಾಮಿಗೆ ಹಾಕಲಾಗಿದೆ.   ಈ ಕ್ಷೇತ್ರದಲ್ಲಿ ಸೇಬು, ಸೌತೆಕಾಯಿ, ಕೊಬರಿ, ಕಬ್ಬಿನ ಹಾರಗಳ ಜತೆಗೆ ನಾಣ್ಯದ ಹಾರ, ಭತ್ತ ನೇಗಿಲು ಹಾರ, ಎತ್ತಿನ ಲಾಳದ ಹಾರ, ಜೆಡಿಎಸ್ ಚಿಹ್ನೆ ಹಾರ, ಮಣ್ಣಿನ ಹಾರ, ಕಿರೀಟದ ಹಾರ, ಮಹಿಳೆಯರು ಹಾಕಿದ ರಾಖಿ ಹಾರ ಗೂಳೂರು
ಕರ್ಜಿಕಾಯಿ ಹಾರ, ವಿವಿಧ ತರಕಾರಿಗಳ ಹಾರ, ವಿವಿಧ ಹಣ್ಣುಗಳ ಹಾರ, ಎಲ್ ಇ ಡಿ ಹಾರ ಸೇರಿದಂತೆ ಒಂದೇ ದಿನ 30ಕ್ಕೂ ಹೆಚ್ಚು ಹಾರಗಳನ್ನು ಕುಮಾರಸ್ವಾಮಿ ಅವರಿಗೆ ಹಾಕಿ ಸ್ವಾಗತ ಕೋರಲಾಗಿತ್ತು.

ಇದನ್ನೂ ಓದಿ : New Year 2023: ಹೊಸ ವರ್ಷಾಚರಣೆಗೆ ಮಂಗಳೂರಿನಲ್ಲಿ ಪ್ರತ್ಯೇಕ ನಿಯಮ: ಜಿಲ್ಲಾಡಳಿತದ ಮಾರ್ಗಸೂಚಿ ಹೀಗಿದೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News