ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ: ಎಸ್.ಟಿ. ಸೋಮಶೇಖರ್

ಈಗಾಗಲೇ ಮುಖ್ಯಮಂತ್ರಿಗಳು ಶೇಕಡಾ 90 ಬೇಡಿಕೆಗಳನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಚ್. ವಿಶ್ವನಾಥ್ ಅವರಿಗೂ ಸೂಕ್ತ ವ್ಯವಸ್ಥೆ ಆಗಲಿದೆ. 

Last Updated : Jun 19, 2020, 10:27 AM IST
ವಿಶ್ವನಾಥ್ ಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನ: ಎಸ್.ಟಿ. ಸೋಮಶೇಖರ್ title=

ತುಮಕೂರು: ವಿಧಾನ ಪರಿಷತ್ ಸ್ಥಾನಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ (H Vishwanath) ಅವರಿಗೆ ಟಿಕೆಟ್ ಕೈತಪ್ಪಿದ್ದರ ಬಗ್ಗೆ ನಾವೂ ಸಹ ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇವೆ. ಅವರಿಗೆ ಮುಂದಿನ ದಿನಗಳಲ್ಲಿ ಸ್ಥಾನ ನೀಡುವ ಭರವಸೆಯನ್ನು ಕೊಟ್ಟಿದ್ದಾರೆ. ಅಲ್ಲದೆ ಕೋರ್ ಕಮಿಟಿ ಪಟ್ಟಿಯಲ್ಲಿ ವಿಶ್ವನಾಥ್ ಹೆಸರನ್ನು ಸೇರಿಸಲಾಗಿದ್ದರೂ ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (ST Somashekhar) ತಿಳಿಸಿದರು.

ಈಗಾಗಲೇ ಮುಖ್ಯಮಂತ್ರಿಗಳು ಶೇಕಡಾ 90 ಬೇಡಿಕೆಗಳನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಚ್. ವಿಶ್ವನಾಥ್ ಅವರಿಗೂ ಸೂಕ್ತ ವ್ಯವಸ್ಥೆ ಆಗಲಿದೆ. ಇನ್ನು ಮುನಿರತ್ನ ಹಾಗೂ ಪ್ರತಾಪ್ ಗೌಡ ಪಾಟೀಲ್ ಅವರ ಕ್ಷೇತ್ರಗಳಿಗೆ ಚುನಾವಣೆಯಾಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

'ನನ್ನನ್ನು ನಾನು ಮಾರಿಕೊಂಡಿಲ್ಲ': ಕ್ಷೇತ್ರದ ಮತದಾರರಿಗೆ ಎ.ಎಚ್. ವಿಶ್ವನಾಥ್ ಪತ್ರ

ಅನುದಾನಕ್ಕೆ ಯಾರಿಂದಲೂ ಅಸಮಾಧಾನವಿಲ್ಲ:
ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಿಜೆಪಿಯ ಯಾವೊಬ್ಬ ಶಾಸಕರೂ ಸಹ ಅಸಮಾಧಾನಗೊಂಡಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ. ಆ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಬಳಿ ಹೇಳಿಕೊಂಡಿದ್ದಾರೆ. ಅಷ್ಟೇ ಬಿಟ್ಟರೆ ಯಾರಿಂದಲೂ ಅಸಮಾಧಾನ ಇಲ್ಲ ಎಂದು ಸಚಿವರು ತಿಳಿಸಿದರು.

ಎಪಿಎಂಸಿ ವ್ಯವಸ್ಥೆಗೆ ದಕ್ಕೆ ಇಲ್ಲ:
ಎಪಿಎಂಸಿ (APMC) ಇರುವುದೇ ರೈತರಿಗೋಸ್ಕರ. ಕಾಯ್ದೆ ತಿದ್ದುಪಡಿಯಿಂದ ಯಾರಿಗೂ ತೊಂದರೆಯಾಗಿಲ್ಲ. ಇದರಿಂದ ಎಪಿಎಂಸಿ ವ್ಯವಸ್ಥೆಗೆ ಯಾವುದೇ ದಕ್ಕೆಯಾಗದು. ಕಾಯ್ದೆ ತಿದ್ದಪಡಿಯಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ರೈತರು (Farmers) ಎಲ್ಲಿ ಬೇಕಿದ್ದರೂ ತಮ್ಮ ಬೆಳೆಗಳನ್ನು ಮಾರಾಟ ಮಾಡಬಹುದಾಗಿದೆ. ಮಲ್ಟಿನ್ಯಾಶನಲ್ ಕಂಪನಿಗಳು ಬರುವುದರಿಂದ ಯಾವುದೇ ಸಮಸ್ಯೆಯಾಗದು. ಅವರೇ ರೈತರ ಹೊಲಗಳಿಗೆ ಬಂದು ನೇರವಾಗಿ ಖರೀದಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.

Trending News