ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ವಿರುದ್ಧ Pay Mayor ಅಭಿಯಾನ..!

ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಕಾಂಗ್ರೆಸ್ ನಾಯಕರು ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ.

Written by - Puttaraj K Alur | Last Updated : Sep 28, 2022, 10:57 AM IST
  • ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ವಿರುದ್ಧ Pay Mayor ಅಭಿಯಾನ
  • ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಪೇ ಮೇಯರ್ ಅಭಿಯಾನ
  • ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ 1.5 ಕೋಟಿ ರೂ. ದುಂದುವೆಚ್ಚ ಮಾಡಿದ್ದಕ್ಕೆ ಆಕ್ರೋಶ
ಹುಬ್ಬಳ್ಳಿ-ಧಾರವಾಡ ಪಾಲಿಕೆ ಮೇಯರ್ ವಿರುದ್ಧ Pay Mayor ಅಭಿಯಾನ..!   title=
Pay Mayor ಅಭಿಯಾನ

ಹುಬ್ಬಳ್ಳಿ: ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ಹಮ್ಮಿಕೊಂಡಿದ್ದ ‘PayCM’ ಅಭಿಯಾನದ ಸಾಕಷ್ಟು ಸದ್ದು ಮಾಡಿತ್ತು. ಇದಾದ ಬಳಿಕ ಇದೇ ರೀತಿಯ ಹಲವು ಅಭಿಯಾನಗಳು ನಡೆದು ರಾಜ್ಯದ ಜನರ ಗಮನ ಸೆಳೆದಿದ್ದವು. ಇದೀಗ ಹುಬ್ಬಳ್ಳಿಯಲ್ಲೂ ಪೇ ಮೇಯರ್ ಅಭಿಯಾನ ಶುರುವಾಗಿದೆ. Pay Mayor ಅಭಿಯಾನದ ಪೋಸ್ಟರ್‍ಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ಕಾಂಗ್ರೆಸ್ ನಾಯಕರು ಪೇ ಮೇಯರ್ ಅಭಿಯಾನ ಆರಂಭಿಸಿದ್ದಾರೆ. ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ರೂ. ದುಂದು ವೆಚ್ಚ ಮಾಡಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಲಾಗುತ್ತಿದೆ. ಪೆಂಡಾಲ್ ಹಾಕಿದ ನಂತರ ಕೊಟೇಶನ್ ಕೇಳಿ ಹುಬ್ಬಳ್ಳಿಯ ಮಾನ ಕಳೆದ ನೀವು ತಕ್ಷಣ ಲೆಕ್ಕ ಕೊಡಿ ಇಲ್ಲವೇ ರಾಜೀನಾಮೆ ನೀಡಿ ಅಂತಾ ಆಗ್ರಹಿಸಲಾಗಿದೆ.   

ಇದನ್ನೂ ಓದಿ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: ಪುತ್ರನ ಅಂಗಾಂಗ ದಾನ ಮಾಡಲು ಮುಂದಾದ ಪೋಷಕರು..

ಹುಬ್ಬಳ್ಳಿ-ಧಾರವಾಡ ಮಾಹಾನಗರ ಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ವಿರುದ್ಧ ನಡೆಸುತ್ತಿರುವ ಪೇ ಮೇಯರ್ ಅಭಿಯಾನದ ಪೋಸ್ಟರ್‍ಗಳು ಎಲ್ಲಾ ಸಾಮಾಜಿಕ ಮಾಧ್ಯಮಗಳಲ್ಲೂ ವೈರಲ್ ಆಗಿದ್ದು, ಭ್ರಷ್ಟ ವ್ಯವಸ್ಥೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.   

ಇತ್ತಿಚೇಗಷ್ಟೇ ಮಂಡ್ಯ ಜಿಲ್ಲೆಯ ರೈತರು PAY FARMER ಅಭಿಯಾನ ನಡೆಸಿದ್ದರು. ಮಂಡ್ಯದ ಸಂಜಯ್ ವೃತ್ತದಲ್ಲಿ ಅಭಿಯಾನ ಹಮ್ಮಿಕೊಂಡಿದ್ದ ರೈತರು 1 ಟನ್ ಕಬ್ಬಿಗೆ 4,500 ರೂ‌. ನಿಗದಿ ಮಾಡುವಂತೆ ಒತ್ತಾಯಿಸಿದ್ದರು. ನಮ್ಮ ಬೇಡಿಕೆ ಈಡೇರಿಸದಿದ್ದರೆ ದಸರಾದಲ್ಲಿ ಹೆದ್ದಾರಿ ತಡೆದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: ಪಿಎಫ್ಐ ನಿಷೇಧ: ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News