ಮತದಾನದ ಮೂಲಕ ಜನರೇ ಕಾಂಗ್ರೆಸ್ ಕಪಾಳಕ್ಕೆ ಹೊಡೆಯುತ್ತಾರೆ:ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎನ್ನುವುದನ್ನು ಎಂದು ಬಹಿರಂಗಪಡಿಸಲಿ ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

Written by - Ranjitha R K | Last Updated : Mar 26, 2024, 11:41 AM IST
  • ಶಿವರಾಜ್ ತಂಗಡಗಿ ನೀಡಿರುವ ಹೇಳಿಕೆ ಬಗ್ಗೆ ಬೊಮ್ಮಾಯಿ ಆಕ್ರೋಶ
  • ಜನರೇ ಪರೋಕ್ಷವಾಗಿ ಕಾಂಗ್ರೆಸ್ ಕಪಾಳಕ್ಕೆ ಹೊಡೆಯುತ್ತಾರೆ -ಬೊಮ್ಮಾಯಿ
  • ರಾಜ್ಯದಲ್ಲಿನ ಭಿನ್ನಮತ ಶಮನ ಆಗುತ್ತಿದೆ
ಮತದಾನದ ಮೂಲಕ ಜನರೇ ಕಾಂಗ್ರೆಸ್ ಕಪಾಳಕ್ಕೆ  ಹೊಡೆಯುತ್ತಾರೆ:ಬಸವರಾಜ ಬೊಮ್ಮಾಯಿ title=

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸವಾಲು ಹಾಕಿದ್ದಾರೆ. ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎನ್ನುವುದನ್ನು ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದ್ದಾರೆ. 

ಮೋದಿ ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ್  ತಂಗಡಗಿ ನೀಡಿರುವ ಹೇಳಿಕೆ ಬಗ್ಗೆ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಅಲ್ಲದೆ, ಇನ್ನು ಸ್ವಲ್ಪ ದಿನ ತಾಳಿದರೆ,ಮತಗಳ ಮೂಲಕ ಜನರೇ  ಪರೋಕ್ಷವಾಗಿ ಕಾಂಗ್ರೆಸ್ ಕಪಾಳಕ್ಕೆ ಹೊಡೆಯುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ವಾತಾವರಣ ಉತ್ತಮವಾಗಿದೆ.ಎಲ್ಲಾ ಕಡೆ ಮೋದಿ ಪರ ಅಲೆ ಇದೆ. ರಾಜ್ಯದಲ್ಲಿನ ಭಿನ್ನಮತ ಶಮನ ಆಗುತ್ತಿದೆ ಎಂದು ಹೇಳಿದ್ದಾರೆ.  

ಇದನ್ನೂ ಓದಿ : ಲೋಕಸಭಾ ಚುನಾವಣೆ ಸಂಬಂಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಜೊತೆ ಸಭೆ

ಪ್ರಚಾರಕ್ಕೆ ಸೆಲೆಬ್ರಿಟಿಗಳು : 
ಲೋಕಸಭೆ ಚುನಾವಣಾ ಪ್ರಚಾರಕ್ಕೆ ರಾಷ್ಟ್ರೀಯ ನಾಯಕರು ಎಲ್ಲಾ ಕಡೆ  ಬರುತ್ತಾರೆ. ರಾಷ್ಟ್ರೀಯ ನಾಯಕರ ಜೊತೆ ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ.ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಪ್ರಚಾರ ಪ್ರವಾಸದ ನಿರ್ಧಾರ ಆಗುತ್ತದೆ. ಧಾರವಾಡ ಹಾಗೂ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ. ನಮ್ಮ ಕ್ಷೇತ್ರಕ್ಕೆ ಯಡಿಯೂರಪ್ಪ, ವಿಜಯೇಂದ್ರ ಸೇರಿ ಎಲ್ಲರೂ ಪ್ರಚಾರಕ್ಕೆ ಬರುತ್ತಾರೆ ಎಂದು ಹೇಳಿದ್ದಾರೆ. 

ರೆಡ್ಡಿ ಬಲ :
ಮಾಜಿ ಸಚಿವ ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರುವುದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ. ಇನ್ನು ಬಿಜೆಪಿಗೆ ಬಂದರೆ ಎಲ್ಲರೂ ಶುದ್ಧವಾಗುತ್ತಾರೆ ಅನ್ನುವ ಸಚಿವ ಸಂತೋಷ್ ಲಾಡ್  ಬಗ್ಗೆ ಪ್ರತಿಕ್ರಿಯಿಸಿದ ಅವರು,   ಅದು ಅವರ ಅನುಭವದ ಮಾತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ : ಕೊಪ್ಪಳ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಹೈಕಮಾಂಡ್ ಗಮನಕ್ಕೆ ತರಲು ತೀರ್ಮಾನ: ಬಸವರಾಜ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News