ಬೆಂಗಳೂರು: ಸಿಲಿಕಾನ್ ಸಿಟಿಯ ಆಯ್ದ ಸ್ಥಳಗಳಲ್ಲಿ ಮಾತ್ರ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ನಗರ ಪೊಲೀಸರು ಗ್ರೀನ್ ಸಿಗ್ನಲ್ ನೀಡಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ನಗರದ ಪ್ರಮುಖ ಬಸ್ ಹಾಗೂ ರೈಲ್ವೆ ನಿಲ್ದಾಣ ಸೇರಿದಂತೆ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅನುಮತಿ ನೀಡಬಹುದಾಗಿದೆ.
ಇದನ್ನೂ ಓದಿ: ರಾಜಸ್ಥಾನದಲ್ಲಿ ಐಸಿಸ್ ಮಾದರಿ ಹತ್ಯೆ: ಇದು ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪೈಶಾಚಿಕ ಕೃತ್ಯ- ಎಚ್‌ಡಿಕೆ
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿರುವುದರಿಂದ ನಗರದ ಎಲ್ಲಾ ಕಡೆಗಳಲ್ಲಿ ಹೋಟೆಲ್-ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಲು ಕಷ್ಟವಾಗಲಿದೆ. ಜನಸಂದಣಿ ಇಲ್ಲದ ಪ್ರದೇಶಗಳಲ್ಲಿ ಹೋಟೆಲ್ ವಹಿವಾಟಿಗೆ ಅವಕಾಶ ಕೊಟ್ಟರೆ ಲಾ ಆಂಡ್ ಆರ್ಡರ್‌ಗೆ ಸಮಸ್ಯೆಯಾಗಲಿದೆ. ಸೂಕ್ತ ಸಿಬ್ಬಂದಿ ಇಲ್ಲದಿರುವುದು ಅನುಮತಿ ನಿರಾಕರಿಸಲು ಮತ್ತೊಂದು ಕಾರಣವಾಗಿದೆ. ಹೀಗಾಗಿ ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಹೋಟೆಲ್ ನಡೆಸಲು ಅನುಮತಿ ನೀಡಬಹುದಾಗಿದೆ ಎಂದು ಸರ್ಕಾರಕ್ಕೆ ನಗರ ಪೊಲೀಸರು ವರದಿ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್, ನಿರ್ದಿಷ್ಟ ಸ್ಥಳಗಳಲ್ಲಿ ಮಾತ್ರ ಹೋಟೆಲ್ ತೆರೆಯಲು ಅನುಮತಿ ನೀಡಿರುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಪಡೆದಿದ್ದೇನೆ. ಒಂದು ವೇಳೆ ನಿಜವೇ ಆದಲ್ಲಿ ಹೋಟೆಲ್ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಲಿದೆ. ನಮ್ಮ ಪ್ರಮುಖ ಬೇಡಿಕೆಯು ನಗರದ ಎಲ್ಲಾ ಕಡೆಗಳಲ್ಲಿ ದಿನದ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ನಗರ ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡಿತ್ತು. ಆದರೆ ಬಸ್, ರೈಲ್ವೇ ನಿಲ್ದಾಣಗಳ ಬಳಿ ಹೋಟೆಲ್ ನಡೆಸಲು ಸರ್ಕಾರಕ್ಕೆ ಪೊಲೀಸರು ವರದಿ ಸಲ್ಲಿಸಿರುವುದು ಸರಿಯಲ್ಲ.
ನೆರೆಯ ತಮಿಳುನಾಡು, ಆಂಧ್ರ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅಲ್ಲಿನ ಸರ್ಕಾರಗಳು ಅನುಮತಿ ನೀಡಿವೆ. ಅದೇ ಮಾದರಿಯಲ್ಲಿ ಬೆಂಗಳೂರಿನಲ್ಲಿಯೂ ಅನುಮತಿ ನೀಡಬೇಕು. ಅನುಮತಿ ನೀಡುವ ಕುರಿತಂತೆ ಮುಂದಿನ ವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ಬೇಡಿಕೆ ಇಡಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: ಹೆಲ್ಮೆಟ್ ಹಾಕದೇ ಬೈಕ್ ಬಳಸಿ ರೀಲ್ಸ್: ಟಿಕ್‌ಟಾಕ್ ಸ್ಟಾರ್‌ಗೆ ಬಿತ್ತು ಭಾರಿ ದಂಡ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.