ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದಲ್ಲಿ ಜೈಲಲ್ಲಿ ಇರುವ ಆರೋಪಿ ಮೊಬೈಲ್’ನಲ್ಲಿ ಇದ್ದ ಫೋಟೋ ಹರಿಬಿಟ್ಟವರು ಯಾರು? ರಾಜ್ಯ ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಆರೋಪಿ ಫಯಾಜ್ ಪೊಲೀಸ್ ಕಸ್ಟಡಿಯಲ್ಲಿರುವಾಗ ಯಾರು ಹೇಗೆ ಫೋಟೋ ಲೀಕ್ ಮಾಡಲು ಸಾಧ್ಯ? ಸರ್ಕಾರವೇ ಇದನ್ನು ಮಾಡಿಸಿದೆ ಎಂದು ಆರೋಪಿಸಿದರು.
ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಲಿ:
ನೇಹಾ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಲಿಲ್ಲ. ನಿರಂಜನ್ ಕುಟುಂಬದ ಬೇಡಿಕೆಯಂತೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಮತ್ತೊಂದು ಹುಡುಗಿ ಮೇಲೆ ಹಲ್ಲೆ: ನೇಹಾ ಹತ್ಯೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಹುಡುಗಿ ಮೇಲೆ ಹಲ್ಲೆ ನಡೆದಿದೆ. ಮತಾಂತರಕ್ಕೆ ಒಪ್ಪದಿದ್ದಾಗ ಯುವತಿಯನ್ನು ಮನಬಂದಂತೆ ಥಳಿಸಿದ್ದಾರೆ. ಹಿಂದೂ ನೆಲೆಗಟ್ಟಿನ, ಹಿಂದೂ ಸಮಾಜ-ಸಂಘಟನೆ ಗಟ್ಟಿಯಾಗಿರುವ ಹುಬ್ಬಳ್ಳಿ ನೆಲದಲ್ಲೇ ಹೀಗಾಗಿರುವಾಗ ಇನ್ನು ರಾಜ್ಯದ ಬೇರೆಡೆ ಸ್ಥಿತಿ ಏನಾಗಿರಬೇಡ? ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಾಗಮಂಗಲದಲ್ಲಿ ದರ್ಶನ್ ಅದ್ದೂರಿ ರೋಡ್ ಶೋ :ಸ್ಟಾರ್ ಚಂದ್ರು ಪರ ಮತಬೇಟೆ
ತುಷ್ಟೀಕರಣ ಮಾಡುವವರನ್ನು ಮೊದಲು ಅಧಿಕಾರದಿಂದ ಕಿತ್ತು ಹಾಕಬೇಕು. ಇಲ್ಲದಿದ್ದರೆ ನಮ್ಮ ಮನೆಗಳಲ್ಲೂ ನಾವು ಹಿಂದೂ ಧರ್ಮ-ಸಂಸ್ಕೃತಿ ಉಳಿಸಿಕೊಳ್ಳುವುದು ಕಷ್ಟವಾಗುತ್ತದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.