ಜ.13 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ 1 ರಿಂದ 8 ರ ವರೆಗಿನ ಭೌತಿಕ ತರಗತಿಗಳು ಬಂದ್

 ಜ.13 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ 1 ರಿಂದ 8 ರ ವರೆಗಿನ ಭೌತಿಕ ತರಗತಿಗಳು ಬಂದ್ ಇರಲಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ.

Last Updated : Jan 12, 2022, 07:21 PM IST
  • ಅವರು ಆದೇಶದಲ್ಲಿ ತಿಳಿಸಿರುವಂತೆ, ರಾಜ್ಯದಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯ ಕಾರ್ಯದರ್ಶಿಗಳು ಹಲವಾರು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.
ಜ.13 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ 1 ರಿಂದ 8 ರ ವರೆಗಿನ ಭೌತಿಕ ತರಗತಿಗಳು ಬಂದ್  title=
file photo

ಬೆಂಗಳೂರು: ಜ.13 ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ 1 ರಿಂದ 8 ರ ವರೆಗಿನ ಭೌತಿಕ ತರಗತಿಗಳು ಬಂದ್ ಇರಲಿವೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶಿಸಿದ್ದಾರೆ.

ಧಾರವಾಡ ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ನಾಳೆ ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು (ಜ.12) ಆದೇಶ ಹೊರಡಿಸಿದ್ದಾರೆ. 

ಇದನ್ನೂ ಓದಿ: Whatsapp: ವಾಟ್ಸಾಪ್‌ನಲ್ಲಿ ಬರಲಿದೆ ಮನಮೋಹಕ ಫೀಚರ್!

ಅವರು ಆದೇಶದಲ್ಲಿ ತಿಳಿಸಿರುವಂತೆ, ರಾಜ್ಯದಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯ ಕಾರ್ಯದರ್ಶಿಗಳು ಹಲವಾರು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಜ.11 ರಂದು (ನಿನ್ನೆ ದಿನ) ಧಾರವಾಡ ತಾಲೂಕಿನ ಪಾಸಿಟಿವಿಟಿ ದರ ಶೇ.5.38 ಹಾಗೂ ಹುಬ್ಬಳ್ಳಿ ತಾಲೂಕಿನಲ್ಲಿ ಪಾಸಿಟಿವಿಟಿ ರೇಟ್ ಶೇ.11.76 ರಷ್ಟು ಇದೆ. ಹಾಗೂ ಶಾಲೆಗಳಲ್ಲಿ ಕೋವಿಡ್-19 ಕ್ಲಸ್ಟರ್ ಪ್ರಕರಣಗಳು ಕಂಡು ಬಂದಿವೆ.ಈ ಕುರಿತು ಜ.11 ರಂದು ಜರುಗಿದ ಜಿಲ್ಲಾಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ವಿವರವಾಗಿ ಚರ್ಚಿಸಿ ಕೋವಿಡ್-19 ವೈರಾಣು ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ಹಾಗೂ ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ: Jio ತಂದಿದೆ ಅಗ್ಗದ ಯೋಜನೆ! ಈ ಪ್ಲಾನ್ ಮೂಲಕ ಪಡೆಯಿರಿ 2GB ಡೇಟಾ, 336 ದಿನಗಳ ಅನಿಯಮಿತ ಕರೆ

ಅದರಂತೆ ನಾಳೆ (ಜ.13) ಯಿಂದ ಮುಂದಿನ ಆದೇಶದವರೆಗೆ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ತೆರೆಯದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಆದೇಶಿಸಿದ್ದಾರೆ.ಹಾಗೂ ಈ ಅವಧಿಯಲ್ಲಿ ಆನ್‍ಲೈನ್ ಮುಖಾಂತರ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News