ದೇಶದಲ್ಲಿ ಪ್ರಧಾನಿ ಮೋದಿ ಹಿಟ್ಲರ್ ರೀತಿ ಆಡಳಿತ ನಡೆಸುತ್ತಿದ್ದಾರೆ: ದಿನೇಶ್ ಗುಂಡೂರಾವ್

ಪ್ರಧಾನಿ ಮೋದಿ ಅವರು ತೈಲ ಬೆಲೆ ಹೆಚ್ಚಿಸಿ ಜನರ ಮೇಲೆ ಮತ್ತಷ್ಟು ಹೊರೆ ಹೇರುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Last Updated : Sep 10, 2018, 07:50 PM IST
ದೇಶದಲ್ಲಿ ಪ್ರಧಾನಿ ಮೋದಿ ಹಿಟ್ಲರ್ ರೀತಿ ಆಡಳಿತ ನಡೆಸುತ್ತಿದ್ದಾರೆ: ದಿನೇಶ್ ಗುಂಡೂರಾವ್ title=

ಬೆಂಗಳೂರು: ದೇಶದ ಆಡಳಿತ ನಡೆಸುತ್ತಿರುವ ಎನ್ದಿಎ ಸರ್ಕಾರದ ರೂವಾರಿ ಪ್ರಧಾನಿ ನರೇಂದ್ರ ಮೋದಿ ಅವರು ತಾನು ಮಾಡಿದ್ದೆ ಸರಿ ಎಂಬ ಭ್ರಮೆಯಲ್ಲಿದ್ದು, ಸರ್ವಾಧಿಕಾರಿ ಹಿಟ್ಲರ್ ಮಾದರಿಯ ಆಡಳಿತ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ತೈಲ ಬೆಲೆ ಏರಿಕೆ ವಿರುದ್ಧ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಏಕಪಕ್ಷೀಯವಾಗಿ ನೋಟು ಅಮಾನ್ಯ ಮಾಡಿ ಜನರನ್ನು ಸಂಕಷ್ಟಕ್ಕೆ ಗುರಿ ಮಾಡಿದರು. ಇದೀಗ ತೈಲ ಬೆಲೆ ಹೆಚ್ಚಿಸಿ ಜನರ ಮೇಲೆ ಮತ್ತಷ್ಟು ಹೊರೆ ಹೇರುತ್ತಿದ್ದಾರೆ ಎಂದು ದೂರಿದರು. 

ಮುಂದುವರೆದು ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದ ಜನತೆ ತಕ್ಕ ಪಾಠ ಕಲಿಸಿದೆ. ಸಮಾಜದಲ್ಲಿ ದ್ವೇಷ, ಕೋಮು ಸೌಹಾರ್ದತೆಯನ್ನು ಕೆಡಿಸಲು ಮುಂದಾಗಿರುವ ಬಿಜೆಪಿಗೆ ಮತ್ತೊಂದು ಅವಧಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಬಿಜೆಪಿ ತೊಲಗಿಸಿ ಎಂದು ದಿನೇಶ್ ಗುಂಡೂರಾವ್ ಜನತೆಗೆ ಈ ಸಂದರ್ಭದಲ್ಲಿ ಕರೆ ನೀಡಿದರು.

Trending News